ಬಿಜೆಪಿ- ಜೆಡಿಎಸ್‌ನಿಂದ ಶೀಘ್ರವೇ ಬಹಳಷ್ಟು ಮಂದಿ ಕಾಂಗ್ರೆಸ್‌ಗೆ: ಸಚಿವ ಚಲುವರಾಯಸ್ವಾಮಿ

By Kannadaprabha News  |  First Published Nov 16, 2023, 11:06 AM IST

ಜೆಡಿಎಸ್‌ನೊಂದಿಗೆ ಬಿಜೆಪಿ ಹೊಂದಾಣಿಕೆ ಮಾಡಿಕೊಳ್ಳುವುದು, ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರದಲ್ಲಿ ಬಹಳಷ್ಟು ಮಂದಿ ಅಸಮಾಧಾನ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳಿಂದ ಸಾಕಷ್ಟು ಮಂದಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. 


ನಾಗಮಂಗಲ (ನ.16): ಜೆಡಿಎಸ್‌ನೊಂದಿಗೆ ಬಿಜೆಪಿ ಹೊಂದಾಣಿಕೆ ಮಾಡಿಕೊಳ್ಳುವುದು, ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರದಲ್ಲಿ ಬಹಳಷ್ಟು ಮಂದಿ ಅಸಮಾಧಾನ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳಿಂದ ಸಾಕಷ್ಟು ಮಂದಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ. ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲ ಬೆಳವಣಿಗೆಗಳನ್ನು ಅವರು ಬಹಳ ಸೂಕ್ಷ್ಮವಾಗಿ ಗಮನಹರಿಸುತ್ತಿದ್ದಾರೆ ಎಂದರು.

ಬಿಜೆಪಿ ಮತ್ತು ಜೆಡಿಎಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದಿಂದ ಸಾಕಷ್ಟುಮಂದಿ ಹೊರಬರುತ್ತಿರುವ ಮಾಹಿತಿ ನನಗೂ ತಲುಪಿದೆ. ಎಷ್ಟು ಮಂದಿ ಯಾವಾಗ ಮೂಹೂರ್ತ ನಿಧಿಪಡಿಸಿ ಪಕ್ಷಕ್ಕೆ ಬರುತ್ತಾರೆಂಬುದು ನನಗೆ ಗೊತ್ತಿಲ್ಲ ಎಂದರು. ಬಿಜೆಪಿ ಪಕ್ಷದ ನೂತನ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಆ ಪಕ್ಷದ ಬಹಳಷ್ಟು ಮಂದಿಗೆ ಅಸಮಾಧಾನವಿದೆ. ಅಲ್ಲದೇ, ಬಿಜೆಪಿಯವರು ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿರುವ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರ ತೀರ್ಮಾನ ನಮಗೆ ಸಮಾಧಾನವಿಲ್ಲವೆಂದು ಜೆಡಿಎಸ್‌ನಲ್ಲೂ ಅಸಮಾಧಾನದ ಹೊಗೆಯಾಡುತ್ತಿದೆ ಎಂದರು.

Latest Videos

undefined

ಇನ್ನೆಂದೂ ಇಂಥ ಘಟನೆ ಆಗದಂತೆ ನೋಡಿಕೊಳ್ಳುವೆ: ಪೊಲೀಸ್ ವಿಚಾರಣೆ ವೇಳೆ ನಟ ದರ್ಶನ್ ಮಾತು

ಆ ಪಕ್ಷದಿಂದ ಎಷ್ಟು ಮಂದಿ ಯಾವ ಸಂದರ್ಭದಲ್ಲಿ ಕಾಂಗ್ರೆಸ್‌ಗೆ ಬರುತ್ತಾರೆಂಬುದನ್ನು ನಾನು ಈಗ ಹೇಳುವುದಿಲ್ಲ. ಸಂದರ್ಭ ಬಂದಾಗ ಹೇಳುತ್ತೇನೆ. ಆದರೆ, ನಮಗೆ ಅವರನ್ನು ತಕ್ಷಣಕ್ಕೆ ಕರೆದುಕೊಂಡು ಸರ್ಕಾರ ಉಳಿಸಿಕೊಳ್ಳಬೇಕೆಂಬ ಅನಿವಾರ್ಯತೆಯಿಲ್ಲ ಎಂದರು. ನಮ್ಮಲ್ಲಿ 136 ಸ್ಥಾನಗಳ ಜೊತೆಗೆ ಪಕ್ಷೇತರ ಶಾಸಕರೂ ಸಹ ನಮ್ಮೊಂದಿಗೆ ಕೈಜೋಡಿಸಿದ್ದಾರೆ. ಹಾಗಾಗಿ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ರಾಜ್ಯದ ಜನರ ಪರವಾಗಿ ಕಾಂಗ್ರೆಸ್ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳಿಗೆ ನಾವೂ ಕೈಜೋಡಿಸುತ್ತೇವೆಂದು ಯಾರೇ ಬಂದರೂ ಸಹ ಸಂತೋಷದಿಂದ ಸ್ವಾಗತಿಸುವುದಾಗಿ ತಿಳಿಸಿದರು.

ರಾಜ್ಯದಲ್ಲಿ ಬಿಜೆಪಿ ಪಕ್ಷ ಕಟ್ಟುವಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರದ್ದೇ ಆದ ಪ್ರಮುಖ ಪಾತ್ರವಿದೆ. ಅವರನ್ನು ಅಧಿಕಾರದಿಂದ ಕೆಳಗಿಳಿಸಿದ್ದಲ್ಲದೆ ಅವರ ಮಗನಿಗೂ ಒಂದು ಅವಕಾಶ ಕೊಟ್ಟಿರಲಿಲ್ಲ. ಈಗ ಎಲ್ಲಿ ಹುಡಿಕಿದರೂ ಸಮರ್ಥವಾದ ಅಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗದಂತಹ ಕೆಟ್ಟ ಪರಿಸ್ಥಿತಿ ಬಿಜೆಪಿ ಹೈಕಮಾಂಡ್ ಮುಂದಿದೆ. ಹಾಗಾಗಿ ಕೊನೆಗೆ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷನನ್ನಾಗಿ ಆಯ್ಕೆ ಮಾಡುವ ಪರಿಸ್ಥಿತಿ ಬಂದಿದೆ ಎಂದು ಜರಿದರು.

ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದು ಆರು ತಿಂಗಳು ಕಳೆದು, ವಿಧಾನಸಭಾ ಅಧಿವೇಶನ ಮತ್ತು ರಾಜ್ಯಪಾಲರ ಭಾಷಣ ಮುಗಿದು, ರಾಜ್ಯದ ಅನೇಕ ಜ್ವಲಂತ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿರುವ ಸಮಯದಲ್ಲಿ ಸಲಹೆ ಮಾರ್ಗದರ್ಶನ ನೀಡಲು ಒಬ್ಬ ವಿರೋಧ ಪಕ್ಷದ ನಾಯಕನಿಲ್ಲದಿರುವುದು ರಾಷ್ಟ್ರದ ಇತಿಹಾಸದಲ್ಲಿ ಇದೇ ಮೊದಲು ಎಂದು ಬಿಜೆಪಿ ನಾಯಕರನ್ನು ಟೀಕಿಸಿದರು. ಖಾಲಿ ಇರುವ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಭರ್ತಿ ಮಾಡದೆ ಖಾಲಿ ಇಲ್ಲದಿರುವ ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆ ಮಾಡಿರುವುದನ್ನು ನೋಡಿದರೆ ಅವರಲ್ಲಿ ಸಮರ್ಥರಿಲ್ಲ ಅಥವಾ ಸಮರ್ಥರಿದ್ದರೂ ನಂಬಿಕೆ ವಿಶ್ವಾಸವಿಲ್ಲ ಎಂಬಂತೆ ಕಾಣುತ್ತದೆ ಎಂದು ಬಿಜೆಪಿ ಹೈಕಮಾಂಡ್ ಕಾಲೆಳೆದರು.

ಸಚಿವ ರಾಜಣ್ಣ ಒಬ್ಬ ಬಫೂನ್: ಸಂಸದ ಮುನಿಸ್ವಾಮಿ

ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆಯ ನಡುವೆಯೂ ಬರ ಪರಿಹಾರದ ಹಣ ನೀಡುವ ವಿಷಯದಲ್ಲಿ ಮುಖ್ಯಮಂತ್ರಿಗಳು ಶೀಘ್ರದಲ್ಲಿಯೇ ತೀರ್ಮಾನಿಸಲಿದ್ದಾರೆ. ನಮ್ಮ ಪಾಲಿನ ತೆರಿಗೆ ಹಣವನ್ನು ನಿಯಮಾನುಸಾರ ಬರಪರಿಹಾರವಾಗಿ ನೀಡಲು ಕೇಂದ್ರ ಸರ್ಕಾರ ಆಸಕ್ತಿ ತೋರುತ್ತಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳು ಹಲವಾರು ಬಾರಿ ಪತ್ರ ಬರೆದಿದ್ದಾರೆ. ಈ ನಡುವೆ ಪ್ರಜಾಪ್ರಭುತ್ವ ವ್ಯವಸ್ಥೆಯ ಜನಾಭಿಪ್ರಾಯದ ವಿರುದ್ಧವಾಗಿ ಎರಡು ವಿರೋಧ ಪಕ್ಷಗಳು ನಡೆಸುತ್ತಿರುವ ಬರ ಅಧ್ಯಯನಕ್ಕೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ ಕಿಡಿಕಾರಿದರು.

click me!