ಬಿಜೆಪಿ-ಜೆಡಿಎಸ್‌ ಮೈತ್ರಿ ಟಿಕೆಟ್ ನೂರಕ್ಕೆ ನೂರರಷ್ಟು ನನಗೇ ಸಿಗೋದು ಖಚಿತ: ಸಂಸದೆ ಸುಮಲತಾ

By Kannadaprabha News  |  First Published Mar 4, 2024, 6:48 AM IST

ಮಂಡ್ಯ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ನನಗೆ ಸಿಗೋದು ನೂರಕ್ಕೆ ನೂರರಷ್ಟು ಖಚಿತ ಎಂದು ಸಂಸದೆ ಸುಮಲತಾ ಅಂಬರೀಶ್‌ ವಿಶ್ವಾಸದಿಂದ ನುಡಿದರು. ನಾನು ದೆಹಲಿಗೆ ಹೋಗುವ ಅವಶ್ಯಕತೆ ಇಲ್ಲ. ನನ್ನನ್ನು ಬರಲು ಹೇಳಿದರೆ ಮಾತ್ರ ಹೋಗುತ್ತೇನೆ. ಕರ್ನಾಟಕದ ಅಭ್ಯರ್ಥಿ ಪಟ್ಟಿ ಯಾವಾಗ ಬರುವುದೋ ಆಗಲೇ ನಮ್ಮದೂ ಬರಲಿದೆ ಎಂದು ತಾಲೂಕಿನ ಚುಂಚನಗಿರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.


ನಾಗಮಂಗಲ (ಮಾ.4): ಮಂಡ್ಯ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ನನಗೆ ಸಿಗೋದು ನೂರಕ್ಕೆ ನೂರರಷ್ಟು ಖಚಿತ ಎಂದು ಸಂಸದೆ ಸುಮಲತಾ ಅಂಬರೀಶ್‌ ವಿಶ್ವಾಸದಿಂದ ನುಡಿದರು.

ನಾನು ದೆಹಲಿಗೆ ಹೋಗುವ ಅವಶ್ಯಕತೆ ಇಲ್ಲ. ನನ್ನನ್ನು ಬರಲು ಹೇಳಿದರೆ ಮಾತ್ರ ಹೋಗುತ್ತೇನೆ. ಕರ್ನಾಟಕದ ಅಭ್ಯರ್ಥಿ ಪಟ್ಟಿ ಯಾವಾಗ ಬರುವುದೋ ಆಗಲೇ ನಮ್ಮದೂ ಬರಲಿದೆ ಎಂದು ತಾಲೂಕಿನ ಚುಂಚನಗಿರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

Tap to resize

Latest Videos

ಚುನಾವಣೆ ತಯಾರಿ ಬಗ್ಗೆ ಯಾವುದೇ ನಿರ್ದಿಷ್ಟ ಯೋಜನೆ ರೂಪಿಸಿಕೊಂಡಿಲ್ಲ. ಈ ಬಾರಿ ಒಂದು ರಾಜಕೀಯ ಪಕ್ಷದ ಚಿಹ್ನೆಯಡಿ ನಾನು ಸ್ಪರ್ಧಿಸುತ್ತಿದ್ದೇನೆ. ಈ ವಿಚಾರದಲ್ಲಿ ಪಕ್ಷ, ಪಕ್ಷದ ನಾಯಕರು ಏನು ಹೇಳುತ್ತಾರೆ ನೋಡಬೇಕು. ಈ ಬಾರಿ ಬೇರೆ ರೀತಿಯಲ್ಲಿ ಚುನಾವಣೆ ನಡೆಯುತ್ತದೆ. ಪ್ರಚಾರ, ಹೋರಾಟ, ಕ್ಯಾಂಪೇನ್ ಎಲ್ಲವೂ ವಿಭಿನ್ನವಾಗಿರಲಿದೆ ಎಂದರು.

ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ನನಗೇ ಸಿಗುವುದೆಂಬ ಸಂಪೂರ್ಣ ವಿಶ್ವಾಸವಿದೆ: ಸಂಸದೆ ಸುಮಲತಾ

ಯಶ್, ದರ್ಶನ್ ಪ್ರಚಾರಕ್ಕೆ ಬಂದರೆ ಬಲ ಇರುತ್ತೆ, ಎಲ್ಲರೂ ನನಗೆ ಬೆಂಬಲವಾಗಿ ನಿಂತಿದ್ದಾರೆ. ಕಳೆದ ಚುನಾವಣೆ ಸಮಯದಲ್ಲಿ ಸ್ವಾರ್ಥ ಇಲ್ಲದೆ ನನ್ನ ಪರ ನಿಂತಿದ್ದರು. ಪದೇ ಪದೇ ಎಲ್ಲಾ ಬಿಟ್ಟು ಪ್ರಚಾರಕ್ಕೆ ಬನ್ನಿ ಎಂದು ಕರೆಯೋದು ಸರಿಯಲ್ಲ. ಅದಕ್ಕೆ ನನ್ನ ಮನಸ್ಸೂ ಒಪ್ಪುವುದಿಲ್ಲ. ಯಶ್, ದರ್ಶನ್ ಒಂದೊಂದು ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಅದನ್ನಲ್ಲ ಬಿಟ್ಟು ನನ್ನ ಪರ ಪ್ರಚಾರಕ್ಕೆ ಬನ್ನಿ ಎಂದು ಕರೆಯೋದು ಸರಿಯಲ್ಲ. ಅವರೇ ಪ್ರಚಾರಕ್ಕೆ ಬರೋದಾದರೆ ಖಂಡಿತವಾಗಿಯೂ ಹಾರ್ಟ್ಲಿ ವೆಲ್ ಕಮ್ ಮಾಡುತ್ತೇನೆ. ದೊಡ್ಡ ಶಕ್ತಿಯಾಗಿ ಅವರ ಬೆಂಬಲ ನನಗೆ ಇರುತ್ತೆ ಎಂದರು.

 

ನಾನು ದ್ವೇಷದ ರಾಜಕಾರಣ ಮಾಡೋಲ್ಲ, ಅದು ನನಗೆ ಗೊತ್ತಿಲ್ಲ: ಸಂಸದೆ ಸುಮಲತಾ

ಯಶ್ ಚುನಾವಣೆ ಪ್ರಚಾರದಲ್ಲಿ ಭಾಗವಹಿಸೋಲ್ಲ ಎಂಬ ವಿಚಾರದ ಬಗ್ಗೆ ಕೇಳಿದಾಗ, ರಾಜಕಾರಣ ಗಲೀಜು ಎಂದು ಹೇಳಿದ್ದಾರೆ. ಟೀಕೆ ಬಗ್ಗೆ ತಿಳಿದುಕೊಂಡಿದ್ದಾರೆ. ಅವರು ಈಗ ಸ್ಟಾರ್ ಇಂಡಿಯಾ. ಪ್ರಚಾರಕ್ಕೆ ಬರಬೇಕೆಂದು ನಿರೀಕ್ಷಿಸುವುದು ಸರಿಯಲ್ಲ. ಅವರಾಗಿಯೇ ಬರುವುದಾದರೆ ಸಂತೋಷ ಪಡುತ್ತೇನೆ. ದರ್ಶನ್‌ ಮತ್ತು ಯಶ್ ನನ್ನ ಮನೆಯ ಮಕ್ಕಳಿದ್ದಂತೆ. ಅವತ್ತಿನ ಸ್ಥಿತಿಯಲ್ಲಿ ನನ್ನ ಜೊತೆ ನಿಂತಿದ್ದರು. ಅವರು ಪ್ರಚಾರಕ್ಕೆ ಬರಲಿಲ್ಲವೆಂದರೂ ನಾನು ಬೇಜಾರು ಮಾಡಿಕೊಳ್ಳುವುದಿಲ್ಲ ಎಂದರು

click me!