ಸುಮಲತಾ ಮೇಲೆ ಅಸಂಬದ್ಧ ಪದ ಬಳಕೆ: ಮಂಡ್ಯದಲ್ಲಿ ಕುಮಾರಸ್ವಾಮಿ ವಿರುದ್ಧ ಭುಗಿಲೆದ್ದ ಆಕ್ರೋಶ

Published : Jul 05, 2021, 10:29 PM ISTUpdated : Jul 05, 2021, 10:53 PM IST
ಸುಮಲತಾ ಮೇಲೆ ಅಸಂಬದ್ಧ ಪದ ಬಳಕೆ: ಮಂಡ್ಯದಲ್ಲಿ ಕುಮಾರಸ್ವಾಮಿ ವಿರುದ್ಧ ಭುಗಿಲೆದ್ದ ಆಕ್ರೋಶ

ಸಾರಾಂಶ

* ಸುಮಲತಾ ಹಾಗೂ ಕುಮಾರಸ್ವಾಮಿ ನಡುವೆ ವಾಕ್ಸಮರ * ಕುಮಾರಸ್ವಾಮಿ ಹೇಳಿಕೆ ಸಂಸದೆ ಸುಮಲತಾ ಅಂಬರೀಶ್ ಬೆಂಬಗಲಿಗರಿಂದ ಪ್ರತಿಭಟನೆ * ಕೂಡಲೇ ಕ್ಷಮೆ ಕೇಳಬೇಕೆಂದು ಆಗ್ರಹ

ಮಂಡ್ಯ, (ಜುಲೈ.05): ಸಂಸದೆ ಸುಮಲತಾ ಅಂಬರೀಶ್ ಬೆಂಬಲಿಗರು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಬೀದಿಗಿಳಿದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೃಷ್ಣರಾಜ ಸಾಗರ ಅಣೆಕಟ್ಟು ಬಿರುಕು ಬಿಟ್ಟಿದ್ದರೆ ಸುಮಲತಾ ಅವರನ್ನ ಅಡ್ಡಡ್ಡ ಮಲಗಿಸಿ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. 

KRS ಬಾಗಿಲಿಗೆ ಸುಮಲತಾರನ್ನು ಅಡ್ಡಡ್ಡ ಮಲಗಿಸ್ಬೇಕು: ಏನಿದು ಎಚ್‌ಡಿಕೆ ಮಾತಿನ ಅರ್ಥ?

ಈ ಹೇಳಿಕೆಯನ್ನು ಖಂಡಿಸಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲಿಗರು ಇಂದು (ಸೋಮವಾರ) ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿ ಕುಮಾರಸ್ವಾಮಿ ಭಾವಚಿತ್ರಕ್ಕೆ ಬೆಂಕಿಹಚ್ಚಿ ಆಕ್ರೋಶ ಹೊರ ಹಾಕಿದರು.

ಮಂಡ್ಯದಲ್ಲಿ ನಡೆಯುತ್ತಿರುವ ಎಲ್ಲಾ ಅಕ್ರಮ ಚಟುವಟಿಕೆಗಳಿಗೆ ಕುಮಾರಸ್ವಾಮಿಯವರೇ ಕಾರಣ. ಕೂಡಲೇ ಸುಮಲತಾ ಅವರ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!