ತೆನೆ ಹೊರದೇ ಇದ್ದಿದ್ರೆ ಕೈಗೆ 10 ಸೀಟು: ಇದು ಸುಮಲತಾ ತಿರುಗೇಟು!

Published : Jun 06, 2019, 12:07 PM IST
ತೆನೆ ಹೊರದೇ ಇದ್ದಿದ್ರೆ ಕೈಗೆ 10 ಸೀಟು: ಇದು ಸುಮಲತಾ ತಿರುಗೇಟು!

ಸಾರಾಂಶ

ರಾಜ್ಯ ರಾಜಕಾರಣ ವಿಶ್ಲೇಷಣೆಗಿಳಿದ ಮಂಡ್ಯ ಸಂಸದೆ| ರಾಜ್ಯ ಮೈತ್ರಿ ಸರ್ಕಾರದ ಕುರಿತು ಅಭಿಪ್ರಾಯ ಹೊರ ಹಾಕಿದ ಸುಮಲತಾ ಅಂಬರೀಶ್| ‘ಜೆಡಿಎಸ್ ಜೊತೆಗೆ ಮೈತ್ರಿ ಇಲ್ಲದಿದ್ದರೆ ಕಾಂಗ್ರೆಸ್‌ಗೆ ರಾಜ್ಯದಲ್ಲಿ 10 ಸೀಟು’|‘ರಾಜ್ಯದ ಮೈತ್ರಿ ಸರ್ಕಾರದ ಕುರಿತು ಜನರಲ್ಲಿ ಅಸಮಾಧಾನವಿದೆ’|‘ಮೈತ್ರಿಯಿಂದಾಗಿ ಕಾಂಗ್ರೆಸ್ ಉತ್ತಮ ಅಭ್ಯರ್ಥಿಗಳೂ ಸೋತರು’|ಎಕನಾಮಿಕ್ಸ್ ಟೈಮ್ಸ್‌ಗೆ ವಿಶೇಷ ಸಂದರ್ಶನ ನೀಡಿದ ಸುಮಲತಾ ಅಂಬರೀಶ್|

ಬೆಂಗಳೂರು(ಜೂ.06): ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರದಿದ್ದರೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಕನಿಷ್ಠ 10 ಲೋಕಸಭಾ ಸೀಟುಗಳನ್ನಾದರೂ ಗೆಲ್ಲುತ್ತಿತ್ತು ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಮೈತ್ರಿ ಸರ್ಕಾರದ ಕುರಿತು ಜನರಲ್ಲಿ ಅಸಮಾಧಾನವಿದ್ದು, ಈ ಕುರಿತು ಲೋಕಸಭೆ ಚುನಾವಣೆಗೂ ಮೊದಲೇ ತಾವು ಕಾಂಗ್ರೆಸ್ ನಾಯಕರಿಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದ್ದಾಗಿ ಸುಮಲತಾ ಹೇಳಿದ್ದಾರೆ.

ಎಕನಾಮಿಕ್ಸ್ ಟೈಮ್ಸ್‌ಗೆ ವಿಶೇಷ ಸಂದರ್ಶನ ನೀಡಿರುವ ಸುಮಲತಾ, ಇದೇ ಮೊದಲ ಬಾರಿಗೆ ರಾಜ್ಯ ರಾಜಕಾರಣದ ಕುರಿತು ತಮ್ಮ ಅಭಿಪ್ರಾಯವನ್ನು ಹೊರಹಾಕಿದ್ದಾರೆ.

ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಉತ್ತಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ ಜೆಡಿಎಸ್ ಜೊತೆಗಿನ ಮೈತ್ರಿಯೇ ಆ ಪಕ್ಷಕ್ಕೆ ಮುಳುವಾಯಿತು ಎಂದು ಸುಮಲತಾ ಹೇಳಿದ್ದಾರೆ.

ಮೈತ್ರಿ ಮಾಡಿಕೊಳ್ಳದೇ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಿದ್ದರೆ ಕನಿಷ್ಠ 10 ಸೀಟುಗಳನ್ನಾದರೂ ಗೆಲ್ಲುವ ಅವಕಾಶವಿತ್ತು ಎಂದು ಸುಮಲತಾ ಚುನಾವಣೆ ವಿಶ್ಲೇಷಣೆ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!