
ಬೆಂಗಳೂರು(ಜ.08): ಅಗತ್ಯ ಬಂದರೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರನ್ನೂ ಭೇಟಿ ಮಾಡುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೇಟಿ ಮಾಡುವ ಅವಶ್ಯಕತೆ ಬಂದರೆ ಸುಮಲತಾ ಅವರನ್ನು ಕೂಡಾ ಭೇಟಿ ಆಗುತ್ತೇನೆ. ತಪ್ಪೇನಿದೆ ಎಂದರು.
ಸುಮಲತಾ ಅವರು ಬಿಜೆಪಿಯಲ್ಲಿ ಮುಂದುವರಿಯುವುದಾದರೆ ಮಿತ್ರಪಕ್ಷ ಬಿಜೆಪಿ ಪರವಾಗಿ ಅವರನ್ನು ಭೇಟಿ ಮಾಡುತ್ತೇನೆ. ನಾವೇನು ಇಂತಹ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇವೆ ಎಂದು ಹೇಳಿದ್ದೀವಾ? ಇಂತಹವರಿಗೆ ತೊಂದರೆ ಕೊಟ್ಟು ನಿಲ್ಲಬೇಕು ಅಂತ ಖಂಡಿತ ಇಲ್ಲ. ಈ ಬಗ್ಗೆ ಇನ್ನೂ ಚರ್ಚೆಯೇ ಆಗಿಲ್ಲ. ಇವೆಲ್ಲ ಪ್ರಾರಂಭಿಕ ಹಂತದಲ್ಲಿ ಇದೆ. ಬಿಜೆಪಿ- ಜೆಡಿಎಸ್ ನಾಯಕರೆಲ್ಲ ಕೂತು ಸೌಹಾರ್ದಯುತವಾಗಿ ಕೆಲಸ ಮಾಡೋಕೆ ಎಲ್ಲರ ಜೊತೆಗೂ ಚರ್ಚೆ ನಡೆಸುತ್ತೇವೆ ಎಂದು ತಿಳಿಸಿದರು.
ಮಂಡ್ಯ ಲೋಕಸಭಾ ಕಣದಲ್ಲಿ ಕಾಂಗ್ರೆಸ್‌ಗೆ ಸಮರ್ಥ ಅಭ್ಯರ್ಥಿಗಳೇ ಇಲ್ಲ! ಜೆಡಿಎಸ್ ಸಜ್ಜು, ಸುಮಲತಾ ನಡೆ ಏನು?
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ನಾನು ಸ್ಪರ್ಧಿಸುವ ತೀರ್ಮಾನ ಮಾಡಿಲ್ಲ. ಸ್ನೇಹಿತರುಗಳು ಬಯಸುತ್ತಿದ್ದಾರೆ ಅಷ್ಟೇ. ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಅಂತ ಹೇಳುತ್ತಿದ್ದಾರೆ. ಮಾಧ್ಯಮಗಳಲ್ಲಿ ಕೂಡ ವರದಿಗಳು ಬರುತ್ತಿವೆ. ಸಮಯ ಬಂದಾಗ ಅದನ್ನು ಹೇಳೋಣ ಎಂದು ಮಾರ್ಮಿಕವಾಗಿ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.