
ಬೆಂಗಳೂರು(ಮಾ.08): ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೊಸ ಮತದಾರರ ಜೊತೆಗೇ ಹೊಸ ನಾಯಕತ್ವ ಸೃಷ್ಟಿ ಮಾಡುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಯುವ ಮೋರ್ಚಾ ವತಿಯಿಂದ 'ನಮೋ ಯುವ ಭಾರತ ಫೆಲೋಶಿಫ್' ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.
ಗುರುವಾರ ಪಕ್ಷದ ಕಚೇರಿಯಲ್ಲಿ ಚಾಲನೆ ನೀಡಿ ಮಾತನಾಡಿದ ಯುವ ಮೋರ್ಚಾ ರಾಜ್ಯಾಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು, ಮುಂದಿನ ಒಂದೂವರೆ ತಿಂಗಳ ಕಾಲ ನಮೋ ಯುವ ಭಾರತ ಫೆಲೋಶಿಫ್ ನಡೆಯಲಿದೆ. ಯುವಜನತೆ ಇಂದು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ತಮ್ಮನ್ನು ತೊಡಗಿಸಿಕೊಂಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು, ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಯುವಜನತೆಗೆ ರೀಲ್ಸ್ (ಕಿರುಚಿತ್ರ) ಮಾಡುವ ಸ್ಪರ್ಧೆಯನ್ನು ಏರ್ಪಡಿಸಲಾಗುತ್ತಿದೆ. 10 ಟಾಪ್ ರೀಲ್ಸ್ ಗಳಿಗೆ ನರೇಂದ್ರ ಮೋದಿ ಅವರ ಭೇಟಿಯ ಅವಕಾಶ ಲಭಿಸಲಿದೆ ಎಂದು ತಿಳಿಸಿದರು.
ಎಲ್ಲ ರೀಲ್ಸ್ ಗಳನ್ನು 'ಬಿಜೆವೈಎಂ ಕರ್ನಾಟಕ' ಪೇಜಿನಲ್ಲಿ ಪೋಸ್ಟ್ ಮಾಡುತ್ತೇವೆ. ಉತ್ತಮವಾದ ಟಾಪ್ 3 ರೀಲ್ಸ್ ಗಳನ್ನು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತಿತರ ಗಣ್ಯರ ಪೇಜ್‌ಗಳಲ್ಲಿ ಹಂಚಿಕೊಳ್ಳಲಾಗುವುದು ಎಂದರು. ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂದೀಪ್ ರವಿ ಮಾತನಾಡಿ, 'ರಿಷ್ಠ ಲೈಕ್ ಪಡೆಯುವ 10 ರೀಲ್‌ಗಳನ್ನು ಆಯ್ಕೆ ಮಾಡುತ್ತೇವೆ ಎಂದು ವಿವರಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.