ತುಮಕೂರಿಗೆ ಹೆಚ್ಚಿನ ಶಕ್ತಿ ತುಂಬಲು ಮೆಟ್ರೋ, ಇಂಟರ್‌ಸಿಟಿ ರೈಲು: ಡಿ.ಕೆ.ಶಿವಕುಮಾರ್

Kannadaprabha News   | Kannada Prabha
Published : Jun 22, 2025, 08:34 AM IST
Karnataka Deputy Chief Minister DK Shivakumar (Photo/ANI)

ಸಾರಾಂಶ

ತುಮಕೂರಿಗೆ ಹೆಚ್ಚಿನ ಶಕ್ತಿ ತುಂಬಲು, ಸ್ಯಾಟ್‌ಲೈಟ್ ಟೌನ್ ಜತೆಗೆ ಅಂತರನಗರ ರೈಲು ಹಾಗೂ ಮೆಟ್ರೋ ರೈಲು ನೀಡಲು ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ತುಮಕೂರು (ಜೂ.22): ತುಮಕೂರಿಗೆ ಹೆಚ್ಚಿನ ಶಕ್ತಿ ತುಂಬಲು, ಸ್ಯಾಟ್‌ಲೈಟ್ ಟೌನ್ ಜತೆಗೆ ಅಂತರನಗರ ರೈಲು ಹಾಗೂ ಮೆಟ್ರೋ ರೈಲು ನೀಡಲು ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವದಲ್ಲಿ ಮಾತನಾಡಿದರು. ಬೆಂಗಳೂರಿನಂತೆ ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಅನೇಕ ಯೋಜನೆ ರೂಪಿಸುತ್ತಿದೆ. ಕಲ್ಪತರು ನಾಡು ತುಮಕೂರು ಜಿಲ್ಲೆಗೆ ತನ್ನದೇ ಆದ ಇತಿಹಾಸವಿದೆ.

ಧಾರ್ಮಿಕವಾಗಿ, ಶೈಕ್ಷಣಿಕವಾಗಿ ದೊಡ್ಡ ಪರಂಪರೆ ಇದೆ ಎಂದರು. ನೇರ ನುಡಿ ಸ್ವಾಭಿಮಾನದ ನಾಯಕ ರಾಜಣ್ಣ ಅವರದ್ದು ಇದು ಐತಿಹಾಸಿಕ ಜನ್ಮದಿನ ಕಾರ‍್ಯಕ್ರಮ. ನೇರ ನುಡಿ ಸ್ವಾಭಿಮಾನದ ನಾಯಕ ರೈತಾಪಿ ಜನರ ಬದುಕು ಸುಧಾರಣೆಯ ಗುರಿ ಹೊಂದಿರುವ, ಆತ್ಮೀಯ ಸ್ನೇಹಿತನ ಜನ್ಮದಿನವನ್ನು ಬಹಳ ಸಂಭ್ರಮದಿಂದ ಆಚರಿಸುತ್ತಿದ್ದೇವೆ. ರಾಜಣ್ಣ ಅವರಿಗೆ ಹಾಗೂ ಅವರ ಕುಟುಂಬಕ್ಕೆ ಜನರ ಸೇವೆ ಮಾಡಲು ಹೆಚ್ಚಿನ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಅವರು ತಿಳಿಸಿದರು.

ರೈತನಿಗೆ ಲಂಚ, ಬಡ್ತಿ, ನಿವೃತ್ತಿ, ಪಿಂಚಣಿ ಇಲ್ಲ. ರೈತರ ಹಿತಕ್ಕಾಗಿ ಸಹಕಾರ ಕ್ಷೇತ್ರಕ್ಕೆ ಹೆಚ್ಚು ಶಕ್ತಿ ನೀಡುತ್ತಿದ್ದೇವೆ. ರಾಜಣ್ಣ ಅವರು ಬಹಳ ಆಸಕ್ತಿಯಿಂದ ಈ ಸರ್ಕಾರದಲ್ಲಿ ಸಹಕಾರ ಸಚಿವರಾಗಿದ್ದಾರೆ. ನಾನು ಕೂಡ ಎಸ್.ಎಂ.ಕೃಷ್ಣ ಅವರ ಅವಧಿಯಲ್ಲಿ ಸಹಕಾರ ಸಚಿವನಾಗಿದ್ದಾಗ, ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಹಾಗೂ ಷಡಕ್ಷರಿ ಅವರನ್ನು ಎಸ್.ಎಲ್.ಡಿ ಬ್ಯಾಂಕ್ ಅಧ್ಯಕ್ಷರನ್ನಾಗಿ ಮಾಡುವ ಅವಕಾಶ ನನಗೆ ಸಿಕ್ಕಿತ್ತು ಎಂದು ಸ್ಮರಿಸಿದರು.

ತುಳಿತಕ್ಕೆ ಒಳಗಾದ ಸಮಾಜದ ಧೀಮಂತ ನಾಯಕನಿಗೆ ಶುಭ ಹಾರೈಸಲು ನಾವು ಇಲ್ಲಿ ಸೇರಿದ್ದೇವೆ. ನಾನು ಹಾಗೂ ರಾಜಣ್ಣ ಅವರು ಜಪಾನ್ ಹಾಗೂ ದಕ್ಷಿಣ ಕೊರಿಯಾ ಇತರೆ ದೇಶಗಳಲ್ಲಿ ನಡೆದ ಅಂತಾರಾಷ್ಟ್ರೀಯ ಸಹಕಾರ ಸಹಭಾಗಿತ್ವ ಕಾರ‍್ಯಕ್ರಮದಲ್ಲಿ ಭಾಗವಹಿಸಿದ್ದೆವು. ಆ ಮೂಲಕ ಸಹಕಾರ ಕ್ಷೇತ್ರದ ಬಗ್ಗೆ ಹೆಚ್ಚು ಅಧ್ಯಯನ ಮಾಡಿದ್ದೆವು. ಈಗ ನಾವು ಸರ್ಕಾರದಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!