ಬಿಜೆಪಿಯವರಿಗಷ್ಟೇ ಅಲ್ಲ, ಕಾಂಗ್ರೆಸ್‌ನವರಿಗೂ ಶ್ರೀರಾಮಚಂದ್ರ ದೇವರು: ಸಚಿವ ನಾಗೇಂದ್ರ

By Kannadaprabha News  |  First Published Jan 17, 2024, 8:03 AM IST

ಕಾಂಗ್ರೆಸ್‌ನವರಿಗೂ ಶ್ರೀರಾಮಚಂದ್ರ ದೇವರು, ಕೇವಲ ಬಿಜೆಪಿಯವರಿಗಷ್ಟೇ ಅಲ್ಲ. ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿನಲ್ಲಿಯೇ ರಾಮನಿದ್ದಾನೆ ಎಂದು ಸಚಿವ ನಾಗೇಂದ್ರ ತಿಳಿಸಿದರು. 


ಬಳ್ಳಾರಿ (ಜ.17): ಕಾಂಗ್ರೆಸ್‌ನವರಿಗೂ ಶ್ರೀರಾಮಚಂದ್ರ ದೇವರು, ಕೇವಲ ಬಿಜೆಪಿಯವರಿಗಷ್ಟೇ ಅಲ್ಲ. ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿನಲ್ಲಿಯೇ ರಾಮನಿದ್ದಾನೆ ಎಂದು ಸಚಿವ ನಾಗೇಂದ್ರ ತಿಳಿಸಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿಯವರು ರಾಮಮಂದಿರ ವಿಷಯವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ರಾಮಮಂದಿರ ಉದ್ಘಾಟನೆಗೆ ಅನೇಕ ಸ್ವಾಮಿಗಳು ವಿರೋಧಿಸಿದ್ದಾರೆ. ಬಿಜೆಪಿಯವರು ಶ್ರೀರಾಮ ತಮಗೆ ಮಾತ್ರ ಸೀಮಿತ ಎಂಬಂತೆ ವರ್ತಿಸುತ್ತಿದ್ದಾರೆ. ನಾವ್ಯಾರೂ ರಾಮನ ವಿರೋಧಿಗಳಲ್ಲ. ಆದರೆ, ನಮಗೆ ವಾಲ್ಮೀಕಿ ಬಿಂಬಿತ ಶ್ರೀರಾಮಬೇಕೇ ವಿನಾ, ಬಿಜೆಪಿ ಬಿಂಬಿತ ಶ್ರೀರಾಮ ಅಲ್ಲ. ಶ್ರೀರಾಮ ಇಡೀ ಪ್ರಪಂಚದ ಆಸ್ತಿ. 

ಹಾಗೆಯೇ ಕಾಂಗ್ರೆಸ್‌ನ ಆಸ್ತಿಯೂ ಹೌದು ಎಂದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುತ್ತೇವೆ. ಒಂದು ವೇಳೆ ಗೆಲ್ಲಿಸಿಕೊಂಡು ಬರದಿದ್ದರೆ ಅಸಮರ್ಥ ಸಚಿವ ಎಂದಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ತಿಳಿಸಿದರು. ಕಾಂಗ್ರೆಸ್ ಅಭ್ಯರ್ಥಿಯನ್ನು ಭಾರೀ ಬಹುಮತದೊಂದಿಗೆ ಗೆಲ್ಲಿಸಿಕೊಂಡು ಬರಲು ನಾನು ಸೇರಿದಂತೆ ಪಕ್ಷದ ಎಲ್ಲ ಶಾಸಕರು ಶ್ರಮಿಸುತ್ತೇವೆ. ಶಾಸಕರಿಗೂ ಜವಾಬ್ದಾರಿ ಇರುತ್ತದೆ. ಬಳ್ಳಾರಿಯಲ್ಲಿ ಗೆದ್ದು ಸೋನಿಯಾಗಾಂಧಿ ಅವರಿಗೆ ಉಡುಗೊರೆಯಾಗಿ ನೀಡುತ್ತೇವೆ ಎಂದರು.

Tap to resize

Latest Videos

undefined

ಬಿ.ಎಲ್‌.ಸಂತೋಷ್ ಬಿಜೆಪಿ ಪಕ್ಷದ ಕಾರ್ಯಕರ್ತರಿಗೆ ದೊಡ್ಡ ಪ್ರೇರಣೆ: ಆರ್.ಅಶೋಕ್

ದ.ಕ.ದಲ್ಲಿ ಅಥ್ಲೆಟಿಕ್ಸ್‌ಗೆ ಪ್ರೋತ್ಸಾಹ: ‘ಒಂದು ಜಿಲ್ಲೆ-ಒಂದು ಕ್ರೀಡೆ’ ಪರಿಕಲ್ಪನೆಯಲ್ಲಿ ದ.ಕ.ಜಿಲ್ಲೆಯಲ್ಲಿ ಅಥ್ಲೆಟಿಕ್ಸ್‌ಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಯುವಜನ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ನಾಗೇಂದ್ರ ಹೇಳಿದ್ದಾರೆ. ಮಂಗಳೂರಿನ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲ 31 ಜಿಲ್ಲೆಗಳಲ್ಲಿ ಈ ಪರಿಕಲ್ಪನೆಯನ್ನು ಸಾಕಾರಗೊಳಿಸಲಾಗುವುದು. ದ.ಕ.ದಲ್ಲಿ ಅಥ್ಲೆಟಿಕ್ಸ್‌ಗೆ ಬೇಕಾದ ಮೈದಾನ ಸೇರಿದಂತೆ ಎಲ್ಲ ರೀತಿಯ ಸೌಕರ್ಯಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಇಲಾಖಾ ಅಧಿಕಾರಿಗಳು ಹಾಗೂ ಇಲ್ಲಿನ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಲಾಗಿದೆ ಎಂದರು.

7ನೇ ವೇತನ ಆಯೋಗ ವರದಿ ಬಳಿಕ ನೌಕರರ ವೇತನ ಪರಿಷ್ಕರಣೆ ತೀರ್ಮಾನ: ಸಿದ್ದರಾಮಯ್ಯ

ದ.ಕ. ಜಿಲ್ಲೆಯಲ್ಲಿರುವ ಕೊರಗ ಹಾಗೂ ಮಲೆಕುಡಿಯ ಜನಾಂಗದ ಏಳಿಗೆ ಬಗ್ಗೆ ಚರ್ಚೆ ನಡೆಸಲಾಗಿದೆ. ಅವರ ಹಾಡಿಗಳಿಗೆ ತೆರಳಿ ವಾಸ್ತವ್ಯ ಹೂಡಲು ನಿರ್ಧರಿಸಿದ್ದೇನೆ. ಅವರ ಕುಂದುಕೊರತೆಗಳನ್ನು ತಿಳಿದುಕೊಂಡು ಪೌಷ್ಠಿಕ ಆಹಾರವೇ ಮೊದಲಾದ ಅಗತ್ಯ ನೆರವು ನೀಡಲಾಗುವುದು. ಇವರಿಗೆ ಆರು ತಿಂಗಳು ಇದ್ದ ಪೌಷ್ಠಿಕ ಆಹಾರ ಪೂರೈಕೆಯನ್ನು ಈಗ ಒಂದು ವರ್ಷಕ್ಕೆ ವಿಸ್ತರಿಸಲಾಗಿದೆ. ಅವರೆಲ್ಲ ಅರಣ್ಯದಂಚಿನಲ್ಲಿ ವಾಸಿಸುತ್ತಿದ್ದು, ಅವರಿಗೆ ಪಟ್ಟಾ ಜಾಗ ನೀಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಜತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

click me!