ತಾಕತ್ತಿದ್ದರೆ ಬನ್ನಿ ನೋಡೋಣ, ನಾವೇನ್‌ ಬಳೆ ತೊಡ್ಕೊಂಡಿದ್ದೀವಾ: ಸಚಿವ ಶ್ರೀರಾಮುಲು

Published : Nov 21, 2022, 04:21 AM IST
ತಾಕತ್ತಿದ್ದರೆ ಬನ್ನಿ ನೋಡೋಣ, ನಾವೇನ್‌ ಬಳೆ ತೊಡ್ಕೊಂಡಿದ್ದೀವಾ: ಸಚಿವ ಶ್ರೀರಾಮುಲು

ಸಾರಾಂಶ

ಪರಿಶಿಷ್ಟ ಪಂಗಡಗಳ ನವಶಕ್ತಿ ಸಮಾವೇಶದಲ್ಲಿ ಕಾಂಗ್ರೆಸ್‌ ಹಾಗೂ ಸಿದ್ದರಾಮಯ್ಯ ವಿರುದ್ಧ ಅಬ್ಬರಿಸಿದ ಸಚಿವ ಬಿ. ಶ್ರೀರಾಮುಲು, ತಾಕತ್ತಿದ್ದರೆ ಬನ್ನಿ ನೋಡೋಣ. ನಾವೇನು ಬಳೆ ತೊಟ್ಕೊಂಡಿದ್ದೀವಾ? ಎನ್ನುತ್ತಲೇ ತಲೆಗೆ ಟವೆಲ್‌ ಸುತ್ತಿಕೊಂಡರು.

ಬಳ್ಳಾರಿ (ನ.21): ಪರಿಶಿಷ್ಟ ಪಂಗಡಗಳ ನವಶಕ್ತಿ ಸಮಾವೇಶದಲ್ಲಿ ಕಾಂಗ್ರೆಸ್‌ ಹಾಗೂ ಸಿದ್ದರಾಮಯ್ಯ ವಿರುದ್ಧ ಅಬ್ಬರಿಸಿದ ಸಚಿವ ಬಿ.ಶ್ರೀರಾಮುಲು, ತಾಕತ್ತಿದ್ದರೆ ಬನ್ನಿ ನೋಡೋಣ. ನಾವೇನು ಬಳೆ ತೊಟ್ಕೊಂಡಿದ್ದೀವಾ? ಎನ್ನುತ್ತಲೇ ತಲೆಗೆ ಟವೆಲ್‌ ಸುತ್ತಿಕೊಂಡರು. ಶ್ರೀರಾಮುಲು ಭಾಷಣದ ಬಾಣ ಬಿರುಸಾಗುತ್ತಿದ್ದಂತೆಯೇ ಸಮಾವೇಶದಲ್ಲಿ ಜಮಾಯಿಸಿದ್ದ ಜನರು ಹರ್ಷೋದ್ಗಾರದ ಮೂಲಕ ಬೆಂಬಲಿಸಿದರು.

ಜನರ ಕೇಕೆ, ಚಪ್ಪಾಳೆಯ ಸದ್ದು ಹೆಚ್ಚಾಗುತ್ತಿದ್ದಂತೆಯೇ ಮತ್ತಷ್ಟುಏರುದಾಟಿಯಲ್ಲಿ ಮಾತು ಮುಂದುವರಿಸಿದ ಶ್ರೀರಾಮುಲು, ಬಳ್ಳಾರಿ ಪರಿಶಿಷ್ಟಪಂಗಡಗಳ ಸಮಾವೇಶದ ಮೂಲಕವೇ ಕಾಂಗ್ರೆಸ್‌ನ ಪತನ ಶುರುವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಳದ ಮೂಲಕ ಸುದರ್ಶನ ಚಕ್ರ ಬಿಟ್ಟಿದ್ದಾರೆ. ಆ ಸುದರ್ಶನ ಚಕ್ರ ಕಾಂಗ್ರೆಸ್‌ನ ಶಿರಚ್ಛೇದ ಮಾಡಲಿದೆ. ಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಧೂಳಿಪಟವಾಗಲಿದೆ. ದಲಿತರಿಗೆ ಈ ವರೆಗೆ ಮೋಸ ಮಾಡಿಕೊಂಡು ಬಂದಿರುವ ಕಾಂಗ್ರೆಸ್‌ನ್ನು ಸೋಲಿಸಿ ಎಂದು ನೆರೆದಿದ್ದ ಜನತೆಗೆ ಕರೆ ನೀಡಿದರು.

ಎಸ್‌ಟಿ ಸಮಾವೇಶ ಕಾಂಗ್ರೆಸ್‌ ನಾಯಕರಿಗೆ ಉತ್ತರ ನೀಡಲಿದೆ: ಶ್ರೀರಾಮುಲು

ಇದೇ ವೇಳೆ ಮೀಸಲಾತಿ ಹೆಚ್ಚಳದ ಮಹತ್ವ ನಿರ್ಧಾರ ಕೈಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಹಾಡಿ ಹೊಗಳಿದರಲ್ಲದೆ, ಕಾಂಗ್ರೆಸ್‌ನವರು ಬಡಿವಾರದ ಮಾತುಗಳನ್ನು ಬಿಟ್ಟು ಬಿಡಬೇಕು. ಬರೀ ಬಡಿವಾರ ಕೊಚ್ಚಿಕೊಂಡರೆ ಏನೂ ಆಗುವುದಿಲ್ಲ. ನಮ್ಮ ಮುಖ್ಯಮಂತ್ರಿಗಳು ಶೋಷಿತರಿಗೆ ಸಾಮಾಜಿಕ ನ್ಯಾಯ ನೀಡಿ ಜೋಡು ಗುಂಡಿಗೆಯ ವ್ಯಕ್ತಿ ಎನಿಸಿಕೊಂಡಿದ್ದಾರೆ. ಬೊಮ್ಮಾಯಿ ಅವರು ದಕ್ಷಿಣ ಭಾರತದ ವಾಜಪೇಯಿ ಇದ್ದಂತೆ. ಜನಪರವಾಗಿ ನಿಲ್ಲುವ ತಾಕತ್ತು ಎಲ್ಲರಿಗೂ ಬರುವುದಿಲ್ಲ. ನಮ್ಮ ಸಿಎಂ ಆ ಕೆಲಸ ಮಾಡಿದ್ದಾರೆ ಎಂದು ಕೊಂಡಾಡಿದರು.

ಕ್ಷೇತ್ರ ಸಿಗದೆ ಸಿದ್ದರಾಮಯ್ಯ ಅಲೆಮಾರಿಯಾಗಿದ್ದಾರೆ: ಶ್ರೀರಾಮುಲು

ಇಷ್ಟುವರ್ಷ ದಲಿತರ ಮತಗಳನ್ನು ಪಡೆದು ನೀವು ಏನು ಮಾಡಿದ್ದೀರಿ? ಎಂದು ಕಾಂಗ್ರೆಸಿಗರನ್ನು ಪ್ರಶ್ನಿಸಿದರಲ್ಲದೆ, ತಾಕತ್ತಿದ್ದರೆ ಬರ್ರಪ್ಪಾ, ಮೀಸಲಾತಿ ಕೊಟ್ಟಿದ್ದು ನಾವು. ನೀವು ಬಳ್ಳಾರಿಗೆ ಬಂದು ಮಾತನಾಡುತ್ತೀರಾ? ತಾಕತ್ತಿದ್ದರೆ ಬನ್ನಿ ನೋಡೋಣ ಎಂದು ಸಿದ್ದರಾಮಯ್ಯ ಅವರಿಗೆ ಸವಾಲೆಸೆದರು. ಮೀಸಲಾತಿ ಹೆಚ್ಚಿಸುವ ಮೂಲಕ ನಾನು ನನ್ನ ಸಮಾಜದ ಋುಣ ತೀರಿಸುವ ಪ್ರಯತ್ನ ಮಾಡಿದ್ದೇನೆ. ನಾನು ಬೇಡರ ಜನಾಂಗದಲ್ಲಿ ಹುಟ್ಟಿರಬಹುದು. ಆದರೆ, ನಾನು ಎಲ್ಲ ಸಮುದಾಯಗಳ ಪ್ರೀತಿ ಗಳಿಸಿದ್ದೇನೆ. ಇಡೀ ರಾಜ್ಯದ ಜನ ನನಗೆ ಅನ್ನ, ನೀರು ಕೊಟ್ಟು ಸಲುಹಿದ್ದಾರೆ ಎಂದು ಶ್ರೀರಾಮುಲು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ