ಎಂಡಿಎ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈ ಗೊಂಬೆಯಾಗಿದ್ದರೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆರೋಪಿಸಿದರು.
ಮೈಸೂರು (ಆ.25): ಎಂಡಿಎ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈ ಗೊಂಬೆಯಾಗಿದ್ದರೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರೀ ಕರ್ನಾಟಕವಲ್ಲ ದೇಶದ ಬೇರೆ ರಾಜ್ಯಗಳಲ್ಲೂ ಈ ರೀತಿ ಉದಾಹರಣೆ ನೋಡಬಹುದು.
ಖಾಸಗಿ ವ್ಯಕ್ತಿ ಕೊಟ್ಟಿರುವ ದೂರನ್ನು ಇಷ್ಟು ತೀವ್ರವಾಗಿ ಪರಿಗಣಿಸಿದ್ದಾರೆ. ಅದೇ ಲೋಕಾಯುಕ್ತ ಅಧಿಕಾರಿಗಳು ಸಲ್ಲಿಸಿರುವ ಮನವಿಯನ್ನು ಯಾಕೆ ಇನ್ನು ಪರಿಗಣಿಸಿಲ್ಲ ಎಂದು ಕಿಡಿಕಾರಿದರು. ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧವೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದರೆ ಅವರು ಕೇಂದ್ರದ ಸಚಿವರು ಎಂದು ಅನುಮತಿ ಕೊಟ್ಟಿಲ್ಲ. ಇದರಿಂದ ಸ್ಪಷ್ಟವಾಗಿ ಗೊತಾಗುತ್ತೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈ ಗೊಂಬೆಯಾಗಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.
undefined
ಕಾರ್ಕಳ ಅತ್ಯಾಚಾರ ರಾಜ್ಯವೇ ತಲೆ ತಗ್ಗಿಸುವ ಕೃತ್ಯ: ಶಾಸಕ ವೇದವ್ಯಾಸ್ ಕಾಮತ್
ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಆಗ್ರಹ: ರಾಜ್ಯ ಸರ್ಕಾರವು ಶೀಘ್ರದಲ್ಲಿಯೇ ನಗರ ಪಾಲಿಕೆ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ ಕಾರಣಕ್ಕಾಗಿ ಅಧಿಕಾರದಲ್ಲಿದ್ದ ರಾಜಕೀಯ ಪಕ್ಷಗಳು, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಮನಸ್ಸು ಮಾಡದೇ ನಿರ್ಲಕ್ಷ್ಯವಹಿಸುವ ಮೂಲಕ ಪ್ರಜಾಪ್ರಭುತ್ವದ ಹೆಸರಿನಲ್ಲಿ ಜನರ ಶೋಷಣೆ ಮಾಡಿದೆ ಎಂದು ಆರೋಪಿಸಿದರು.
ಈಗಿನ ಕಾಂಗ್ರೆಸ್ ಸರ್ಕಾರ ಚುನಾವಣೆಗೆ ಇರುವ ಅಡೆತಡೆಗಳನ್ನು ನಿವಾರಿಸಿಕೊಂಡು ಆದಷ್ಟು ಬೇಗ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಮೂಲ ಪ್ರಜಾಪ್ರಭುತ್ವಕ್ಕೆ ಗೌರವ ಸಲ್ಲಿಸಬೇಕು ಎಂದರು. ರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡು ಗ್ರಾಮಾಂತರ ಪ್ರದೇಶದಲ್ಲಿಯೂ ಪಕ್ಷವನ್ನು ಸಂಘಟಿಸಲಾಗುತ್ತಿದ್ದು, ತಾಲೂಕುವಾರು ಘಟಕಗಳನ್ನು ಸ್ಥಾಪಿಸಲಾಗುವುದು.
ತಂದೆ ಕನಸಿನಂತೆ ಸಿಇಟಿ, ನೀಟ್ ತರಬೇತಿ ಕೇಂದ್ರ ಪ್ರಾರಂಭಿಸಿದೆ: ಶಾಸಕ ದರ್ಶನ್ ಧ್ರುವನಾರಾಯಣ್
ಇತ್ತೀಚೆಗೆ ನಗರ ಪ್ರದೇಶದೊಂದಿಗೆ ಗ್ರಾಮೀಣ ಪ್ರದೇಶದಲ್ಲಿಯೂ ಆಮ್ ಆದ್ಮಿ ಪಾರ್ಟಿಯ ಬಗ್ಗೆ ಜನರಿಗೆ ಒಲವು ಹೆಚ್ಚಾಗಿರುವುದು ಕಂಡು ಬಂದಿದ್ದು, ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶಗಳಲ್ಲೂ ಪಕ್ಷವನ್ನು ಸಂಘಟಿಸಲಾಗುವುದು ಎಂದು ಅವರು ಹೇಳಿದರು. ಕಳೆದ ಬಾರಿ ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲಾಗಿತ್ತು, ಈ ಮೂಲಕ ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬಾರದು ಎಂಬ ಉದ್ದೇಶದಿಂದ ಕೈ ಜೋಡಿಸಲಾಗಿತ್ತು. ಆದರೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿಯು ಸ್ವತಂತ್ರ್ಯವಾಗಿ ಸ್ಪರ್ಧಿಸಲಿದೆ ಎಂದು ಅವರು ಸ್ಪಷ್ಟಪಡಿಸಿದರು.