ಎಚ್.ಡಿ.ಕುಮಾರಸ್ವಾಮಿ ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಹುದ್ದೆಯನ್ನು ಕುಮಾರಸ್ವಾಮಿ ಕುಟುಂಬಸ್ಥರು ಗುತ್ತಿಗೆ ಪಡೆದುಕೊಂಡಿದ್ದಾರೆಯೇ ಎಂದು ಸಚಿವ ಬಿ.ಶ್ರೀರಾಮುಲು ಪ್ರಶ್ನಿಸಿದ್ದಾರೆ.
ಹುಬ್ಬಳ್ಳಿ (ಫೆ.11): ಎಚ್.ಡಿ.ಕುಮಾರಸ್ವಾಮಿ ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಹುದ್ದೆಯನ್ನು ಕುಮಾರಸ್ವಾಮಿ ಕುಟುಂಬಸ್ಥರು ಗುತ್ತಿಗೆ ಪಡೆದುಕೊಂಡಿದ್ದಾರೆಯೇ ಎಂದು ಸಚಿವ ಬಿ. ಶ್ರೀರಾಮುಲು ಪ್ರಶ್ನಿಸಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವ ಜಾತಿಯವರು ಬೇಕಾದರೂ ಮುಖ್ಯಮಂತ್ರಿ ಆಗಬಹುದು. ಇಂಥವರೇ ಮುಖ್ಯಮಂತ್ರಿ ಆಗಬೇಕೆಂಬ ಯಾವುದೇ ನಿಯಮವಿಲ್ಲ. ಇನ್ನು ಕುಮಾರಸ್ವಾಮಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಪೇಶ್ವೆ ಸಂಸ್ಕೃತಿಯಿಂದ ಬಂದವರು ಎಂದಿದ್ದಾರೆ.
ಪ್ರಹ್ಲಾದ ಜೋಶಿ ಶಕ್ತಿವಂತ ಹಿರಿಯ ನಾಯಕರು. ಅವರ ಬಗ್ಗೆ ಈ ರೀತಿ ಮಾತನಾಡುವುದು ಸರಿಯಲ್ಲ. ಈಗ ಚುನಾವಣೆ ಹತ್ತಿರ ಬಂದಿದೆ ಎಂದು ವೈಯಕ್ತಿಕ ಟೀಕೆ ಮಾಡಿದರೆ ಅದು ಕುಮಾರಸ್ವಾಮಿ ಅವರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದರು. ಇನ್ನು ರಾಜ್ಯದಲ್ಲಿ ಬ್ರಾಹ್ಮಣರು ಮುಖ್ಯಮಂತ್ರಿ ಆಗುವ ವಿಷಯ ಚರ್ಚೆಯೇ ಆಗಿಲ್ಲ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನು ಯಾರು ಜಾತಿಯಿಂದ ನೋಡುತ್ತಿಲ್ಲ. ಅವರು ಜಾತಿ ಮೀರಿದ ನಾಯಕರಾಗಿದ್ದಾರೆ. ಎಸ್ಸಿ,ಎಸ್ಟಿಮೀಸಲಾತಿ ಹೆಚ್ಚಳ ವಿಚಾರದಲ್ಲಿ ಕೇಂದ್ರದ ಒಪ್ಪಿಗೆಯನ್ನು ತಂದುಕೊಡುವ ಕೆಲಸ ಮಾಡಿದ್ದಾರೆ ಎಂದರು.
ಈ ತಿಂಗಳಲ್ಲೇ ಜೆಡಿಎಸ್ 2ನೇ ಪಟ್ಟಿ ಬಿಡುಗಡೆ: ಎಚ್.ಡಿ.ಕುಮಾರಸ್ವಾಮಿ
ಬಿ.ಎಸ್. ಯಡಿಯೂರಪ್ಪ ಅವರನ್ನು ಕುಮಾರಸ್ವಾಮಿ ಓಲೈಕೆ ಮಾಡುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಯಡಿಯೂರಪ್ಪ ಅವರನ್ನು ಓಲೈಕೆ ಮಾಡಬೇಕು ಎಂಬ ಕಾರಣಕ್ಕೆ ಅವರಿರುವ ಪರಿಸ್ಥಿತಿಯನ್ನು ಕೆಲವು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದರು. ಜನಾರ್ದನ ರೆಡ್ಡಿ ಪ್ರಾದೇಶಿಕ ಪಕ್ಷದ ಹುಟ್ಟು ಹಾಕಿ ಅಭ್ಯರ್ಥಿ ಆಯ್ಕೆ ಮಾಡಿದ್ದಾರೆ. ಚುನಾವಣೆ ಮುಂದಿದೆ. ನಾವು ನಮ್ಮ ಪಕ್ಷದ ತತ್ವ, ಸಿದ್ಧಾಂತಗಳ ಮೇಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮಾಡಿದ ಕೆಲಸವನ್ನು ಜನರ ಮುಂದೆ ಇಟ್ಟು ಮತ ಕೇಳಿ ಅಧಿಕಾರಕ್ಕೆ ಬರುತ್ತೇವೆ. ನಾನು ಬಳ್ಳಾರಿ ಜಿಲ್ಲೆಯಿಂದ ಸ್ಪರ್ಧೆ ಮಾಡುತ್ತೇನೆ ಎಂದು ತಿಳಿಸಿದರು.
ಜಾತ್ರೆಗೆ ಬರುವ ಭಕ್ತರಿಗೆ ಮೂಲಸೌಲಭ್ಯ ಕಲ್ಪಿಸಿ: ರಾಜ್ಯದ ಪ್ರಸಿದ್ದ ಜಾತ್ರೆಗಳಲ್ಲಿ ಒಂದಾದ ಜಿಲ್ಲೆಯ ನಾಯಕನಹಟ್ಟಿಯ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆ ಮಾಚ್‌ರ್ 10ರಂದು ನಡೆಯಲಿದ್ದು, ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸಿ ದೇವರ ರಥೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಬರುವ ಭಕ್ತರಿಗೆ ಎಲ್ಲಾ ಮೂಲಭೂತ ಸೌಲಭ್ಯ ಒದಗಿಸುವುದಲ್ಲದೆ, ಸುಗಮ ಸಂಚಾರ ವ್ಯವಸ್ಥೆ ಮಾಡುವಂತೆ ಸಚಿವ ಬಿ.ಶ್ರೀ ರಾಮುಲು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಬರುವ ಮಾರ್ಚ್‌ನಲ್ಲಿ ನಡೆಯುವ ಜಾತ್ರೆ ಹಿನ್ನೆಲೆಯಲ್ಲಿ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
Yadgir: ಸುರಪುರದಲ್ಲಿ ಕಾಂಗ್ರೆಸ್ ಗೆಲ್ಲೋದು ಖಚಿತ: ಪ್ರಿಯಾಂಕ್ ಖರ್ಗೆ
ರಸ್ತೆ, ನೀರು, ಬೆಳಕು ಮುಂತಾದ ಸಮಸ್ಯೆಗಳ ಬಗ್ಗೆ ಭಕ್ತಾಧಿಗಳು ಸಚಿವರಿಗೆ ಮಾಹಿತಿ ನೀಡಿದಾಗ. ಯಾವುದೇ ಲೋಪವಾಗದಂತೆ ಜಾಗ್ರತೆ ವಹಿಸಲಾಗುತ್ತಿದೆ. ಜಿಲ್ಲಾಡಳಿತ ದೇವಸ್ಥಾನದ ಆಡಳಿತ ಮಂಡಳಿ, ಭಕ್ತರು ಹಾಗೂ ಗ್ರಾಮದ ಎಲ್ಲಾ ಸಮಾಜದ ಜನತೆಯ ಸಹಕಾರದೊಂದಿಗೆ ಜಾತ್ರಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಕೆಲವೊಂದು ಕಾಮಗಾರಿಗಳಿಗೆ ಆರ್ಥಿಕ ಸಂಕಷ್ಟಎದುರಾದಲ್ಲಿ ಅದನ್ನು ಸಂಬಂಧಪಟ್ಟಇಲಾಖೆಯೊಂದಿಗೆ ಚರ್ಚಿಸಿ ಸರ್ಕಾರದಿಂದಲೇ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.