Breaking: ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ್‌ ಖರ್ಗೆ ಹೆಸರು ಶಿಫಾರಸು ಮಾಡಿದ ಮಮತಾ ಬ್ಯಾನರ್ಜಿ!

By Santosh NaikFirst Published Dec 19, 2023, 6:14 PM IST
Highlights

ಇಂಡಿ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ್‌ ಖರ್ಗೆ ಅವರ ಹೆಸರನ್ನು ಟಿಎಂಸಿ ಅಧಿನಾಯಕಿ ಮಮತಾ ಬ್ಯಾನರ್ಜಿ ಶಿಫಾರಸು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 

ನವದೆಹಲಿ (ಡಿ.19): ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂಡಿ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಿ  ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭಾರತ ಮೈತ್ರಿಕೂಟದ ಸಭೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ಹುದ್ದೆಗೆ ಅಭ್ಯರ್ಥಿಯ ಹೆಸರನ್ನು ಚರ್ಚಿಸಿದ್ದಾರೆ. ಈ ವೇಳೆ ಮಮತಾ ಬ್ಯಾನರ್ಜಿ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುವುದು ಸೂಕ್ತ ಎಂದು ಅಭಿಪ್ರಾಯ ತಿಳಿಸಿದ್ದಾರೆ. ಇನ್ನು ಮಮತಾ ಬ್ಯಾನರ್ಜಿ ಅವರ ಮಾತಿಗೆ ಆಮ್‌ ಆದ್ಮಿ ಪಾರ್ಟಿಯ ಮುಖ್ಯಸ್ಥ ಹಾಗೂ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಕೂಡ ಬೆಂಬಲಿಸಿದ್ದಾರೆ. ಸಂಸದರ ಅಮಾನತು ವಿಚಾರ ಕೂಡ ಸಭೆಯಲ್ಲಿ ಪ್ರಸ್ತಾಪವಾಗಿದೆ. ಈ ವಿಚಾರವಾಗಿ ಪ್ರತಿಪಕ್ಷಗಳು ಒಗ್ಗಟ್ಟಾಗಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ.ಈ ಸಭೆಯಲ್ಲಿ ವಿರೋಧ ಪಕ್ಷದ ನಾಯಕರಲ್ಲಿ ಇವಿಎಂ ಬಗ್ಗೆಯೂ ಚರ್ಚಿಸಲಾಗಿದೆ.

ಭಾರತ ಮೈತ್ರಿಕೂಟದ ನಾಲ್ಕನೇ ಸಭೆ ದೆಹಲಿಯ ಅಶೋಕ ಹೋಟೆಲ್‌ನಲ್ಲಿ ನಡೆದಿದೆ. ಈ ಸಭೆಗೆ ಸೋಮವಾರದಿಂದಲೇ ಹಲವು ವಿರೋಧ ಪಕ್ಷಗಳ ನಾಯಕರು ರಾಜಧಾನಿ ತಲುಪಿದ್ದರು. ಈ ಮೈತ್ರಿಕೂಟದ ಮೊದಲ ಮೂರು ಸಭೆಗಳು ಕ್ರಮವಾಗಿ ಪಾಟ್ನಾ, ಬೆಂಗಳೂರು ಮತ್ತು ಮುಂಬೈನಲ್ಲಿ ನಡೆದವು. ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಜೆಡಿಯು ನಾಯಕ ನಿತೀಶ್ ಕುಮಾರ್, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ದೆಹಲಿ, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸಭೆಯಲ್ಲಿ ಪಾಲ್ಗೊಂಡಿದ್ದರು.

Latest Videos

ಈ 9 ಬೇಡಿಕೆಗಳನ್ನು ದೇಶದ ಜನರ ಮುಂದಿಟ್ಟ ಪ್ರಧಾನಿ ಮೋದಿ! ವಿವರ ಇಲ್ಲಿದೆ..

ಒಟ್ಟು ಸಭೆಯಲ್ಲಿ 28 ಪಕ್ಷಗಳ ನಾಯಕರು ಭಾಗವಹಿಸಿದ್ದರು. ಇಂಡಿ ಒಕ್ಕೂಟ ದೇಶಾದ್ಯಂತ 8-10 ಸಾರ್ವಜನಿಕ ಸಭೆಗಳನ್ನು ನಡೆಸಲಿದೆ. ಜನವರಿ 30 ರಂದು ಇಂಡಿ ಒಕ್ಕೂಟದ ಮೊದಲ ಜಂಟಿ ರಾಲಿ ನಡೆಯಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. 

ದೇಶದಲ್ಲಿ ಇದೇ ಮೊದಲ ಬಾರಿಗೆ 151 ಸಂಸತ್ ಸದಸ್ಯರನ್ನು ಅಮಾನತುಗೊಳಿಸಲಾಗಿದೆ. ನಾವು ಇದರ ವಿರುದ್ಧ ಹೋರಾಡುತ್ತೇವೆ. ಇದು ತಪ್ಪು... ಇದರ ವಿರುದ್ಧ ಹೋರಾಡಲು ನಾವು ಒಗ್ಗಟ್ಟಾಗಿದ್ದೇವೆ. ಸಂಸದರ ಅಮಾನತು ವಿರೋಧಿಸಿ ಡಿಸೆಂಬರ್ 22ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಕೇರಳ ಸಿಎಂ ಗೂಂಡಾ: ಪಿಣರಾಯಿ ಎಷ್ಟು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ತಿಳಿದಿದ್ಯಾ? ಗವರ್ನರ್ ಕಿಡಿ

click me!