ಸಂಪುಟ ವಿಸ್ತರಣೆ: ಬಿಎಸ್‌ವೈ ನಿವಾಸದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

By Suvarna NewsFirst Published Jan 12, 2021, 8:56 PM IST
Highlights

ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಗರಿಗೆದರಿದೆ. ಅಲ್ಲದೇ ಸಿಎಂ ಗೃಹ ಕಚೇರಿ ಕಾವೇರಿಗೆ ಸಚಿವಾಕಾಂಕ್ಷಿಗಳು ಭೇಟಿ ನೀಡಿ ಮಂತ್ರಿಗಿರಿಗಾಗಿ ಲಾಬಿ ಮಾಡುತ್ತಿದ್ದಾರೆ.

ಬೆಂಗಳೂರು, (ಜ.12): ಬಹುದಿನಗಳ ಬಳಿಕ ನಾಳೆ ಅಂದ್ರೆ ಜನವರಿ 13ರಂದು ಸಚಿವ ಸಂಪುಟ ವಿಸ್ತರಣೆಯಾಗಲಿದ್ದು , 7 ರಿಂದ 8 ಜನ ಶಾಸಕರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

ನಾಳೆ (ಬುಧವಾರ) ಮಧ್ಯಾಹ್ನ 3.50ಕ್ಕೆ ರಾಜಭವನದಲ್ಲಿ ಸಚಿವರ ಪ್ರಮಾಣವಚನ ಸ್ವೀಕಾರ ಕಾರ್ಯ ನಡೆಯಲಿದ್ದು, ಈ ಹಿನ್ನಲೆ ನೂತನ ಸಚಿವರಾಗಲಿರುವ ಶಾಸಕರಿಗೆ ಮುಖ್ಯಮಂತ್ರಿಗಳೇ ಕರೆ ಮಾಡಿ ಆಹ್ವಾನ ನೀಡುತ್ತಿದ್ದಾರೆ.

ಸಿಎಂ ಮಹತ್ವದ ಹೇಳಿಕೆ: ಏಳೆಂಟು ಸಚಿವರು ಪ್ರಮಾಣ ವಚನ ಸ್ವೀಕಾರ ಫಿಕ್ಸ್, ಒಬ್ಬರಿಗೆ ಕೋಕ್

ಸದ್ಯ ಸಿಎಂ ಬಿಎಸ್​ ಯಡಿಯೂರಪ್ಪ ಮನೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಿಎಂ ಗೃಹ ಕಚೇರಿ ಕಾವೇರಿಗೆ ಸಚಿವಾಕಾಂಕ್ಷಿಗಳು ಭೇಟಿ ನೀಡಿ ಮಂತ್ರಿಗಿರಿಗಾಗಿ ಲಾಬಿ ಮಾಡುತ್ತಿದ್ದಾರೆ.

ಸಚಿವಾಕಾಂಕ್ಷಿಗಳಾದ ಸಿಪಿ ಯೋಗೇಶ್ವರ್​, ಮುನಿರತ್ನ ಸೇರಿದಂತೆ ಹಲವು ಬಿಜೆಪಿ ನಾಯಕರು ಭೇಟಿ ನೀಡಿದ್ದಾರೆ.  ಮಧ್ಯಾಹ್ನ ಸಿಎಂ ಅವರನ್ನು ಭೇಟಿಯಾಗಿದ್ದ ಮುನಿರತ್ನ, ಸಿಪಿಯೋಗೇಶ್ವರ್​ ಬಂದು ಹೋದ ಬಳಿಕ ಮತ್ತೊಮ್ಮೆ ಭೇಟಿ ಯಾಗಿ ಚರ್ಚೆ ನಡೆಸಿದ್ದಾರೆ. ಇನ್ನೂ ಸಚಿವ ಸ್ಥಾನ ಕೈತಪ್ಪುವ ಭೀತಿಯಲ್ಲಿರುವ ಅಬಕಾರಿ ಸಚಿವ ಎಚ್. ನಾಗೇಶ್ ಕೂಡ ಸಿಎಂ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಮೂಲಗಳ ಪ್ರಕಾರ ಸಿಪಿ ಯೋಗೇಶ್ವರ್​ಗೆ ಸಚಿವ ಸ್ಥಾನ ಬಹುತೇಕ ಖಚಿತವಾಗಿದೆ. ಈ ಹಿನ್ನಲೆ ಮುನಿರತ್ನ ಕೊನೆ ಕ್ಷಣದ ಲಾಬಿಗೆ ಮುಂದಾಗಿದ್ದಾರೆ. ಮುರುಗೇಶ್ ನಿರಾಣಿ, ಅರವಿಂದ ಲಿಂಬಾವಳಿ, ಸುಳ್ಯ ಶಾಸಕ ಅಂಗಾರ, ಉಮೇಶ್ ಕತ್ತಿ ಗೆ ಸಚಿವ ಸ್ಥಾನ ಬಹುತೇಕ ಖಚಿತವಾಗಿದೆ. 

click me!