ಮತ್ತೆ ಮುನ್ನೆಲೆಗೆ ಬಂದ ಸಂಪುಟ ವಿಸ್ತರಣೆ: ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ..!

Published : Oct 21, 2020, 02:29 PM IST
ಮತ್ತೆ ಮುನ್ನೆಲೆಗೆ ಬಂದ ಸಂಪುಟ ವಿಸ್ತರಣೆ: ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ..!

ಸಾರಾಂಶ

ಅಧಿವೇಶನದೊಳಗೆಯೇ ಸಂಪುಟ ವಿಸ್ತರಣೆ ಅಥವಾ ಪುನರಚನೆ ಮಾಡಿ ಮುಗಿಸಬೇಕೆನ್ನುವುದು ಯಡಿಯೂಪರಪ್ಪನವರ ಆಸೆಯಾಗಿತ್ತು. ಆದ್ರೆ, ಹೈಕಮಾಂಡ್‌ನಿಂದ ಯಾವುದೇ ಸೂಚನೆ ಸಿಗದಿದ್ದಕ್ಕೆ ಅರ್ದಕ್ಕೆ ನಿಂತಿದೆ. ಇದರಿಂದ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.

ಬೆಂಗಳೂರು, (ಅ.21): ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಎದುರಾದ ಹಿನ್ನೆಲೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಸಿಎಂ ಬಿ.ಎಸ್​ ಯಡಿಯೂರಪ್ಪ  ಸ್ಥಗಿತಗೊಳಿಸಿದ್ದಾರೆ. 

ಈ ಹಿನ್ನೆಲೆ ತೆರೆಮರೆಯಲ್ಲಿ ಬಿಜೆಪಿಯಲ್ಲಿ ಅಸಮಾಧಾನದ ಕಿಡಿ ಹೊತ್ತಿದ್ದು,  ಸಂಪುಟ ಸೇರ್ಪಡೆಯಾಗಬೇಕೆಂದು ಕನಸು ಕಾಣುತ್ತಿರುವ ಆಕಾಂಕ್ಷಿಗಳು ಯಡಿಯೂರಪ್ಪ ನಡೆಯಿಂದ ಅಸಮಾಧಾನಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಎಲ್ಲವೂ ಅಂದುಕೊಂಡಂತೆ ನಡೆದಿದರೆ, ಇಷ್ಟರಲ್ಲೇ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗಬೇಕಿತ್ತು. ಅದ್ರೆ, ಆರ್​.ಆರ್​ ನಗರ ಹಾಗೂ ಶಿರಾ ಕ್ಷೇತ್ರಗಳಲ್ಲಿ ಉಪ-ಚುನಾವಣೆ ಎದುರಾದ ಹಿನ್ನೆಲೆ ಅದಕ್ಕೆ ಬ್ರೇಕ್ ಬಿದ್ದಿದೆ. ಕೊರೋನಾ, ಮಳೆ ಹಾನಿ ಮತ್ತು ಪ್ರವಾಹ ಪರಿಸ್ಥಿತಿ, ಸರ್ಕಾರ ಒಂದು ವರ್ಷ ಪೂರೈಕೆಯಾದ ಕಾರಣ ಸಂಪುಟ ವಿಸ್ತರಣೆ ಹಲವು ಬಾರಿ ಮುಂದೂಡಿಕೆಯಾಗಿತ್ತು. 

3 ವರ್ಷ ಬಿಎಸ್‌ವೈ ರಾಜ್ಯದ ಸಿಎಂ, ಬದಲಾವಣೆ ಮಾತೇ ಇಲ್ಲ: ಗುಡುಗಿದ ಬಿಜೆಪಿ ಸಾರಥಿ! 

ಇನ್ನೇನು ಎಲ್ಲವೂ ಸರಿ ಹೋಯಿತು ಎಂದುಕೊಳ್ಳುವಷ್ಟರಲ್ಲಿ, ಉಪ-ಚುನಾವಣೆ ಘೋಷಣೆಯಾಗಿದೆ. ಈಗ ನೀತಿ ಸಂಹಿತೆ ಜಾರಿಯಲ್ಲಿದ್ದು, ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಅನುಮತಿ ಕಷ್ಟ. ಈ ನಿಟ್ಟಿನಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಸದ್ಯಕ್ಕೆ ಅಸಾಧ್ಯ.

ಅಸಮಾಧಾನ ಸ್ಫೋಟ
ಹೌದು...ಸಂಪುಟ ವಿಸ್ತರಣೆ/ಪುನರಚನೆ ಆಗದಿದ್ದಕ್ಕೆ ಸಚಿವ ಸ್ಥಾನದ ಆಕಾಂಕ್ಷಿಗಳು ಅಸಮಾಧಾನೊಂಡಿದ್ದಾರೆ ಎನ್ನಲಾಗಿದೆ.  ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ  ಮುರುಗೇಶ್ ನಿರಾಣಿ, ಉಮೇಶ್ ಕತ್ತಿ, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಲಿಂಬಾವಳಿ, ಎಸ್.ಎ.ರಾಮದಾಸ್, ಸುನಿಲ್‌ಕುಮಾರ್ ಸೇರಿದಂತೆ ಹಲವರಲ್ಲಿ ನಿರಾಸೆ ಮೂಡಿದ್ದು, ಅಸಮಾಧಾನ ಸ್ಫೋಟಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ.

ಅಲ್ಲದೇ .ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಿಎಂ ವಿರುದ್ಧ ಬಹಿಂರಗವಾಗಿಯೇ ಹೇಳಿಕೆ ಕೊಟ್ಟಿದ್ದು, ಇದೇ ಕಾರಣ ಇರಬಹುದು ಎನ್ನಲಾಗುತ್ತಿದೆ.

ಬೈ ಎಲೆಕ್ಷನ್ ಬಳಿಕ ಪ್ರಕ್ರಿಯೆ ಶುರು
ಹೌದು...ಆರ್.ಆರ್.ನಗರ ಹಾಗೂ ಶಿರಾ ಉಪಚುನಾವಣೆ ನವೆಂಬರ್‌ನಲ್ಲಿ ಮುಗಿಯಲಿದ್ದು, ಫಲಿತಾಂಶ ಬಂದ ಬಳಿಕ ಸಂಪುಟ ವಿಸ್ತರಣೆಯೋ ಅಥವಾ ಸಂಪುಟ ಪುನರಚನೆ ಪ್ರಕ್ರಿಯೆ ಶುರುವಾಗಲಿದೆ. ಒಂದು ವೇಳೆ ಮುನಿರತ್ನ ಅವರು ಗೆದ್ದರೇ ಅವರಿಗೂ ಸಹ ಸಚಿವ ಸ್ಥಾನ ಕೊಡಬೇಕಾಗುತ್ತದೆ. ಯಾಕಂದ್ರೆ ಮೊದಲೇ ಮಾತುಕತೆ ಮಾಡಿ ಅವರು ಕಾಂಗ್ರೆಸ್ ಶಾಸಕತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಎಸ್‌ವೈ ಕೊಟ್ಟ ಮಾತು ಉಳಿಸಿಕೊಳ್ಳಬೇಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ ಪ್ರಕರಣ: ಎಸ್ಐಟಿ ತನಿಖೆಗೆ ಸಿ.ಟಿ.ರವಿ ಆಗ್ರಹ
ಅಕ್ಕಿ ಅಕ್ರಮದಲ್ಲಿ ಬಿಜೆಪಿಯವರೇ ಶಾಮೀಲು: ಸಚಿವ ಪ್ರಿಯಾಂಕ್ ಖರ್ಗೆ