ವಿಮಾನ ನಿಲ್ದಾಣ ಉದ್ಘಾಟನೆಗೆ ಮೋದಿ ಸುಮ್ಮನೆ ಬಂದು ಕಥೆ ಹೇಳಿ ಹೋಗುವುದಲ್ಲ. ಇಲ್ಲಿನ ವಿಐಎಸ್‌ಎಲ್ ಕಾರ್ಖಾನೆಯ ಕಥೆ-ವ್ಯಥೆಯನ್ನು ಕೇಳಬೇಕು. ಧಮ್ಮು ತಾಕತ್ತಿದ್ದರೆ ಇಲ್ಲಿನ ಜನಪ್ರತಿನಿಧಿಗಳು ಇದನ್ನು ಅವರಿಗೆ ಅರ್ಥ ಮಾಡಿಸಲಿ ಎಂದು ಸವಾಲು ಹಾಕಿದ ಎಚ್.ವಿಶ್ವನಾಥ್
ಶಿವಮೊಗ್ಗ(ಫೆ.26): ‘ಈಗ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಎಂದರೆ .50 ಕೋಟಿ ದುಡ್ಡು ಬೇಕು. ಅಷ್ಟೊಂದು ದುಡ್ಡು ನನ್ನ ಬಳಿ ಇಲ್ಲ. ಹೀಗಾಗಿ ಈ ಬಾರಿ ಚುನಾವಣೆಯಿಂದ ನಾನು ಹಾಗೂ ನನ್ನ ಮಗ ಚುನಾವಣೆಯಲ್ಲಿ ಸ್ಪರ್ಧಿಸಲ್ಲ’ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಹೇಳಿದ್ದಾರೆ.
ಪ್ರೆಸ್ ಟ್ರಸ್ಟ್‌ನಲ್ಲಿ ಶನಿವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ನಾನು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ನನ್ನ ತವರು ಮನೆ. ನಾನಿರುವುದು ಅಲ್ಲಿಯೇ. ವಿಧಾನ ಪರಿಷತ್‌ಗೆ ಯಾವ ಪಕ್ಷದಿಂದಲೂ ನನ್ನನ್ನು ನೇಮಕ ಮಾಡಿಲ್ಲ. ಬದಲಾಗಿ ಸಾಹಿತ್ಯ ಕೃತಿಗಳನ್ನು ಬರೆದಿರುವುದರಿಂದ ಸಾಹಿತ್ಯ ಕ್ಷೇತ್ರದಿಂದ ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಕೋಲಾರಕ್ಕೂ ಹೋಗುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
BS Yadiyurappa: 40 ವರ್ಷಗಳ ಬಳಿಕ ವಿಧಾನಸೌಧದ ನಂಟು ಕಳಚಿದ ರಾಜಾಹುಲಿ!
ವಿಮಾನ ನಿಲ್ದಾಣ ಉದ್ಘಾಟನೆಗೆ ಮೋದಿ ಸುಮ್ಮನೆ ಬಂದು ಕಥೆ ಹೇಳಿ ಹೋಗುವುದಲ್ಲ. ಇಲ್ಲಿನ ವಿಐಎಸ್‌ಎಲ್ ಕಾರ್ಖಾನೆಯ ಕಥೆ-ವ್ಯಥೆಯನ್ನು ಕೇಳಬೇಕು. ಧಮ್ಮು ತಾಕತ್ತಿದ್ದರೆ ಇಲ್ಲಿನ ಜನಪ್ರತಿನಿಧಿಗಳು ಇದನ್ನು ಅವರಿಗೆ ಅರ್ಥ ಮಾಡಿಸಲಿ ಎಂದು ಸವಾಲು ಹಾಕಿದರು.