
ಮಂಗಳೂರು (ಮಾ.22): ಉಚಿತ ಯೋಜನೆಗಳಿಂದ ರಾಜ್ಯದ ಬೊಕ್ಕಸ ಖಾಲಿಯಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಕೇವಲ ಆದೇಶಗಳು ಮಾತ್ರ ಬರ್ತಿದೆ ಎಂದು ಮಂಗಳೂರು ಉತ್ತರ ಬಿಜೆಪಿ ಶಾಸಕ ಭರತ್ ಶೆಟ್ಟಿ ವಾಗ್ದಾಳಿ ನಡೆಸಿದರು.
ಇಂದು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಶಾಸಕ, ಮೈನಾರಿಟಿ ಫಂಡ್ ಮಾತ್ರ ಸ್ವಲ್ಪ ರಿಲೀಸ್ ಮಾಡಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಅನುದಾನ ನೀಡಲು ಸಾಧ್ಯವಿಲ್ಲವೆಂದು ಹೇಳಿದ್ದಾರೆ. ರಾಜ್ಯಾದ್ಯಂತ ವಿದ್ಯುತ್ ಕೊರತೆ ಉಂಟಾಗಿದೆ ನಗರಗಳಲ್ಲಿ ಲೋಡ್ ಶೆಡ್ಡಿಂಗ್ ಆಗುತ್ತಿದೆ. ಆಡಳಿತ, ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದರು.
ಪ್ರಚಾರ ಕಾರ್ಯಕ್ಕೆ ಸಂಸದ ಪ್ರತಾಪ್ ಸಿಂಹ ಗೈರು! ಬಿಜೆಪಿ ಅಭ್ಯರ್ಥಿ ಯದುವೀರ ಒಡೆಯರ್ ಹೇಳಿದ್ದೇನು?
ಇನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಳವಾಗಿವೆ. ರಾಜ್ಯ ಸರ್ಕಾರದ ಪ್ರಾಯೋಜಿತ ಜಿಹಾದಿಸಂ ರಾಜ್ಯದಲ್ಲಿ ಅವ್ಯಹತವಾಗಿ ನಡೆಯುತ್ತಿದೆ. ಅಲ್ಪಸಂಖ್ಯಾತರ ಓಲೈಕೆ ಮಾಡುವ ಕೆಲಸ ಆಗ್ತಿದೆ. ದೇಶದ್ರೋಹಿಗಳಾಗಿದ್ದರೂ ನಮಗೆ ವೋಟ್ ಹಾಕಿದ್ರೆ ಸಾಕು ಎಂಬ ಮನಸ್ಥಿತಿ ಕಾಂಗ್ರೆಸ್ ಸರ್ಕಾರಕ್ಕಿದೆ. ಹೀಗಾಗಿ ದೇಶದ್ರೋಹಿ ಚಟುವಟಿಕೆಯಲ್ಲಿ ತೊಡಗಿರುವವರ ಮೇಲೆ ಕ್ರಮ ಕೈಗೊಳ್ಳದೇ ಮುಸ್ಲಿಮರ ತುಷ್ಟೀಕರಣ ಮಾಡುತ್ತಿದೆ ಇದು ರಾಜ್ಯ ಮತ್ತು ದೇಶಕ್ಕೆ ಅಪಾಯಕಾರಿಯಾಗಿದೆ. ಗೋಕಳ್ಳರನ್ನು ಹಿಡಿದವರ ಮೇಲೆಯೇ ಗೂಂಡಾ ಕಾಯ್ದೆ ಹಾಕುತ್ತಿದ್ದಾರೆ. ಸರ್ಕಾರದ ಅನ್ಯಾಯದ ವಿರುದ್ಧ ಧ್ವನಿಯೆತ್ತಿದವರ ಮೇಲೆ ಕೇಸ್ ಹಾಕುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದರು.
ಒಂದು ಕೇಸ್, ಮೂರು ಎಫ್‌ಐಆರ್!, ಗೂಂಡಾ ಕಾಯ್ದೆಯಡಿ ಮಂಗಳೂರು ಹಿಂದೂ ಕಾರ್ಯಕರ್ತನ ಬಂಧನ!
ಇನ್ನು ಸಚಿವ ಪ್ರಿಯಾಂಕ್ ಖರ್ಗೆ ತಾನೇ ಮುಂದಿನ ಸಿಎಂ ಎಂಬಂತೆ ವರ್ತಿಸುತ್ತಿದ್ದಾರೆ. ಸಿದ್ದರಾಮಯ್ಯನವರ ಮಗ ಶ್ಯಾಡೋ ಸಿಎಂ ರೀತಿ ಅಧಿಕಾರ ಚಲಾಯಿಸುತ್ತಿದ್ದಾರೆ. ಯಾವುದೇ ಜಿಲ್ಲಾ ಮಂತ್ರಿಗಳು ಜನ ಸಂಪರ್ಕ ಮಾಡ್ತಿಲ್ಲ ಒಟ್ಟಿನಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.