
ಮಂಗಳೂರು (ಮೇ 10, 2023): ಮಂಗಳೂರಲ್ಲಿ ಕರ್ನಾಟಕದ ಮತದಾನದ ದಿನವೇ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಮಂಗಳೂರು ಹೊರವಲಯದ ಮುಡುಶೆಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಪರಸ್ಪರ ಕಲ್ಲು ತೂರಾಟ ನಡೆಸಿರೋ ಘಟನೆಯೂ ವರದಿಯಾಗಿದೆ. ಈ ಹಿನ್ನೆಲೆ ಸ್ಥಳದಲ್ಲಿ ಹೆಚ್ಚು ಪೊಲೀಸರು ನಿಯೋಜನೆಗೊಂಡಿದ್ದಾರೆ.
ಮಂಗಳೂರು ಹೊರವಲಯದ ಮುಡುಶೆಡ್ಡೆ ಎಂಬಲ್ಲಿ ಈ ಘರ್ಷಣೆ ನಡೆದಿದ್ದು, ಈ ಗಲಾಟೆಯಲ್ಲಿ ಮೂಡಬಿದರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರು ದ್ವಂಸವಾಗಿದೆ. ಈ ಹಿನ್ನೆಲೆ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.
ಇದನ್ನು ಓದಿ: Karnataka Elections 2023 LIVE: ಎಕ್ಸಿಟ್ ಪೋಲ್‌ನಲ್ಲಿ ಸಿಕ್ತು ಅತಂತ್ರ ಸರ್ಕಾರದ ಸೂಚನೆ
ಕೈ - ಕಮಲ ಕಾರ್ಯಕರ್ತರ ನಡುವಿನ ಗಲಾಟೆ ವಿಕೋಪಕ್ಕೆ ತಿರುಗಿ ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ ಎಂದು ತಳಿದುಬಂದಿದೆ. ಇನ್ನು, ಈ ಕಲ್ಲು ತೂರಾಟದ ವೇಳೆ ಪೊಲೀಸ್ ಸಿಬ್ಬಂದಿ ತಲೆಗೆ ಸಹ ಗಾಯವಾಗಿದೆ. ಸ್ಥಳದಲ್ಲಿ ಬಿಜೆಪಿ - ಕಾಂಗ್ರೆಸ್ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಸೇರಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಇದನ್ನೂ ಓದಿ: Karnataka Election 2023: ಬೆಂಗಳೂರಲ್ಲಿ ಈ ಬಾರಿಯೂ ನೀರಸ ಮತದಾನ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.