ಮುಂದೆ ರಾಜಕೀಯದಲ್ಲಿ ಇರ್ತೇನೋ, ಇಲ್ವೋ..?: ಸಚಿವ ಶ್ರೀರಾಮುಲು

By Govindaraj S  |  First Published Oct 20, 2022, 8:16 AM IST

ಮುಂದಿನ ದಿನಗಳಲ್ಲಿ ನಾನು ರಾಜಕೀಯದಲ್ಲಿ ಇರುತ್ತೇನೆಯೋ, ಇಲ್ಲವೋ ಗೊತ್ತಿಲ್ಲ. ನಾನು ರಾಜಕಾರಣದಲ್ಲಿ ಇರಲಾರದ ಸಂದರ್ಭದಲ್ಲಿ ನಮ್ಮ ಸಮುದಾಯವನ್ನು ಮುನ್ನೆಡಿಸಿಕೊಂಡು ಹೋಗಲು ರಾಜೂಗೌಡ ಹಾಗೂ ಶಿವನಗೌಡರಿಗಿದೆ.. - ಸಚಿವ ಬಿ. ಶ್ರೀರಾಮುಲು. 


ಹುಣಸಗಿ (ಅ.20): ಮುಂದಿನ ದಿನಗಳಲ್ಲಿ ನಾನು ರಾಜಕೀಯದಲ್ಲಿ ಇರುತ್ತೇನೆಯೋ, ಇಲ್ಲವೋ ಗೊತ್ತಿಲ್ಲ. ನಾನು ರಾಜಕಾರಣದಲ್ಲಿ ಇರಲಾರದ ಸಂದರ್ಭದಲ್ಲಿ ನಮ್ಮ ಸಮುದಾಯವನ್ನು ಮುನ್ನೆಡಿಸಿಕೊಂಡು ಹೋಗಲು ರಾಜೂಗೌಡ ಹಾಗೂ ಶಿವನಗೌಡರಿಗಿದೆ.. - ಸಚಿವ ಬಿ. ಶ್ರೀರಾಮುಲು. ಹುಣಸಗಿ ಪಟ್ಟಣದಲ್ಲಿ ಬುಧವಾರ ನಡೆದ ಬಿಜೆಪಿ ಜನಸಂಕಲ್ಪ ಯಾತ್ರೆಯ ಬಹಿರಂಗ ಸಭೆಯಲ್ಲಿ, ಸಿಎಂ ಬಸವರಾಜ್‌ ಬೊಮ್ಮಾಯಿ ಅವರ ಉಪಸ್ಥಿತಿಯಲ್ಲಿ ಸಚಿವ ಬಿ.ಶ್ರೀರಾಮುಲು ಅವರ ಇಂತಹ ಮಾತುಗಳು ಅನೇಕರನ್ನು ಅಚ್ಚರಿಗೊಳಿಸಿತ್ತು.

ಪಟ್ಟಣದ ಯುಕೆಪಿ ಕ್ಯಾಂಪಿನಲ್ಲಿ ಹಮ್ಮಿಕೊಂಡಿದ್ದ ಜನಸಂಕಲ್ಪ ಯಾತ್ರೆ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ 150 ಸ್ಥಾನಗಳು ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ. ಮುಂದಿನ ದಿನಗಳಲ್ಲಿ ನಾನು ರಾಜಕೀಯದಲ್ಲಿ ಇರುತ್ತೇನೆಯೋ, ಇಲ್ಲವೋ ಗೊತ್ತಿಲ್ಲ. ನಾನು ರಾಜಕಾರಣದಲ್ಲಿ ಇರಲಾರದ ಸಂದರ್ಭದಲ್ಲಿ ನಮ್ಮ ಸಮುದಾಯವನ್ನು ಮುನ್ನೆಡಿಸಿಕೊಂಡು ಹೋಗುವ ನಾಯಕತ್ವ ಶಿವನಗೌಡ ನಾಯಕ ಹಾಗೂ ರಾಜೂಗೌಡರಿಗಿದೆ. ಮುಂಬರುವ ದಿನಗಳಲ್ಲಿ ಶಾಸಕ ರಾಜೂಗೌಡ ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಿ ಕ್ಷೇತ್ರದ ಜನರ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು.

Tap to resize

Latest Videos

undefined

ಸಿದ್ದರಾಮಯ್ಯ ಜೋಕರ್‌, ಪೆದ್ದ, ಶಕುನಿ ಇದ್ದಂತೆ: ಸಚಿವ ಶ್ರೀರಾಮುಲು

ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಸಚಿವ ಶ್ರೀರಾಮುಲು ಹಾಗೂ ರಾಜೂಗೌಡರ ನಡುವೆ ಸಣ್ಣ ಮುನಿಸು ಇತ್ತೆನ್ನಲಾಗಿದೆ. ಕೆಲವು ಸಂದರ್ಭಗಳಲ್ಲಿ ಪರೋಕ್ಷವಾಗಿ ಮಾತಿನಲ್ಲಿ ತಿವಿದಿದ್ದೂ ಇದೆ. ಆದರೆ, ಸಿಎಂ ಬೊಮ್ಮಾಯಿ ಅವರು ಇಬ್ಬರ ಜೊತೆ ಮಾತುಕತೆ ನಡೆಸಿ, ನಡುವಿನ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ತಮ್ಮ ಭಾಷಣದಲ್ಲಿ ರಾಜೂಗೌಡರು, ಶ್ರೀರಾಮುಲು ತಮ್ಮ ನಡುವಿನ ಬಗ್ಗೆ ಇದಕ್ಕೆ ಸಿಎಂ ಒಂದಾಗಿಸಿದ ಬಗ್ಗೆ ಪ್ರಸ್ತಾಪಿಸಿದ್ದರು. ಶ್ರೀರಾಮುಲು ಅದ್ಯಾಕೆ ಹೀಗೆ ಹೇಳಿದರೋ ಎಂಬುದು ಚರ್ಚೆಗೆ ಗ್ರಾಸವಾಯ್ತು.

ಇನ್ನು, ಮುಂದುವರೆದು ಮಾತನಾಡಿದ ಸಚಿವ ಶ್ರೀರಾಮುಲು, ಕಾಂಗ್ರೆಸ್‌ ಪಕ್ಷದ ನಾಯಕರು ಮುಖ್ಯಮಂತ್ರಿಯಾಗಲು ತಿರುಕನ ಕನಸು ಕಾಣುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಉತ್ತಮವಾದ ಆಡಳಿತ ನೀಡುತ್ತಿದೆ. ಅದು ಸಾಧ್ಯವಿಲ್ಲ ಎಂದು ಹೇಳಿದರು. ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ಮಾಡವು ಸಂಕಲ್ಪ ಸಿಎಂ ಅವರು ಹೊಂದಿದ್ದಾರೆ. ಮೂರು ಬಾರಿ ಶಾಸಕರಾದ ರಾಜೂಗೌಡರನ್ನು ನಾಲ್ಕನೇ ಬಾರಿಯು ವಿಧಾನಸಭೆಗೆ ಹಾರಿಸಿ ಕಳುಹಿಸಬೇಕು ಎಂದು ಮನವಿ ಮಾಡಿದರು.

ಸಿಎಂ ಬೊಮ್ಮಾಯಿಗೆ ಬೆಳ್ಳಿಗದೆ ನೀಡಿ ಸನ್ಮಾನ: ಜಿಲ್ಲೆಯ ಹುಣಸಗಿ ತಾಲೂಕಿನ ಯುಕೆಪಿ ಕ್ಯಾಂಪಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಿಜೆಪಿ ಜನಸಂಕಲ್ಪ ಯಾತ್ರೆ ಸಮಾರಂಭದಲ್ಲಿ ಪರಿಶಿಷ್ಟಪಂಗಡದ ವತಿಯಿಂದ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರನ್ನು ಬೆಳ್ಳಿ ಗದೆ ನೀಡಿ ಸನ್ಮಾನಿಸಲಾಯಿತು. ಎಸ್‌ಟಿ ಸಮುದಾಯದ ಮೀಸಲಾತಿ ಶೇ. 5ಕ್ಕೇರಿಸಿದ್ದರಿಂದ ಸುರಪುರ ಮತಕ್ಷೇತ್ರಕ್ಕೆ ಆಗಮಿಸಿರುವ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರನ್ನು ಎಸ್‌ಟಿ ಸಮುದಾಯಗಳ ಪರವಾಗಿ 1.50 ಲಕ್ಷ ರೂ. ಮೌಲ್ಯದ ಗದೆ, ಹಾರ ಹಾಕಿ ಸನ್ಮಾನಿಸಲಾಯಿತು.

ನನ್ನನ್ನು ಗೇಲಿ ಮಾಡಿದವರಿಗೆ ಈಗ ಉತ್ತರ ಸಿಕ್ಕಿದೆ: ಸಚಿವ ಶ್ರೀರಾಮುಲು

ಕಳೆದ 40 ವರ್ಷಗಳ ಕನಸಾದ ಪರಿಶಿಷ್ಟ ಪಂಗಡ ಮೀಸಲಾತಿಯನ್ನು ಬಿಜೆಪಿ ಸರಕಾರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶೇ. 3ರಿಂದ ಶೇ.5ಕ್ಕೆ ಹೆಚ್ಚಳ ಮಾಡಿದ ನಿರ್ಧಾರ ಸಮುದಾಯದಲ್ಲಿ ಅತೀವ ಸಂತೋಷ ಉಂಟಾಗಿದೆ ಎಂದು ಜಿಲ್ಲಾ ಪಂಚಾಯತ್‌ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ) ಹೇಳಿದರು. ಯಾವ ಸರ್ಕಾರವೂ ಮೀಸಲಾತಿ ಅ​ಧಿಕ ಮಾಡುವ ಗೋಜಿಗೆ ಹೋಗುತ್ತಿರಲಿಲ್ಲ. ಎಸ್‌ಟಿಯಲ್ಲಿ 56 ಜಾತಿಗಳಿದ್ದು, ಅವರೆಲ್ಲರೂ ಮೀಸಲಾತಿ ಸೌಲಭ್ಯ ಪಡೆಯಲಿದ್ದಾರೆ. ಇದರಿಂದ ಸಮುದಾಯದ ಅಭಿವೃದ್ಧಿ ಆಗಲಿದೆ. ಶಿಕ್ಷಣ, ಉದ್ಯೋಗ, ಸರಕಾರದ ಸೌಲಭ್ಯ ಪಡೆಯಲು ಹೆಚ್ಚಿನ ಅನುಕೂಲವಾಗಲಿದೆ. ಎಸ್‌ಟಿ ಮೀಸಲಾತಿಗೆ ಸರ್ವ ಪಕ್ಷಗಳ ಜನಪ್ರತಿನಿ​ಗಳು ಸಹಕರಿಸಿದ್ದಾರೆ ಎಂದು ಅವರು ಹೇಳಿದರು.

click me!