ಮಸ್ಕಿ ಬಿಜೆಪಿ ಅಭ್ಯರ್ಥಿಗೆ ಕೊರೋನಾ ದೃಢ, ಸಿಎಂ ಸೇರಿದಂತೆ ಹಲವು ನಾಯಕರಿಗೆ ಆತಂಕ

By Suvarna News  |  First Published Apr 11, 2021, 8:03 PM IST

ಒಂದೆಡೆ ಉಪಚುನಾವಣೆ ಕಾವು ರಂಗೇರುತ್ತಿದ್ರೆ, ಮತ್ತೊಂದೆಡೆ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಗೆ ಕೊರೋನಾ ಅಟ್ಯಾಕ್ ಆಗಿದೆ. ಇದರಿಂದ ಸಿಎಂ ಸೇರಿದಂತೆ ಹಲವು ನಾಯಕರುಗಳಿಗೆ ಆತಂಕ ಶುರುವಾಗಿದೆ.


ರಾಯಚೂರು, (ಏ.11): ಜಿಲ್ಲೆಯ ಮಸ್ಕಿ ವಿಧಾನಸಭಾ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಘಟಾನುಘಟಿ ನಾಯಕರುಗಳು ತಮ್ಮ ಅಭ್ಯರ್ಥಿಗಳ ಪರ ಮತಬೇಟೆ ನಡೆಸುತ್ತಿದ್ದಾರೆ.

ಆದ್ರೆ, ಇನ್ನೇನು ಮತದಾನಕ್ಕೆ 6 ದಿನ ಬಾಕಿ ಇರುವಾಗಲೇ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್‌ ಅವರಿಗೆ ಇಂದು (ಭಾನುವಾರ) ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

Latest Videos

undefined

ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಕೊರೋನಾಗೆ ಬಲಿ!

ಪ್ರತಾಪ್ ಗೌಡ ಅವರಿಗೆ ಲಿಂಗಸುಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಆರ್‌.ಟಿ.ಪಿ.ಸಿ ಆರ್ ಟೆಸ್ಟ್ ಮಾಡಲಾಗಿತ್ತು. ಪರೀಕ್ಷೆಯಲ್ಲಿ ಪ್ರತಾಪ್ ಗೌಡ ಪಾಟೀಲ್ ಗೆ ಸೋಂಕು ಧೃಡವಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆದ್ರೆ, ಅದ್ಯಾವುದನ್ನು ಲೆಕ್ಕಿಸದೇ ಸಿಎಂ ಯಡಿಯೂರಪ್ಪ ಮತ್ತು ಇತರ ಹಲವು ಸಚಿವರ ಜೊತೆ ಪ್ರತಾಪ್ ಗೌಡ ಪಾಟೀಲ್ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಇದರಿಂದ ಸಿಎಂ ಬಿ.ಎಸ್.ಯಡಿಯೂರಪ್ಪ, ಸಿ.ಟಿ.ರವಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಬಿಜೆಪಿಯ ನಾಯಕರಿಗೆ ಕೊರೋನಾ ಭೀತಿ ಶುರುವಾಗಿದೆ.

ಮಾಜಿ IPS ಅಧಿಕಾರಿ, ಬಿಜೆಪಿ ನಾಯಕ ಅಣ್ಣಾಮಲೈಗೆ ಕೊರೋನಾ!

ಇನ್ನು ತಮಿಳುನಾಡು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಇನ್ನು ಮಾಜಿ ಐಪಿಎಸ್ ಅಧಿಕಾರಿ ತಮಿಳುನಾಡು ಬಿಜೆಪಿ ಉಪಾಧ್ಯಕ್ಷ ಅಣ್ಣಾಮಲೈ ಅವರಿಗೂ ಕೊರೋನಾ ಸೋಂಕು ತಗುಲಿರುವುದನ್ನು ಇಲ್ಲಿ ಸ್ಮರಿಸಬಹುದು.
 

click me!