ಬ್ರೇಕಿಂಗ್: ಕರ್ನಾಟಕ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್‌ನಿಂದ ಅಚ್ಚರಿ ಅಭ್ಯರ್ಥಿ ಘೋಷಣೆ

Published : Jun 05, 2020, 02:31 PM ISTUpdated : Jun 05, 2020, 05:59 PM IST
ಬ್ರೇಕಿಂಗ್: ಕರ್ನಾಟಕ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್‌ನಿಂದ ಅಚ್ಚರಿ ಅಭ್ಯರ್ಥಿ ಘೋಷಣೆ

ಸಾರಾಂಶ

ಕರ್ನಾಟಕ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.

ಬೆಂಗಳೂರು, (ಜೂನ್.05): ಕರ್ನಾಟಕ ರಾಜ್ಯಸಭಾ ಚುನಾವಣೆ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ಮಲ್ಲಿಕಾರ್ಜುನ ಖರ್ಗೆ ಅವರನ್ನ ಅಂತಿಮಗೊಳಿಸಿದೆ.ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆಯಲಿದ್ದು, ಇದಕ್ಕೆ ಎಐಸಿಸಿ,  ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಭ್ಯರ್ಥಿ ಎಂದು ಕಾಂಗ್ರೆಸ್ ಘೋಷಣೆ ಮಾಡಿದೆ. 

"

ಕರ್ನಾಟಕದಲ್ಲಿ ರಂಗೇರಿದ ರಾಜ್ಯಸಭಾ ಚುನಾವಣೆ: ತೇಲಿಬಂದ ಘಟಾನುಘಟಿ ನಾಯಕರ ಹೆಸರು...!

ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದ ಮಲ್ಲಿಕಾರ್ಜುನ ಖರ್ಗೆ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ವಿರುದ್ಧ ಸೋಲುಕಂಡಿದ್ದರು. ಇದರಿಂದ ಪಕ್ಷಕ್ಕೆ ಭಾರೀ ಮುಜುಗರ ಉಂಟುಮಾಡಿತ್ತು.ಈ ಹಿನ್ನೆಲೆಯಲ್ಲಿ ಇದೀಗ ಹಿರಿಯ ನಾಯಕನಿಗೆ ರಾಜ್ಯಸಭಾ ಟಿಕೆಟ್ ನೀಡಲಾಗಿದೆ.

ಡಿ.ಕುಪೇಂದ್ರ ರೆಡ್ಡಿ (ಜೆಡಿಎಸ್), ಪ್ರಭಾಕರ್ ಕೋರೆ (ಬಿಜೆಪಿ), ರಾಜೀವ್ ಗೌಡ ಎಂ ವಿ ಮತ್ತು ಬಿಕೆ ಹರಿಪ್ರಸಾದ್ ಅವರ ಅವಧಿ ಮುಕ್ತಾಯಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ  ಜೂನ್ 19 ರಂದು ರಾಜ್ಯದ 4 ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಜೂನ್ 9 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ಸದ್ಯ ವಿಧಾನಭೆಯಲ್ಲಿರುವ ಬಲಾಬಲದ ಮೇಲೆ ಬಿಜೆಪಿ 2 ಸ್ಥಾನ ಗೆಲ್ಲಲಿದೆ. ಕಾಂಗ್ರೆಸ್ 1 ಸ್ಥಾನ ಗಳಿಸಲಿದೆ. ಜೆಡಿಎಸ್ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದಾದರೇ ಕಾಂಗ್ರೆಸ್ ನಾಲ್ಕನೇ ಸೀಟ್ ಪಡೆಯುವ ಸಾಧ್ಯತೆಯಿದೆ.

ಬಿಜೆಪಿ ಇನ್ನೂ ತನ್ನ ಅಭ್ಯರ್ಥಿ ಯಾರೆಂದು ನಿರ್ಧರಿಸಿಲ್ಲ, ಕಳೆದ  ಲೋಕಸಭೆ ಚುನಾವಣೆಲ್ಲಿ ಟಿಕೆಟ್ ವಂಚಿತವಾಗಿದ್ದ ದಿವಂಗತ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಹೆಸರು ಕೇಳಿ ಬರುತ್ತಿದೆ.

ತೇಜಸ್ವಿನಿ ಅವರಿಗೆ ನಾಯಕರು ಮತ್ತು ಕಾರ್ಯಕರ್ತರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಸದಾ ಕ್ರಿಯಾಶೀಲವಾಗಿರುವ ಅವರನ್ನು ಮತ್ತಷ್ಟು ಸಕ್ರಿಯಗೊಳಿಸಲು ಅವರನ್ನು ನೇಮಕ ಮಾಡಬೇಕೆಂದು ಕೆಲವರ ಅಭಿಪ್ರಾಯವಾಗಿದೆ ಎಂದು ಮೂಲಗಳು ತಿಳಿಸಿವೆ.

#NewsIn100Seconds: ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್‌

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!