ಕರ್ನಾಟಕದ ಮತ್ತೋರ್ವ ಕಾಂಗ್ರೆಸ್ ನಾಯಕನಿಗೆ ಕೊರೋನಾ: ಬೆಂಬಲಿಗರಿಗೆ ಆತಂಕ

Published : Jul 17, 2020, 03:17 PM ISTUpdated : Jul 17, 2020, 03:59 PM IST
ಕರ್ನಾಟಕದ ಮತ್ತೋರ್ವ ಕಾಂಗ್ರೆಸ್ ನಾಯಕನಿಗೆ ಕೊರೋನಾ: ಬೆಂಬಲಿಗರಿಗೆ ಆತಂಕ

ಸಾರಾಂಶ

ರಾಜ್ಯ ರಾಜಕೀಯ ನಾಯಕರನ್ನು ಮಹಾಮಾರಿ ಕಟ್ಟಿಕಾಡುತ್ತಿದ್ದು, ಶುಕ್ರವಾರ ಮತ್ತೋರ್ವ ಕಾಂಗ್ರೆಸ್ ನಾಯಕನಿಗೆ ಕೊರೋನಾ ವಕ್ಕರಿಸಿದೆ. ಈ ಹಿನ್ನೆಲೆಯಲಲ್ಇ ತಮ್ಮ ಸಂಪರ್ಕದಲ್ಲಿ ನಾಯಕರುಗಳಿಗೆ ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದಾರೆ.

ಮಂಗಳೂರು, (ಜುಲೈ.17): ದಕ್ಷಿಣ ಕನ್ನಡ ಜಿಲ್ಲೆಯ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ. ಈ ವಿಚಾರವನ್ನು ಸ್ವತಃ ಮಿಥುನ್ ರೈ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ನನಗೆ ಕೋವಿಡ್-19 ಸೋಂಕು ತಾಗಿರುವುದು ಪತ್ತೆಯಾಗಿದೆ. ಸದ್ಯ ನಾನೀಗ ಬೆಂಗಳೂರಿನಲ್ಲಿ ಕ್ವಾರೆಂಟೈನ್ ಆಗಿದ್ದೇನೆ. ನನ್ನ ಜೊತೆ ಕಳೆದ ಕೆಲ ದಿನಗಳಿಂದ ಹತ್ತಿರದ ಸಂಪರ್ಕದಲ್ಲಿದ್ದವರು ಕೋವಿಡ್ -19 ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮಿಥುನ್ ರೈ ಮನವಿ ಮಾಡಿಕೊಂಡಿದ್ದಾರೆ.

ಕೊರೋನಾ ವೈರಸ್‌ಗೆ ತುತ್ತಾದ ಕರ್ನಾಟಕದ ಪ್ರಮುಖ ರಾಜಕಾರಣಿಗಳಿವರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಇದೇ ಜಿಲ್ಲೆಯ ಶಾಸಕರಾದ ಭರತ್ ಶೆಟ್ಟಿ ಹಾಗೂ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರಿಗೂ ಕೋವಿಡ್ -19 ವಕ್ಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ
ಹೈಕಮಾಂಡ್‌ ನಿರ್ಧಾರವೇ ಅಂತಿಮ: ಸಿಎಂ ಬದಲು ವಿಚಾರಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ