* ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ನೀಡಿದ ಸಚಿವ ಬಿ. ಸಿ. ನಾಗೇಶ್
* ದಸರಾ ಮುಗಿದ ತಕ್ಷಣ ಬಿಸಿಯೂಟ ಆರಂಭ
* ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಘೋಷಣೆ
ಉಡುಪಿ, (ಅ.08): ದಸರಾ (Dasara) ಮುಗಿದ ತಕ್ಷಣ ಬಿಸಿಯೂಟ ಆರಂಭವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಸ್ಪಷ್ಟಪಡಿಸಿದರು.
ಇಂದು (ಅ.08) ಉಡುಪಿಯಲ್ಲಿ (Udupi) ಮಾತನಾಡಿದ ನಾಗೇಶ್ (BC Nagesh), ತಜ್ಞರ ಅಭಿಪ್ರಾಯದಂತೆ ದಸರಾ ಮುಗಿದ ತಕ್ಷಣವೇ ಶಾಲೆಗಳು (Schools) ಆರಂಭಿಸುತ್ತೇವೆ. ಜತೆಗೆ ದಸರಾ ಮುಗಿದ ತಕ್ಷಣ ಬಿಸಿಯೂಟ (Midday Meal) ಆರಂಭವಾಗಲಿದೆ. ಆಯಾ ಜಿಲ್ಲೆಯ ಅಧಿಕಾರಿಗಳು ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದಾರೆ ಎಂದು ಹೇಳಿದರು.
6ರಿಂದ 12ನೇ ಕ್ಲಾಸ್ ಪೂರ್ಣ ಪ್ರಮಾಣದಲ್ಲಿ ಆರಂಭ
ಭಗವಂತನ ಅನುಗ್ರಹದಿಂದ ರಾಜ್ಯದಲ್ಲಿ ಕೊರೋನಾ (Coronavirus) ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ. ಹಲವಾರು ಜಿಲ್ಲೆಯಲ್ಲಿ ಪಾಸಿಟಿವಿಟಿ (positivity) ಶೂನ್ಯ ಪ್ರಮಾಣದಲ್ಲಿದೆ. ಹೀಗಾಗಿ ತಜ್ಞರ ಅಭಿಪ್ರಾಯದಂತೆ ದಸರಾ ಮುಗಿದ ತಕ್ಷಣವೇ ಶಾಲೆಗಳು ಆರಂಭಿಸುತ್ತೇವೆ. ಜತೆಗೆ ಬಿಸಿಯೂಟ ಆರಂಭವಾಗಲಿದೆ ಎಂದರು.
ಎಲ್ಲರಿಗೂ ಶಾಲೆ(School) ಕಡ್ಡಾಯ ಮಾಡಿಲ್ಲ, ಮುಂದೆಯೂ ಕಡ್ಡಾಯ ಮಾಡಲ್ಲ. ಆನ್ಲೈನ್ (Online) ಆಫ್ ಲೈನ್ ಎರಡು ಮಾದರಿಯಲ್ಲಿ ತರಗತಿಗಳು (Class) ನಡೆಯಲಿದೆ. ಈಗ ಆರಂಭವಾಗಿರುವ ಶಾಲೆಗಳ ಹಾಜರಾತಿ ತೃಪ್ತಿಕರವಾಗಿದೆ ಎಂದು ತಿಳಿಸಿದರು.
ಆನ್ಲೈನ್ ತರಗತಿಯಿಂದ (Online Class) ಕೆಳ ಗ್ರಾಮೀಣ ಮಕ್ಕಳಿಗೆ ತೊಂದರೆಯಾಗಿದೆ. ಗ್ರಾಮೀಣ ಭಾಗದಲ್ಲಿ ಹೈಸ್ಕೂಲ್ ಮಕ್ಕಳ (Students) ಹಾಜರಾತಿ ಶೇ. 90ರಷ್ಟಿದೆ ಎಂದು ನಾಗೇಶ್ ಮಾಹಿತಿ ನೀಡಿದರು.
ಕೊರೋನಾ ಕಾರಣದಿಂದ ಕಳೆದೊಂದು ವರ್ಷದಿಂದ ವಿದ್ಯಾರ್ಥಿಗಳು ಶಿಕ್ಷಣ (Education) ಜೊತೆಗೆ ಬಿಸಿಯೂಟದಿಂದಲೂ ವಂಚಿರಾಗಿದ್ದರು. ಬಳಿಕ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಬಾರದು ಎಂದು ಬಿಸಿಯೂಟದ ಅಕ್ಕಿ, ಬೇಳೆ ಸೇರಿದಂತೆ ಆಹಾರ ಪದಾರ್ಥಗಳನ್ನ ಮನೆಗೆ ನೀಡಲಾಯ್ತು. ಇದೀಗ ಕೋವಿಡ್ ಕಡಿಮೆಯಾಗಿದ್ದರಿಂದ ಶಿಕ್ಷಣ ಕ್ಷೇತ್ರ ಹಂತ-ಹಂತವಾಗಿ ಚೇತರಿಸಿಕೊಳ್ಳುತ್ತಿದೆ.