ಮಣಿಪುರ ಗಲಾಟೆಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯವೇ ಕಾರಣ: ಮಲ್ಲಿಕಾರ್ಜುನ ಖರ್ಗೆ

Published : Jun 15, 2023, 11:59 PM IST
ಮಣಿಪುರ ಗಲಾಟೆಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯವೇ ಕಾರಣ: ಮಲ್ಲಿಕಾರ್ಜುನ ಖರ್ಗೆ

ಸಾರಾಂಶ

ಕರ್ನಾಟಕದ ಮಾದರಿಯಲ್ಲಿ ಮಧ್ಯಪ್ರದೇಶದಲ್ಲೂ ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿದೆ. ಹೀಗಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು.

ಕಲಬುರಗಿ (ಜೂ.15): ಕರ್ನಾಟಕದ ಮಾದರಿಯಲ್ಲಿ ಮಧ್ಯಪ್ರದೇಶದಲ್ಲೂ ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿದೆ. ಹೀಗಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಇಲ್ಲಿನ ಐವಾನ್‌-ಎ-ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ನೀಡಿದಂತೆಯೇ ಮಧ್ಯಪ್ರದೇಶ ಚುನಾವಣಾ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿಗಳನ್ನು ನೀಡಿದ್ದೇವೆ. ಈ ಭರವಸೆಗಳ ಆಧಾರದ ಮೇಲೆ ಅಲ್ಲಿಯೂ ನಿಶ್ಚಿತವಾಗಿ ಚುನಾವಣೆ ಗೆಲ್ಲುವ ಭರವಸೆಯಿದೆ ಎಂದರು.

ಕೇವಲ ಮಧ್ಯಪ್ರದೇಶವಷ್ಟೇ ಅಲ್ಲ ಮುಂಬರುವ ದಿನಗಳಲ್ಲಿ ನಡೆಯಲಿರುವ ರಾಜಸ್ಥಾನ, ಮೇಘಾಲಯ ಮತ್ತು ಛತ್ತಿಸಗಢ ರಾಜ್ಯದಲ್ಲಿಯೂ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಅವರು ಭವಿಷ್ಯ ನುಡಿದರು. ಆಯಾ ರಾಜ್ಯಗಳ ಅಗತ್ಯ ಮತ್ತು ಪರಿಸ್ಥಿತಿಗೆ ಅನುಗುಣವಾಗಿ ಚುನಾವಣಾ ಪ್ರಣಾಳಿಕೆಯನ್ನು ಸಿದ್ದಪಡಿಸಬೇಕಾಗುತ್ತದೆ. ಹಾಗಾಗಿ, ಎಲ್ಲ ರಾಜ್ಯಗಳಿಗೂ ಒಂದೇ ರೀತಿಯ ಪ್ರಣಾಳಿಕೆ ನೀಡಲು ಬರುವುದಿಲ್ಲ. ಒಂದು ರಾಜ್ಯದ ಪ್ರಣಾಳಿಕೆ ಮತ್ತೊಂದು ರಾಜ್ಯಕ್ಕೆ ಹೊಂದಾಣಿಕೆ ಆಗುವುದಿಲ್ಲ ಎಂದರು.

ಅಕ್ಕಿ ವಿಚಾರದಲ್ಲಿ ರಾಜಕೀಯ ಬೇಡ, ಇದು ರಾಜ್ಯದ ಬಡ ಜನರ ಹಸಿವಿನ ಪ್ರಶ್ನೆ: ಸಿ.ಟಿ.ರವಿಗೆ ದಿನೇಶ್‌ ತಿರುಗೇಟು

ಮಣಿಪುರ ಗಲಾಟೆಗೆ ನಿರ್ಲಕ್ಷ್ಯವೇ ಕಾರಣ: ಮಣಿಪುರದಲ್ಲಿ ನಡೆದ ಹಿಂಸಾಚಾರಕ್ಕೆ ಕೇಂದ್ರ ಸರಕಾರದ ನಿರ್ಲಕ್ಷ್ಯವೇ ಕಾರಣ ಎಂದು ಟೀಕಿಸಿದ ಖರ್ಗೆ, ಆರಂಭದಲ್ಲಿಯೇ ಕಂಟ್ರೋಲ್‌ ಮಾಡಿದ್ದರೆ ಈ ಮಟ್ಟದಲ್ಲಿ ಜೀವಹಾನಿ ಮತ್ತು ಆಸ್ತಿ-ಪಾಸ್ತಿ ನಷ್ಟಕ್ಕೆ ಒಳಗಾಗುತ್ತಿರಲಿಲ್ಲ. ತ್ವರಿತವಾಗಿ ಕ್ರಮ ಕೈಗೊಳ್ಳದ ಕಾರಣಕ್ಕಾಗಿ ಇಂತಹ ಕೆಟ್ಟ ಪರಿಸ್ಥಿತಿ ಬಂದಿದೆ ಎಂದು ವ್ಯಾಖ್ಯಾನಿಸಿದರು.

ಟೋಲ್‌ ದರ ಏರಿಕೆ ಅನ್ಯಾ​ಯದ ಪರ​ಮಾ​ವ​ಧಿ: ಎಚ್‌.ಡಿ.ಕುಮಾರಸ್ವಾಮಿ

ಜೀವ ಕಳೆದುಕೊಂಡವರ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡುವುದರಲ್ಲಿಯೂ ಕೇಂದ್ರ ಸರಕಾರ ವಿಳಂಬ ನೀತಿ ಅನುಸರಿಸುತ್ತಿದೆ. ಮನೆ ಸೇರಿದಂತೆ ಆಸ್ತಿ-ಪಾಸ್ತಿ ಕಳೆದುಕೊಂಡವರಿಗೆ ಪುನರ್ವಸತಿ ಕಲ್ಪಿಸುವುದರಿಂದ ಹಿಡಿದು ಪರಿಹಾರ ನೀಡುವುದಲ್ಲಿಯೂ ಕೇಂದ್ರ ಸರಕಾರ ಅಗತ್ಯ ಆಸಕ್ತಿ ತೋರುತ್ತಿಲ್ಲ. ಹಾಗಾಗಿ, ಈ ಬಗ್ಗೆ ನಾವು ರಾಷ್ಟ್ರಪತಿಗಳ ಬಳಿ ನಿಯೋಗ ಕೊಂಡೊಯ್ದು ತುರ್ತು ಪರಿಹಾರ ಕಾರ್ಯ ಕೈಗೊಳ್ಳುವಂತೆ ಕೇಂದ್ರ ಸರಕಾರಕ್ಕೆ ತಾಕೀತು ಮಾಡುವಂತೆ ಮನವಿ ಮಾಡಲಾಗಿದೆ ಎಂದು ವಿವರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್