
ಬೆಳಗಾವಿ (ಡಿ.11): ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ದ ಡಿ.13ರಂದು ಸುಮಾರ 25ಸಾವಿರಕ್ಕೂ ಹೆಚ್ಚಿನ ಜನಸೇರಿ ಬೃಹತ್ ಜನಾಂದೋಲನ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗುವದು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ನಗರದ ಖಾಸಗಿ ಹೊಟೆಲೊಂದರಲ್ಲಿ ಕರೆದ ಬಿಜೆಪಿ ಪ್ರಮುಖರ ಸಭೆಯಲ್ಲಿ ಮಾತನಾಡಿ, ರಾಜ್ಯ ರಾಜಕೀಯ ಬದಲಾವಣೆಗೆ ಬೆಳಗಾವಿ ಹೆಸರಾಗಿದ್ದು ಬದಲಾವಣೆಯ ಗಾಳಿ ಬೆಳಗಾವಿಯಿಂದ ಮಾಡಲು ನಿರ್ಣಯ ಕೈಗೊಳ್ಳಲಾಯಿತು. ರಾಷ್ಟ್ರ ರಾಜಕೀಯಕ್ಕೆ ಕರ್ನಾಟಕ ಅತ್ಯಂತ ಪ್ರಮುಖ ಸ್ಥಾನ ವಹಿಸಿದರೆ ಕರ್ನಾಟಕ್ಕೆ ಬೆಳಗಾವಿ ಜಿಲ್ಲೆ ಮಹತ್ವ ಹೊಂದಿದೆ.
ಆದ್ದರಿಂದ ಬೆಳಗಾವಿ ಜಿಲ್ಲೆಯಿಂದ ಭ್ರಷ್ಟಾಚಾರದಲ್ಲಿ ಮುಳಗಿರುವ ರಾಜ್ಯ ಕಾಂಗ್ರೆಸ್ ಕಿತ್ತೊಗೆಯಲು ಗಂಡು ಮೆಟ್ಟಿನ ಸ್ಥಳ ಬೆಳಗಾವಿಯಿಂದ ಪ್ರತಿಭಟನಾ ಹಮ್ಮಿಕೊಳ್ಳುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ನೆತೃತ್ವದ ಸರ್ಕಾರ ರಚಿಸುವ ವರೆಗೆ ವಿಶ್ರಮಿಸದೆ ಕಾರ್ಯಕರ್ತರಾದ ನಾವೆಲ್ಲರೂ ಶ್ರಮಿಸೊಣ. ಭಿಕರ ಬರಗಾಲದಲ್ಲಿ ಎಕರೆಗೆ ಪುಡಿಗಾಸು ನೀಡಲು ಇನ್ನು ಯೋಚಿಸುತ್ತಿರುವ ಹಾಗೂ ಹಿಂದೂ ವಿರೊಧಿ ನೀತಿ ಜಾತಿಗಳ ನಡುವೆ ಬೆಂಕಿ ಹಚ್ಚುತ್ತಿರುವ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ತೊಲಗುವಂತೆ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಕರೆ ನೀಡಿದರು.
ಜಾತಿ ಗಣತಿ ವರದಿ ತಿಳಿಯದೇ ಕೆಲವರ ವಿರೋಧ: ಸಚಿವ ಶಿವರಾಜ ತಂಗಡಗಿ
ರೈತರ ಬಗ್ಗೆ ಕಾಳಜಿವಿಲ್ಲದ ಕಾಂಗ್ರೆಸ್ ಸರ್ಕಾರ: ರಾಜ್ಯ ಸರ್ಕಾರಕ್ಕೆ ಬರಗಾಲದ ಸಂದರ್ಭದಲ್ಲಿ ರೈತರಿಗೆ ಪರಿಹಾರ ಕೊಡಬೇಕು ಎನ್ನುವುದು ಪ್ರಾಮಾಣಿಕ ಕಳಕಳಿ ಇಲ್ಲ. ಆದರೆ, ಅಲ್ಪ ಸಂಖ್ಯಾತರಿಗೆ ₹10 ಸಾವಿರ ಕೋಟಿ ನೀಡುವುದಾಗಿ ಮುಖ್ಯಮಂತ್ರಿ ಘೋಷಣೆ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಗೆ ಪರಿಹಾರ ಕೊಡಲು ಸರ್ಕಾರದ ಖಜಾನೆಯಲ್ಲಿ ಹಣ ಇಲ್ಲದಿದ್ದರೂ ಅಲ್ಪಸಂಖ್ಯಾತರಿಗೆ ಹಣ ಕೊಡುತ್ತೇವೆ ಎಂದು ಸಿಎಂ ಹೇಳುತ್ತಾರೆ. ರಾಜ್ಯ ಸರ್ಕಾರದ ಆದ್ಯತೆ ಸಂಕಷ್ಟದಲ್ಲಿರುವ ರೈತರಲ್ಲ. ಇವರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದನೆ ಮಾಡುತ್ತಿಲ್ಲ. ಅಲ್ಪಸಂಖ್ಯಾತರ ಒಲೈಕೆ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಕೇಂದ್ರ ಸರ್ಕಾರದಿಂದ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್
ಅಧಿವೇಶನ ಸಂದರ್ಭದಲ್ಲಿಯೂ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ವಿಚಾರಕ್ಕೆ ಉತ್ತರಿಸಿದ ಅವರು, ಕಾಂಗ್ರೆಸ್ ಸರ್ಕಾರಕ್ಕೆ ರೈತರ ಬಗ್ಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಈ ಕುರಿತು ಸದನದಲ್ಲಿ ಈ ಬಗ್ಗೆ ಪ್ರಶ್ನೆ ಮಾಡುತ್ತೇನೆ ಎಂದರು. ಪೃಥ್ವಿಸಿಂಗ್ ಮೇಲೆ ಹಲ್ಲೆ ವಿಚಾರಕ್ಕೆ ಉತ್ತರಿಸಿ, ಬಿಜೆಪಿಯ ದಲಿತ ಮುಖಂಡನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಆಗಿದೆ. ಪೊಲೀಸ್ ಅಧಿಕಾರಿಗಳು ಜಸ್ಟ್ ಕೇಸ್ ಮಾತ್ರ ದಾಖಲು ಮಾಡಿದ್ದಾರೆ. ಅಟೆಮ್ಟ್ ಟೂ ಮರ್ಡರ್ ಕೇಸ್ ಹಾಕೋದಿಲ್ಲ, 307 ಕೇಸ್ ಹಾಕೋದಿಲ್ಲ. ಅದರ ಬದಲು ಕಾಂಗ್ರೆಸ್ ಎಂಎಲ್‌ಸಿ ಮೇಲೆ ಎ1 ಮಾಡಿದ್ದಾರೆ. ಪೊಲೀಸರ ಮೇಲೆ ನನಗೆ ನಂಬಿಕೆ ಇಲ್ಲ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.