
ಬೆಂಗಳೂರು (ಫೆ.10): ಸದಾಶಿವನಗರದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಭಾನುವಾರ ಭೇಟಿ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಖರ್ಗೆ ಅವರ ಜತೆಗೆ ಸುಮಾರು ಮುಕ್ಕಾಲು ಗಂಟೆ ಚರ್ಚೆ ನಡೆಸಿದರು. ಪರಮೇಶ್ವರ್ ಅವರ ಈ ಹಠಾತ್ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಬೆಳಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಜತೆ ಒಂದೇ ಕಾರಿನಲ್ಲಿ ಆಗಮಿಸಿದ ಪರಮೇಶ್ವರ್ ಅವರು ಎಐಸಿಸಿ ಅಧ್ಯಕ್ಷರ ಜತೆಗೆ ಮಾತುಕತೆ ನಡೆಸಿದರು.
ದಲಿತರ ಪ್ರತ್ಯೇಕ ಸಭೆಗೆ ಹೈಕಮಾಂಡ್ ಅನುಮತಿ ನಿರಾಕರಿಸಿರುವ ವಿಚಾರವಾಗಿ ದಲಿತ ಸಚಿವರೆಲ್ಲ ದೆಹಲಿಯಲ್ಲಿ ವರಿಷ್ಠರ ಭೇಟಿಗೆ ತೀರ್ಮಾನಿಸಿರುವ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಪರಮೇಶ್ವರ್ ನಡೆ ಕುತೂಹಲಕ್ಕೆ ಕಾರಣವಾಗಿದೆ. ಖರ್ಗೆ ನಿವಾಸದಿಂದ ಹೊರ ಬಂದು ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಇದೊಂದು ಸೌಜನ್ಯದ ಭೇಟಿ ಅಷ್ಟೇ. ನಾವು ಒಂದೇ ಕುಟುಂಬ, ಹೀಗಾಗಿ ಸಹಜವಾಗಿ ಭೇಟಿ ಮಾಡಿದ್ದೇನೆ. ಯಾವುದೇ ರಾಜಕೀಯ ಉದ್ದೇಶ ಇರಲಿಲ್ಲ, ರಾಜಕೀಯ ಚರ್ಚೆಯೂ ಇಲ್ಲ ಎಂದು ಹೇಳಿದರು.
ನರೇಗಾ ಅನುದಾನ, ಮಾನವದಿನ ಹೆಚ್ಚಿಸಬೇಕು: ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿ, ಸರ್ಕಾರಿ ಆಸ್ತಿಗಳ ಸೃಜನೆಯೊಂದಿಗೆ ಜನರ ಜೀವನ ರೂಪಿಸುವ ನರೇಗಾ ಯೋಜನೆ ಅನುದಾನ ಹೆಚ್ಚಳ ಮಾಡುವುದರ ಜೊತೆಗೆ ಮಾನವ ದಿನಗಳನ್ನು 100ರಿಂದ 150ಕ್ಕೆ ಹೆಚ್ಚಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಬುಧವಾರ ನಗರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಏರ್ಪಡಿಸಿದ್ದ ನರೇಗಾ ಹಬ್ಬ ಉದ್ಘಾಟಿಸಿ ಮಾತನಾಡಿದ ಸಚಿವರು, ನರೇಗಾ ಯೋಜನೆ ಗ್ರಾಮಾಂತರ ಭಾಗದ ಮೂಲಸೌಕರ್ಯ ಅಭಿವೃದ್ಧಿ ಜೊತೆಗೆ ಬಡ ಜನರ ಜೀವನ ರೂಪಿಸುವ ಯೋಜನೆಯಾಗಿದೆ.
ನನ್ನ, ಜನಾರ್ದನ ರೆಡ್ಡಿ ಸಂಬಂಧ ಅಂತ್ಯ, ಅದು ಎಂದೂ ಸರಿಹೋಗಲ್ಲ: ಶ್ರೀರಾಮುಲು
ಶೇ.54ರಷ್ಟು ಮಹಿಳೆಯರು ಇದರ ಫಲಾನುಭವಿಗಳಾಗಿದ್ದಾರೆ. ಒಟ್ಟು 17 ಲಕ್ಷ ಸರ್ಕಾರಿ ಆಸ್ತಿಗಳ ಸೃಜನೆಯಾಗಿದ್ದು, 55 ಲಕ್ಷ ಜನರಿಗೆ ಅನುಕೂಲ ಕಲ್ಪಿಸಿದೆ. ಈ ಯೋಜನೆಗೆ ಎನ್‌ಡಿಎ ಸರ್ಕಾರದಲ್ಲಿ 1.12 ಲಕ್ಷ ಕೋಟಿ ರು. ಅನುದಾನ ನೀಡಲಾಗುತ್ತಿತ್ತು. ಈಗ ಅದು 86,000 ಲಕ್ಷ ಕೋಟಿ ರು.ಗೆ ಇಳಿದಿದೆ. ಉದ್ಯೋಗ ನೀಡುವ ಯೋಜನೆಗೆ ಅನುದಾನ ಕಡಿಮೆ ಮಾಡಿದರೆ ವಿಕಸಿತ ಭಾರತ ನಿರ್ಮಾಣ ಸಾಧ್ಯವೇ? ಇದೊಂದು ವ್ಯರ್ಥ ಯೋಜನೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಆದರೆ, 11 ವರ್ಷಗಳಾದರೂ ಯೋಜನೆ ಸ್ಥಗಿತಗೊಳಿಸಲು ಸಾಧ್ಯವಾಗಿಲ್ಲ. ಪರ್ಯಾಯ ಯೋಜನೆಯನ್ನೂ ತಂದಿಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.