Latest Videos

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳಿ: ಶಾಸಕ ಗಣೇಶ್‌ ಪ್ರಸಾದ್‌

By Kannadaprabha NewsFirst Published Jun 15, 2023, 9:43 PM IST
Highlights

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಕ್ಷೇತ್ರದ ಜನರು ಈ ಯೋಜನೆಗಳನ್ನು ಸದ್ಭಳಕೆ ಮಾಡಿಕೊಂಡು ಆರ್ಥಿಕ ಪ್ರಗತಿಯನ್ನು ಹೊಂದಬೇಕು ಎಂದು ಶಾಸಕ ಎಚ್‌.ಎಂ.ಗಣೇಶ್‌ ಪ್ರಸಾದ್‌ ತಿಳಿಸಿದರು. 

ಗುಂಡ್ಲುಪೇಟೆ (ಜೂ.15): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಕ್ಷೇತ್ರದ ಜನರು ಈ ಯೋಜನೆಗಳನ್ನು ಸದ್ಭಳಕೆ ಮಾಡಿಕೊಂಡು ಆರ್ಥಿಕ ಪ್ರಗತಿಯನ್ನು ಹೊಂದಬೇಕು ಎಂದು ಶಾಸಕ ಎಚ್‌.ಎಂ.ಗಣೇಶ್‌ ಪ್ರಸಾದ್‌ ತಿಳಿಸಿದರು. ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರದ ಹಳೇಪುರ ಗ್ರಾಮದಲ್ಲಿ ಅಂಬೇಡ್ಕರ್‌ ಭವನದ ಗುದ್ದಲಿಪೂಜೆ ಹಾಗೂ ನೂತನ ಶಾಸಕರಿಗೆ ಅಭಿನಂದನಾ ಸಮಾರಂಭದ ಅಧ್ಯಕ್ಷತೆವಹಿಸಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ನಮ್ಮದು ನುಡಿದಂತೆ ನಡೆಯುವ ಸರ್ಕಾರವಾಗಿದೆ. ಕಳೆದ ಅವಧಿಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ ನೀಡಿ, ಜಿಲ್ಲೆಯ ಅಭಿವೃದ್ಧಿಗೆ ಕಾರಣಕರ್ತರಾಗಿದ್ದರು. 160 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿ, ಹಲವು ಭಾಗ್ಯಗಳನ್ನು ನೀಡುವ ಮೂಲಕ ಜನಮಾನಸದಲ್ಲಿ ಉಳಿಯುವಂತಹ ಜನಪರ ಯೋಜನೆಗಳನ್ನು ಜಾರಿ ಮಾಡಿದ್ದರು. ಅದರ ಫಲವಾಗಿ ಇಂದು ರಾಜ್ಯದಲ್ಲಿ 134 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ, ಕಾಂಗ್ರೆಸ್‌ ಸರ್ಕಾರ ಜಾರಿಯಾಗಿದೆ ಎಂದರು. ಐದು ಗ್ಯಾರಂಟಿಗಳಿಗೆ ಅನುಮೋದನೆ ನೀಡಿದ್ದು, ಈಗಾಗಲೇ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದಾರೆ. 

ಕಾಂಗ್ರೆಸ್‌ಗೆ ಮತ ನೀಡಿರುವುದು ಕೆಲಸಕ್ಕೋ, ಹೈಕಮಾಂಡ್‌ ಗುಲಾಮಗಿರಿಗೋ?: ಎಚ್‌ಡಿಕೆ

ಜುಲೈ 1ರಿಂದ 10 ಕೆಜಿ ಉಚಿತ ಜಾರಿಯಾಗಿದೆ. ವರಲಕ್ಷ್ಮಿ ಹಬ್ಬಕ್ಕೆ ಗೃಹ ಲಕ್ಷಿ ಯೋಜನೆಯಡಿ ಮನೆ ಯಜಮಾನಿ ಖಾತೆಗೆ 2000 ರು. ನೀಡಲಾಗುತ್ತಿದೆ. ಯುವ ನಿಧಿ ಹಾಗೂ ಉಚಿತ ವಿದ್ಯುತ್‌ ಯೋಜನೆಯನ್ನು ಆಗಸ್ಟ್‌ 15ರೊಳಗೆ ಜಾರಿ ಮಾಡಲು ನಮ್ಮ ಸರ್ಕಾರ ಬದ್ಧ ವಾಗಿದೆ. ಇದನ್ನು ಕ್ಷೇತ್ರದ ಜನರು ಸದ್ಭಳಕೆ ಮಾಡಿಕೊಳ್ಳಬೇಕು ಎಂದರು. ಮುಂಬರುವ ಲೋಕಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ನಮ್ಮ ನೆಚ್ಚಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಕೈ ಬಲಪಡಿಸಬೇಕು ಎಂದರು.

ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಯನ್ನು ಬೆಂಬಲಿಸಿ ಜನರು ಮತ್ತೆ ಕಾಂಗ್ರೆಸ್‌ ಪಕ್ಷಕ್ಕೆ ಅಧಿಕಾರ ನೀಡಿದ್ದಾರೆ. ಕ್ಷೇತ್ರದಲ್ಲಿಯೂ ಬಿಜೆಪಿ ವಿರುದ್ಧ ಭಾರಿ ಆಲೆ ಇತ್ತು. ಇದು ಗಣೇಶ್‌ ಪ್ರಸಾದ್‌ ಅವರು 37 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಲು ಸಾಧ್ಯವಾಗಿದೆ. ನಿಮ್ಮೆಲ್ಲರ ಪ್ರೀತಿ, ಸಹಕಾರ ಇದೇ ರೀತಿ ಮುಂದುವರಿಯಲಿ ಎಂದರು. ಮುಂದಿನ ಚುನಾವಣೆಯಲ್ಲಿಯು ನಿಮ್ಮೆಲ್ಲರ ಒಗ್ಗಟ್ಟಿನಿಂದ ಕಾಂಗ್ರೆಸ್‌ ಪಕ್ಷದ ಭದ್ರಕೋಟೆ ಎಂಬುದನ್ನು ಮಗದೊಮ್ಮೆ ಸಾಬೀತು ಪಡಿಸಿ, ಬಿಜೆಪಿಗೆ ತಕ್ಕಪಾಠ ಕಲಿಸಬೇಕು. ಇಂದು ಹಳೇಪುರ ಗ್ರಾಮಸ್ಥರು ಎಲ್ಲಾ ನೂತನ ಶಾಸಕರಿಗೆ ಅಭಿನಂದನೆ ಮಾಡುತ್ತಿರುವುದು ಸಂತಸ ತಂದಿದೆ. ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವುದಾಗಿ ತಿಳಿಸಿದರು.

ಸರ್ಕಾರ ಬಂದು 20 ದಿನ ಆಗಿಲ್ಲ, ಯಾವ ಕಮಿಷನ್‌ ತೆಗೆದುಕೊಳ್ಳುವುದು: ಎಚ್‌ಡಿಕೆ ವಿರುದ್ಧ ಸಚಿವ ವೆಂಕಟೇಶ್‌ ಕಿಡಿ

ಕಾರ್ಯಕ್ರಮದಲ್ಲಿ ಶಾಸಕರಾದ ಅನಿಲ್‌ಚಿಕ್ಕಮಾದು, ದರ್ಶನ ಆರ್‌. ಧ್ರುವನಾರಾಯಣ್‌, ಮಾಜಿ ಶಾಸಕ ಎಂ.ಕೆ. ಸೋಮಶೇಖರ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪಿ.ಮರಿಸ್ವಾಮಿ, ಬ್ಲಾಕ್‌ ಅಧ್ಯಕ್ಷರಾದ ಮುನಿರಾಜು, ಎಚ್‌.ಎಸ್‌. ಬಸವರಾಜು, ತಾಪಂ. ಮಾಜಿ ಸದಸ್ಯ ಎಚ್‌.ಎಸ್‌. ಬಸವರಾಜು, ಜಿ.ಪಂ. ಮಾಜಿ ಸದಸ್ಯರಾದ ಕೆರೆಹಳ್ಳಿ ನವೀನ್‌, ಗುರುಸಿದ್ದೇಗೌಡ, ತಾ.ಪಂ. ಮಾಜಿ ಸದಸ್ಯ ರವಿಕುಮಾರ್‌, ಎಪಿಎಂಸಿ ನಿರ್ದೇಶಕ ಮುತ್ತಿಗೆ ಗುರುಸ್ವಾಮಿ, ಅರಣ್ಯ ಇಲಾಖೆಯ ಮಧುಸೂಧನ್‌, ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ಅಧ್ಯಕ್ಷ ಬೆಳ್ಳೇಗೌಡ, ಮುಖಂಡರಾದ ಬಸವರಾಜು, ಗುರು, ಮಾದೇಶ್‌, ಗ್ರಾ.ಪಂ. ಉಪಾಧ್ಯಕ್ಷೆ ನಾಗಮಣಿ, ಸದಸ್ಯರಾದ ಬಸವಣ್ಣ, ಎಂ.ಮಂಜುನಾಥ್‌, ಅಂಬೇಡ್ಕರ್‌ ಯುವಕ ಅಧ್ಯಕ್ಷ ಮಹೇಶ್‌, ಲೋಕೇಶ್‌ ಕನಕ ಯುವಕ ಸಂಘದ ಅಧ್ಯಕ್ಷ ವಿಜಯಕುಮಾರ್‌, ಮಲ್ಲೇಶ್‌, ಶಿವಮಲ್ಲು, ಸಾಗರ್‌, ಸಿದ್ದೇಶ್‌, ಬಸವಣ್ಣ, ಕನಕ ಯುವಕರ ಸಂಘ, ಬಸವೇಶ್ವರ ಯುವಕರ ಸಂಘ, ಅಂಬೇಡ್ಕರ್‌ ಯುವಕರ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

click me!