
ಕಲಬುರಗಿ (ಜು.18): ಲಿಂಗಾಯತರು ಕೇವಲ ಬಿಜೆಪಿಯ ಸ್ವತ್ತಲ್ಲ, ಕಾಂಗ್ರೆಸ್‌ನಲ್ಲೂ ಲಿಂಗಾಯತರಿದ್ದಾರೆ. ಅನೇಕ ಜನ ಲಿಂಗಾಯತ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷದತ್ತ ಮುಖ ಮಾಡುತ್ತಿದ್ದಾರೆ. ಅವರನ್ನೆಲ್ಲ ಕಾಂಗ್ರೆಸ್‌ಗೆ ಸ್ವಾಗತಿಸುವುದಕ್ಕೆ ಸಿದ್ಧತೆಗಳು ಸಾಗಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಇಲ್ಲಿನ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅನ್ಯಪಕ್ಷಗಳಲ್ಲಿರುವ ಅನೇಯ ಲಿಂಗಾಯತ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಬರಲು ಸಿದ್ಧರಿದ್ದು, ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಳ್ಳುವ ವಿಚಾರವಾಗಿ ಎಂ.ಬಿ. ಪಾಟೀಲ್, ಎಸ್.ಆರ್. ಪಾಟೀಲ್, ಈಶ್ವರ್ ಖಂಡ್ರೆ ಚರ್ಚೆ ನಡೆಸುತ್ತಿದ್ದಾರೆ ಎಂದರು.
ಲಿಂಗಾಯತರನ್ನು ಕಾಂಗ್ರೆಸ್ ಕಡೆಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳಕರ
ಇಡೀ ಲಿಂಗಾಯತ ಸಮುದಾಯವೇ ತಮ್ಮ ಸ್ವತ್ತು ಎನ್ನುವ ಹಾಗೆ ಬಿಜೆಪಿಯವರು ವರ್ತಿಸುತ್ತಿದ್ದಾರೆ, ಇಂಥ ವರ್ತನೆ ಸರಿಯಲ್ಲ. ಲಿಂಗಾಯತರಲ್ಲಿ ಸಾಕಷ್ಟು ಜನ ಕಾಂಗ್ರೆಸ್ ಪರವೂ ಒಲವಿದ್ದವರು ಇದ್ದಾರೆ. ಪಕ್ಷದಲ್ಲಿದ್ದಾರೆ, ಪಕ್ಷದ ಹೊರಗಿದ್ದಾರೆ, ಅವರೆಲ್ಲರೂ ಕಾಂಗ್ರೆಸ್‌ಗೆ ಹರಸುತ್ತಿದ್ದಾರೆಂದರು.
ರಾಜ್ಯ ಕಾಂಗ್ರೆಸ್‌ನಲ್ಲಿ ದಿಢೀರ್ ರಾಜಕೀಯ ಬೆಳವಣಿಗೆ!
ಕಟೀಲ್‌ಗೆ ತಿರುಗೇಟು: ಸಿಎಂ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಸಂಗೀತ ಕುರ್ಚಿ ಸ್ಪರ್ಧೆ ನಡೆಯುತ್ತಿದೆ ಎಂದು ಹೇಳಿಕೆ ನೀಡಿರುವ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ಗೆ ತಿರುಗೇಟು ನೀಡಿದ ಡಿಕೆಶಿ, ಸಿಎಂ ಹುದ್ದೆ ಕಾದಾಟ ಕಾಂಗ್ರೆಸ್‌ನಲ್ಲಿ ನಡೆಯುತ್ತಿಲ್ಲ. ಅದು ಬಿಜೆಪಿಯಲ್ಲೇ ನಡೆಯುತ್ತಿದೆ ಎಂದರು.
ಡಿಕೆಶಿ ಮುಂದಿನ ಸಿಎಂ ಕೂಗು
ವಿಜಯಪುರಕ್ಕೆ ತೆರಳುವ ದಾರಿಯಲ್ಲಿ ಬೆಳಗಿನ ಹೊತ್ತು ಕೆಲಗಂಟೆ ಕಾಲ ಕಲಬುರಗಿಯಲ್ಲಿ ತಂಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದ್ದಲ್ಲದೆ ಮುಂದಿನ ಮುಖ್ಯಮಂತ್ರಿ ಎಂದು ಜಯಘೋಷ ಹಾಕಿ ಗಮನ ಸೆಳೆದರು. ನಂತರ ವಿಮಾನ ನಿಲ್ದಾಣದಲ್ಲಿ ಸುದ್ದಿಗೋಷ್ಠಿ ಆರಂಭಕ್ಕೂ ಮೊದಲು ನೀವೇ ಮುಂದಿನ ಸಿಎಂ ಎಂದು ಘೋಷಣೆ ಹಾಕಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.