ಮತ್ತೆ ಬಿಜೆಪಿ ಭಿನ್ನರಾಗ: ಯತ್ನಾಳ್‌ ನೇತೃತ್ವದಲ್ಲಿ ವಿಜಯೇಂದ್ರ ವಿರೋಧಿಗಳ ಸಭೆ!

By Kannadaprabha News  |  First Published Nov 16, 2024, 7:11 AM IST

ಮಾಜಿ ಸಚಿವ ಕುಮಾರ್‌ ಬಂಗಾರಪ್ಪ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಯತ್ನಾಳ್‌ ಜತೆಗೆ ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ ಮತ್ತಿತರರು ಪಾಲ್ಗೊಂಡಿದ್ದರು. 


ಬೆಂಗಳೂರು(ನ.16): ಉಪಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಾಯಕತ್ವದ ವಿರುದ್ಧ ಅಸಮಾಧಾನಗೊಂಡಿರುವ ಪಕದ ಹಲವು ನಾಯಕರು ಹಿರಿಯ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ನೇತೃತ್ವದಲ್ಲಿ ಪ್ರತ್ಯೇಕ ಸಭೆ ನಡೆಸಿ ವಕ್ಫ್‌ ಆಸ್ತಿ ಕುರಿತಂತೆ ಜನಾಂದೋಲನ ನಡೆಸಲು ತೀರ್ಮಾನಿಸಿದ್ದಾರೆ. 

ವಕ್ಫ್‌ ಬೋರ್ಡ್ ಮೂಲಕ ರೈತರ ಜಮೀನಿಗೆ ನೋಟಿಸ್‌ ನೀಡುತ್ತಿರುವ ಸರ್ಕಾರದ ವಿರುದ್ಧ ಇದೇ ತಿಂಗಳ 25ರಿಂದ ಡಿ.25ರವರೆಗೆ ಬೀದರ್ ನಿಂದ ಜನಜಾಗೃತಿ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ. ಈ ಅಭಿಯಾನಕ್ಕೆ ಯತ್ನಾಳ್ ಅವರೇ ನೇತೃತ್ವ ವಹಿಸಲಿದ್ದಾರೆ. ಶುಕ್ರವಾರ ನಗರದಲ್ಲಿ ಮಾಜಿ ಸಚಿವ ಕುಮಾರ್‌ ಬಂಗಾರಪ್ಪ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಯತ್ನಾಳ್‌ ಜತೆಗೆ ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ ಮತ್ತಿತರರು ಪಾಲ್ಗೊಂಡಿದ್ದರು. ವಕ್ಫ್‌ ಬೋರ್ಡ್‌ನಿಂದ ಯಾವುದೇ ರೀತಿಯ ಅನ್ಯಾಯವಾಗಿದ್ದರೆ ಸಾರ್ವಜನಿಕರು 9035675734 ವಾಟ್ಸಪ್ ಸಂಖ್ಯೆಗೆ ಮಾಹಿತಿ ಕಳುಹಿಸಲು ಈ ನಾಯಕರು ಮನವಿ ಮಾಡಿದ್ದಾರೆ.

Tap to resize

Latest Videos

undefined

ಭಾರತವನ್ನು ಹಿಂದೂ ಧರ್ಮದ ಪ್ರಯೋಗ ಶಾಲೆ ಮಾಡ್ತೀವಿ: ಯತ್ನಾಳ್‌

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅರವಿಂದ ಲಿಂಬಾವಳಿ, ವಕ್ಫ್‌ ಆಸ್ತಿ ಕುರಿತಂತೆ ಜನರಿಗೆ ತೊಂದರೆ ಆಗುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಯತ್ನಾಳ್ ಅವರು ವಿಜಯಪುರದಲ್ಲಿ ಹೋರಾಟ ಪ್ರಾರಂಭ ಮಾಡಿದ್ದರು. ಅವರ ಹೋರಾಟದ ಪರಿಣಾಮವಾಗಿ ಕೇಂದ್ರದ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು. 

ವಕ್ಫ್‌ ವಿಚಾರದಲ್ಲಿ ಸಾಕಷ್ಟು ದೂರು ಬಂದಿವೆ. ಈ ತಿಂಗಳ 25ರಿಂದ ಡಿ.25ರವರೆಗೂ ಒಂದು ತಿಂಗಳ ಕಾಲ ಜನ ಜಾಗೃತಿ ಅಭಿಯಾನ ಮಾಡುತ್ತೇವೆ. ಒಂದು ವಾರ್‌ರೂಮ್ ಸಹ ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದರು. ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಈ ಜನಜಾಗೃತಿ ಅಭಿಯಾನ ನಡೆಯಲಿದೆ. ಬೀದರ್‌ ಜಿಲ್ಲೆಯಿಂದ ಅಭಿ ಯಾನ ಪ್ರಾರಂಭವಾಗಿ ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಯ ಮೂಲಕ ಸಾಗಲಿದೆ ಎಂದು ಮಾಹಿತಿ ನೀಡಿದರು. 

195400 ಆರಂಭವಾದ ಗೆಜೆಟ್ ಆದೇಶವನ್ನು ರದ್ದು ಮಾಡಬೇಕು. ರೈತರು, ಮಠಗಳು, ಸರ್ಕಾರಿ ಜಾಗಗಳಿಗೆ ವಕ್ಫ್‌ ಕ್ಷೇಮ್ ಮಾಡುತ್ತಿದೆ. ಆ ಜಾಗಗಳನ್ನು ಕಾಯಂ ವಾಪಸ್ ಕೊಡಬೇಕು ಹಾಗೂ ಅನ್ವರ್‌ಮಾಣಿಪಾಡಿ ವರದಿ ಜಾರಿಗೊಳಿಸ ಬೇಕು ಎಂದು ಇದೇ ವೇಳೆ ಲಿಂಬಾವಳಿ ಆಗ್ರಹಿಸಿದರು. 

ಯತ್ನಾಳ್‌ ಮಾತನಾಡಿ, ರೈತರು, ಮಠಗಳಿಗೆ ವಕ್ಫ್‌ ಆದೇಶದಿಂದ ಅನ್ಯಾಯವಾಗುತ್ತಿದೆ. ಕ್ರಿಮಿನಲ್ ಪ್ರಕರಣಗಳು ರದ್ದಾಗಿ ಎಲ್ಲವೂ ನ್ಯಾಯಾಲಯದ ಮೂಲಕವೇ ತೀರ್ಮಾನವಾಗಬೇಕು. ಕರ್ನಾಟಕದಲ್ಲಿ ಜನ ಜಾಗೃತಿ ಮಾಡುವ ಅವಶ್ಯಕತೆ ಇದೆ. ಜನಜಾಗೃತಿ ಮೂಲಕ ಜಂಟಿ ಸಂಸದೀಯ ಸಮಿತಿಗೆ ವರದಿಯನ್ನು ನೀಡುತ್ತೇವೆ. ಈಗಾಗಲೇ ಕೇಂದ್ರ ಸರ್ಕಾರ ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ. "ಎಷ್ಟೋ ಮಾಹಿತಿ ಯಾವುದೇ ಸರ್ಕಾರಕ್ಕೂ ಇಲ್ಲ ಎಂದರು. ರಾಜ್ಯದಲ್ಲಿ ಮೊದಲಿಗೆ ಒಂದು ಲಕ್ಷ ಎಕರೆ ಜಮೀನು ತಮ್ಮದಿದೆ ಎಂದರು. ಈಗ 6 ಲಕ್ಷ ಎಕರೆ ಭೂಮಿ ವಕ್ಫ್‌ ಬೋಡ್ ೯ಗೆ ತೆಗೆದುಕೊಳ್ಳಲುಮಾಡಿದ್ದಾರೆ. ಇಡೀ ದೇಶದಲ್ಲಿ 38 ಲಕ್ಷ ಎಕರೆ ಜಮೀನು ತಮ್ಮದು ಎನ್ನುತ್ತಿದ್ದಾರೆ. ಚಂದ್ರಬಾಬು ನಾಯ್ಡು ನೇತೃತ್ವದಲ್ಲಿ ಹೈದರಾಬಾದ್ ನಲ್ಲಿ ಸಮಾವೇಶ ಮಾಡುತ್ತಿದ್ದಾರೆ. ಅದಕ್ಕಾಗಿ ನಾವು ಲೀಗಲ್ ಟೀಂ ಮೂಲಕ ಹೋರಾಟ ಮಾಡುತ್ತಿದ್ದೇವೆ. ಅದರ ಜೊತೆಗೆ ರಾಜ್ಯದ ಜನರಿಗೆ ಜನಜಾಗೃತಿ ಅಭಿಯಾನ ಮಾಡುತ್ತಿದ್ದೇವೆ ಎಂದರು. 

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಯತ್ನಾಳ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಡಿ ಯೂರಪ್ಪ, ಬೊಮ್ಮಾಯಿ ಸೇರಿ ಯಾರೇ ವಕ್ಫ್‌ ನಿಂದ ನೋಟಿಸ್‌ ಕೊಟ್ಟಿದ್ದರೂ ನಮ್ಮ ಸಮರ್ಥನೆ ಇಲ್ಲವೇ ಇಲ್ಲ. ನಮ್ಮ ಹೋರಾಟದ ಉದ್ದೇಶ ಟ್ರಿಬ್ಯುನಲ್ ರದ್ದಾಗಬೇಕು ಎಂದರು. 

ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು, ಈ ಜನಜಾಗೃತಿ ಅಭಿಯಾನಕ್ಕೆ ಪಕ್ಷದ ಕೇಂದ್ರ ಸಮಿತಿಯ ಅನುಮತಿ ಪ್ರಶ್ನೆ ಇಲ್ಲಿ ಉದ್ಭವಿಸುವುದಿಲ್ಲ. ಈಗಾಗಲೇ ನಮ್ಮ ಪ್ರಧಾನಿ, ಗೃಹ ಸಚಿವರು ಧ್ವನಿಗೂಡಿಸಿದ್ದಾರೆ. ಇದು ಬಿಜೆಪಿಯಿಂದ ಮಾಡುತ್ತಿರುವ ಹೋರಾಟ. ನಮ್ಮ ಹೋರಾಟಕ್ಕೆ ಕೇಂದ್ರ ಸಚಿವರು ಬಂದಿದ್ದರು. ಅವರು ಬಂದಿದ್ದು ನಮ್ಮ ಹೋರಾಟಕ್ಕೆ ಬೆಂಬಲ ಇದೆ ಅಂತ ಅಲ್ಲವೇ ಎಂದು ಹೇಳಿದರು.

ಕಾಂಗ್ರೆಸ್‌ನೊಂದಿಗೆ ಅಡ್ಜಸ್ಟ್‌ಮೆಂಟ್ ಮಾಡಿಕೊಳ್ಳದ ಬಿಜೆಪಿ ನಾಯಕರ ಮೇಲೆ ಸರ್ಕಾರ ಕೇಸ್ ಹಾಕಿದೆ; ಯತ್ನಾಳ್!

ಯತ್ನಾಳ್‌ ನೇತೃತ್ವ ಬಸನಗೌಡ ಪಾಟೀಲ್ ಯತ್ನಾಳ್‌ ನೇತೃತ್ವದಲ್ಲಿ ವಕ್ಫ್‌ ಬಗ್ಗೆ ಜನಜಾಗೃತಿ ಅಭಿಯಾನ ನಡೆಯಲಿದೆ. ಬೀದರ್‌ಜಿಲ್ಲೆಯಿಂದ ಅಭಿಯಾನ ಪ್ರಾರಂಭವಾಗಿ ಕಲಬುರಗಿ, ಯಾದಗಿರಿ, ವಿಜಯ ಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಯ ಮೂಲಕ ಸಾಗಲಿದೆ ಎಂದು ಅರವಿಂದ ಲಿಂಬಾವಳಿ ತಿಳಿಸಿದ್ದಾರೆ. 

ಅನುಮತಿ ಬೇಕಿಲ್ಲ ಈ ಅಭಿಯಾನಕ್ಕೆ ಪಕ್ಷದ ಕೇಂದ್ರ ಸಮಿತಿಯ ಅನುಮತಿ ಪ್ರಶ್ನೆ ಉದ್ಭವಿಸುವುದಿಲ್ಲ. ಈಗಾಗಲೇ ಪ್ರಧಾನಿ, ಗೃಹ ಸಚಿವರು ಇದಕ್ಕೆ ಧ್ವನಿಗೂಡಿಸಿದ್ದಾರೆ. ಇದು ಬಿಜೆಪಿಯಿಂದ ಮಾಡುತ್ತಿರುವ ಹೋರಾಟ. ನಮ್ಮ ಹೋರಾಟಕ್ಕೆ ಕೇಂದ್ರ ಸಚಿವರೇ ಬಂದಿದ್ದರು ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. 

click me!