ಪ್ರಭಾವಿಗಳು ಸಹಾಯ ಮಾಡುತ್ತಾರೆ ಎಂಬ ಭ್ರಮೆಯಲ್ಲಿದ್ದೆ : ಆನಂದ ಸಿಂಗ್‌

Kannadaprabha News   | Asianet News
Published : Aug 12, 2021, 07:53 AM ISTUpdated : Aug 12, 2021, 08:16 AM IST
ಪ್ರಭಾವಿಗಳು ಸಹಾಯ ಮಾಡುತ್ತಾರೆ ಎಂಬ ಭ್ರಮೆಯಲ್ಲಿದ್ದೆ :  ಆನಂದ ಸಿಂಗ್‌

ಸಾರಾಂಶ

 ರಾಜಕಾರಣದಲ್ಲಿ ನನ್ನನ್ನು ರಕ್ಷಣೆ ಮಾಡುವವರು ಬಹಳಷ್ಟು ಮಂದಿ ಇದ್ದಾರೆ ಬಹಳ ದೊಡ್ಡ ಪ್ರಭಾವಿಗಳು ಇದ್ದಾರೆ ಎಂಬ ಆತ್ಮವಿಶ್ವಾಸದಲ್ಲಿದ್ದೆ. ಅದೆಲ್ಲ ಭ್ರಮೆ ಎನ್ನುವುದು ಇದೀಗ ಗೊತ್ತಾಯ್ತು ಪರಿಸರ ಹಾಗೂ ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌

 ಹೊಸಪೇಟೆ (ಆ.12): ರಾಜಕಾರಣದಲ್ಲಿ ನನ್ನನ್ನು ರಕ್ಷಣೆ ಮಾಡುವವರು ಬಹಳಷ್ಟು ಮಂದಿ ಇದ್ದಾರೆ, ಬಹಳ ದೊಡ್ಡ ಪ್ರಭಾವಿಗಳು ಇದ್ದಾರೆ ಎಂಬ ಆತ್ಮವಿಶ್ವಾಸದಲ್ಲಿದ್ದೆ. ಅದೆಲ್ಲ ಭ್ರಮೆ ಎನ್ನುವುದು ಇದೀಗ ಗೊತ್ತಾಯ್ತು. ವೇಣುಗೋಪಾಲ ಸ್ವಾಮಿ ದೇಗುಲದಿಂದಲೇ ನನ್ನ ರಾಜಕೀಯ ಆರಂಭವಾಗಿದೆ. ಈ ದೇಗುಲದಿಂದಲೇ ಅಂತ್ಯವೂ ಆಗಬಹುದು, ಇಲ್ಲವೇ ಮರು ಆರಂಭವೂ ಆಗಬಹುದು ಎಂದು ಪರಿಸರ ಹಾಗೂ ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಹೇಳಿದ್ದಾರೆ.

ಖಾತೆ ವಿಚಾರವಾಗಿ ಅಸಮಾಧಾನಗೊಂಡಿರುವ ಆನಂದ್‌ ಸಿಂಗ್‌ ನಗರದ ಪಟೇಲ್‌ನಗರದಲ್ಲಿರುವ ವೇಣುಗೋಪಾಲಸ್ವಾಮಿ ದೇಗುಲದಲ್ಲಿ ಬುಧವಾರ ನಡೆದ ಜೀರ್ಣೋದ್ಧಾರ ಪೂಜೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಬೊಮ್ಮಾಯಿ ಭೇಟಿ ನಂತರ ಬದಲಾದ 'ಆನಂದ'...ರಾಜೀನಾಮೆ ಚಾನ್ಸೇ ಇಲ್ಲ!

ನಾನು 2008ರಿಂದ ರಾಜಕೀಯದಲ್ಲಿದ್ದೇನೆ. ಈ ಹದಿನೈದು ವರ್ಷದ ರಾಜಕೀಯ ಜೀವನದಲ್ಲಿ ನನಗೆ ರಾಜ್ಯದಲ್ಲಿ ಬಹಳಷ್ಟುನಾಯಕರು, ಆತ್ಮೀಯರು, ಹಿತೈಷಿಗಳು, ಸ್ನೇಹಿತರು ಇದ್ದಾರೆ ಎಂದು ನಾನು ಭಾವಿಸಿದ್ದೆ. ಬಹಳಷ್ಟುಮಂದಿ ನನ್ನನ್ನು ರಕ್ಷಣೆ ಮಾಡುವವರು ರಾಜಕೀಯದಲ್ಲಿದ್ದಾರೆ, ಬಹಳ ದೊಡ್ಡ ಪ್ರಭಾವಿ ಸ್ಥಾನಗಳಲ್ಲಿದ್ದಾರೆಂಬ ಆತ್ಮವಿಶ್ವಾಸದಲ್ಲಿ ಇದ್ದೆ. ಆದರೆ, ಅದೆಲ್ಲ ಭ್ರಮೆ ಅನ್ನುವುದು ಇದೀಗ ಗೊತ್ತಾಯ್ತು. ನನಗೆ ಬ್ಲ್ಯಾಕ್‌ಮೇಲ್‌ ರಾಜಕಾರಣ ಮಾಡಲು ಬರುವುದಿಲ್ಲ. ಜತೆಗೆ ಹೊಗಳಿಕೆ ರಾಜಕಾರಣವೂ ಗೊತ್ತಿಲ್ಲ. ಏನಿದ್ದರೂ ನೇರವಾಗಿ ಮಾತನಾಡುವೆ ಎಂದರು.

ಬಿಎಸ್‌ವೈ ಭೇಟಿಯಾಗಿರುವೆ:  ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನನಗೆ ಎಲ್ಲ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏನೂ ನೀಡಿಲ್ಲ ಎಂದು ಹೇಳಲಾರೆ. ಆದರೆ, ಅಂದುಕೊಂಡಿದ್ದು ಯಾವುದೂ ಆಗಲಿಲ್ಲ ಅನ್ನುವಂತೆಯೂ ಇಲ್ಲ, ಆಗಿದೆ ಅನ್ನುವಂತೆಯೂ ಇಲ್ಲ. ಆ.8ರಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಖುದ್ದು ಭೇಟಿಯಾಗಿ ಮನವಿ ಮಾಡಿಕೊಂಡಿದ್ದೇನೆ. ಜತೆಗೆ ಮಾಧ್ಯಮಗಳಿಗೂ ನೇರವಾಗಿಯೇ ಖಾತೆ ವಿಷಯದ ಬಗ್ಗೆ ಹೇಳಿದ್ದೇನೆ. ನಾನು ಮುಚ್ಚುಮರೆ ರಾಜಕಾರಣ ಮಾಡಲ್ಲ, ಕೆಲವೊಮ್ಮೆ ರಾಜಕೀಯ ಅನಿವಾರ್ಯ, ಕೆಲವೊಮ್ಮೆ ಅನಿವಾರ್ಯವಲ್ಲ ಎಂದು ಸ್ಪಷ್ಟಪಡಿಸಿದರು.

ಸದ್ಯ ನಾನು ಯುದ್ಧಭೂಮಿಯಲ್ಲಿ ಅರ್ಜುನ. ನನ್ನ ಹಿಂದೆ ವೇಣುಗೋಪಾಲಸ್ವಾಮಿ ಮಾತ್ರ ಇದ್ದಾನೆ. ಪಕ್ಷಕ್ಕೆ, ಸರ್ಕಾರಕ್ಕೆ ಮುಜುಗರ ತರುವ ರೀತಿ ನಾನು ಮಾತನಾಡಲ್ಲ. ರಾಜಕೀಯವಾಗಿ ಹೆಚ್ಚು ರಿಯಾಕ್ಟ್ ಮಾಡಲ್ಲ. ಆ ರೀತಿ ನನಗೆ ನಿರ್ದೇಶನ ಬಂದಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ