ಮಂಡ್ಯ ಜಿಲ್ಲೆ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರದ ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಸಮಿತಿಯು ಒಮ್ಮತದಿಂದ ನನ್ನನ್ನು ಅಭ್ಯರ್ಥಿಯನ್ನಾಗಿ ಮಾಡಲು ಕೆಪಿಸಿಸಿಗೆ ಶಿಫಾರಸು ಮಾಡಿದ್ದರು. ಹಾಗಾಗಿ ಹೈಕಮಾಂಡ್ ನನ್ನನ್ನು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ. ಅದಕ್ಕೆ ಹೈಕಮಾಂಡ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ಹಾಗೂ ಮಂಡ್ಯ ಜಿಲ್ಲೆ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣಗೌಡ
ಬೆಂಗಳೂರು(ಮಾ.09): ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜನರು ಕಾಂಗ್ರೆಸ್ ಕೈ ಹಿಡಿದ ಮಾದರಿಯಲ್ಲಿಯೇ ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲ್ಲುವಂತೆ ಮಾಡಲಿದ್ದಾರೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣಗೌಡ (ಸ್ಟಾರ್ ಚಂದ್ರು) ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಂಡ್ಯ ಜಿಲ್ಲೆ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರದ ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಸಮಿತಿಯು ಒಮ್ಮತದಿಂದ ನನ್ನನ್ನು ಅಭ್ಯರ್ಥಿಯನ್ನಾಗಿ ಮಾಡಲು ಕೆಪಿಸಿಸಿಗೆ ಶಿಫಾರಸು ಮಾಡಿದ್ದರು. ಹಾಗಾಗಿ ಹೈಕಮಾಂಡ್ ನನ್ನನ್ನು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ. ಅದಕ್ಕೆ ಹೈಕಮಾಂಡ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ಹಾಗೂ ಮಂಡ್ಯ ಜಿಲ್ಲೆ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದಾರೆ.
ದೇವರ ಆಶೀರ್ವಾದವಿದ್ದರೆ ಮಂಡ್ಯದಲ್ಲಿ ಮನೆ ಕಟ್ಟುವೆ: ಸುಮಲತಾ ಅಂಬರೀಶ್
ರಾಜ್ಯದೆಲ್ಲಡೆ ಕಾಂಗ್ರೆಸ್ ಪರ ಅಲೆಯಿದೆ. ರಾಜ್ಯ ಸರ್ಕಾರದ ಜನಪರ ಯೋಜನೆಗಳು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಶ್ರೀರಕ್ಷೆಯಾಗಲಿದೆ. ಅಲ್ಲದೆ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಜನರು ಕಾಂಗ್ರೆಸ್ ಪರವಾಗಿ ನಿಂತು ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವಂತೆ ಮಾಡಿದ್ದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ನನ್ನ ಪರ ಮತ ಚಲಾಯಿಸುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.