ಮುಂದೆ ಮತ್ತೆ ಸಂಪುಟ ಪುನಾರಚನೆ ಆಗಬೇಕು: ಗುಡುಗಿದ ಸಚಿವ

By Suvarna NewsFirst Published Jan 29, 2021, 2:43 PM IST
Highlights

ಖಾತೆ ಮರು ಹಂಚಿಕೆ ಬಗ್ಗೆ ಸಚಿವ ಆನಂದ್ ಸಿಂಗ್ ಅಸಮಾಧಾನನಗೊಂಡಿದ್ದು, ಇದುವರೆಗೂ ಅಧಿಕಾರ ಸ್ವೀಕಾರ ಮಾಡಿಲ್ಲ. ಇನ್ನು ಈ ಬಗ್ಗೆ ಸ್ವತಃ ಅವರೇ ಪ್ರತಿಕ್ರಿಯಿಸಿದ್ದಾರೆ. 

ಬೆಂಗಳೂರು, (ಜ.29):  ಮೂರು ಖಾತೆ ಬದಲಾಗಿ ಅಂತಿಮವಾಗಿ ಇದೀಗ ಸಚಿವ ಆನಂದ್ ಸಿಂಗ್ ಅವರಿಗೆ ಮೂಲಸೌಕರ್ಯ ಅಭಿವೃದ್ಧಿ, ಹಜ್​​ ಮತ್ತು ವಕ್ಫ್​​ ಖಾತೆಯನ್ನು ನೀಡಲಾಗಿದೆ.

ಇದರಿಂದ ಕೊಂಚ ಅಸಮಾಧಾನಗೊಂಡಿರುವ ಸಚಿವ ಆನಂದ್‌ ಸಿಂಗ್‌ ಅವರು ಇನ್ನೂ ಅಧಿಕಾರ ಸ್ವೀಕರಿಸಿಲ್ಲ. ಈ ಹಿನ್ನೆಲೆಯಲ್ಲಿ ಆನಂದ್ ಸಿಂಗ್ ನಡೆ ತೀವ್ರ ಕುತೂಹಲ ಮೂಡಿಸಿದೆ.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಆನಂದ್ ಸಿಂಗ್, ಮುಂದಿನ ದಿನಗಳಲ್ಲಿ ಸಂಪುಟ ಪುನಾರಚನೆಯಾಗಬೇಕು. ಆಗ ಇತರರಿಗೂ ಖಾತೆ ನೀಡಬೇಕು. ಆಗ ಬೇರೆ ಖಾತೆ ನೀಡಿದರೂ ನಿಭಾಯಿಸುತ್ತೇನೆ. ಅಥವಾ ಬೇರೆಯವರಿಗೆ ಬಿಟ್ಟುಕೊಡಲು ಸೂಚಿಸಿದರೆ, ಸಚಿವ ಸ್ಥಾನ ಬಿಟ್ಟುಕೊಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಖಾತೆ ಅತೃಪ್ತಿ: ಇನ್ನೂ ಅಧಿಕಾರ ಸ್ವೀಕರಿಸದ ಆನಂದ್‌ ಸಿಂಗ್‌

ನಾನು ರಾಜೀನಾಮೆ ನೀಡುತ್ತೇನೆಂದು ಮಾಧ್ಯಮದಲ್ಲಿ ಬಹಳಷ್ಟು ಊಹಾಪೂಹದ ಸುದ್ದಿ ಬಂದಿದೆ. ಸಚಿವ ಸ್ಥಾನ ಬದಲಿಸಿದಾಗ ಅಸಮಾಧಾನವಾಗಿದ್ದು ಸಹಜ. ಆದರೆ ನನಗೆ ಅಸಮಾಧಾನವಿಲ್ಲ. ಸಿಎಂ ಜೊತೆ ಮಾತುಕತೆ ಮಾಡಿದ್ದೇನೆ ಎಂದರು.

ಎಲ್ಲರಿಗೂ ಸಮಾಧಾನ ಮಾಡಲು ಬದಲಾವಣೆ ಸಹಜ. ಖಾತೆ ದೊಡ್ಡದು, ಚಿಕ್ಕದು ಎಂದೇನಿಲ್ಲ. ಯಾವುದೇ ಖಾತೆ ಕೊಟ್ಟರೂ ನಿಭಾಯಿಸಿ, ಮುಖ್ಯಮಂತ್ರಿಗಳಿಗೆ ಸಹಕಾರ ಕೊಡಬೇಕು. ಸರ್ಕಾರಿ ಕೆಲಸ ದೇವರ ಕೆಲಸ ಅಂತ ವಿಧಾನಸೌಧದಲ್ಲಿ ಬರೆದಿದ್ದಾರೆ ಎಂದು  ಹೇಳಿದರು.

ಅರಣ್ಯ ಇಲಾಖೆ ಖಾತೆ ನೀಡಿದ್ದಾಗ ಅನೇಕ ಕೆಲಸ ಮಾಡಿದ್ದೇನೆ. ಡೀಮ್ಡ್ ಫಾರೆಸ್ಟ್ ಮಾಡಲಾಗಿದೆ. ಅರವಿಂದ ಲಿಂಬಾವಳಿ ಅವರು ಓಡಾಡಿದರೆ ಒಂದೂವರೆ ತಿಂಗಳಲ್ಲಿ ಕೆಲಸ ಪೂರ್ಣಗೊಳ್ಳಲಿದೆ. ಹಜ್ ಮತ್ತು ವಕ್ಫ್ ಖಾತೆಯನ್ನೂ ನೀಡಿದ್ದಾರೆ. ಅದನ್ನ ನಿಭಾಯಿಸಿಕೊಂಡು ಹೋಗುತ್ತೇನೆ ಎಂದು ತಿಳಿಸಿದರು.

click me!