ಜನಾರ್ದನ ರೆಡ್ಡಿಯನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಯತ್ನ: ಸಚಿವ ಶ್ರೀರಾಮುಲು

By Govindaraj SFirst Published Dec 25, 2022, 1:53 PM IST
Highlights

ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳುವ ಕುರಿತು ಈಗಾಗಲೇ ಎಲ್ಲ ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೇಳಿದರು. 

ಬಳ್ಳಾರಿ (ಡಿ.25): ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳುವ ಕುರಿತು ಈಗಾಗಲೇ ಎಲ್ಲ ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೇಳಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಜನಾರ್ದನ ರೆಡ್ಡಿ ಈ ಭಾಗದ ಹಿರಿಯ ನಾಯಕ. ಮೊದಲಿನಿಂದಲೂ ತನ್ನದೇ ಆದ ವರ್ಚಸ್ಸನ್ನು ಬೆಳೆಸಿಕೊಂಡು ಬಂದಿದ್ದಾರೆ. ಅವರ ಬಗ್ಗೆ ಪಕ್ಷದ ಎಲ್ಲ ಹಿರಿಯ ರಾಷ್ಟ್ರೀಯ,ರಾಜ್ಯ ನಾಯಕರ ಗಮನಕ್ಕೂ ತರಲಾಗಿದೆ. ಜನಾರ್ದನ ರೆಡ್ಡಿ ಹೇಳಿರುವ ವಿಚಾರಗಳನ್ನು ಸಹ ಪಕ್ಷದ ಹೈಕಮಾಂಡ್‌ಗೆ ತಿಳಿಸಿದ್ದೇನೆ ಎಂದು ವಿವರಿಸಿದರು.

ಮಾಜಿ ಸಚಿವ ಜನಾರ್ದನ ರೆಡ್ಡಿಯವರು ಹೊಸ ಪಕ್ಷ ಕಟ್ಟುವೆ, ಚುನಾವಣೆಯಲ್ಲಿ ಸ್ಪರ್ಧಿಸುವೆ ಎಂದು ಎಲ್ಲೂ ಹೇಳಿಲ್ಲ ಎಂದ ಸಚಿವ ರಾಮುಲು, ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳುವ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಭಾನುವಾರದ ಬೆಳವಣಿಗೆ (ರೆಡ್ಡಿ ಪತ್ರಿಕಾಗೋಷ್ಠಿ) ನೋಡಿಕೊಂಡು ಮಾತನಾಡುವೆ ಎಂದು ಸ್ಪಷ್ಟಪಡಿಸಿದರು. ನಗರದ ಸರ್ಕಾರಿ ಅತಿಥಿಗೃಹ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಜಿಲ್ಲಾಧಿಕಾರಿ ಕಚೇರಿ ಕಟ್ಟಡವನ್ನು ಮುಂದಿನ ಜ.4 ರಂದು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸುವುದರ ಜತೆಗೆ ಹಲವಾರು ಕಾಮಗಾರಿಗಳಿಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 

ಕಾಪಿ ಹೊಡೀತಿದ್ದೆ, ಗೂಂಡಾಗಿರಿ ಮಾಡಿ ಜೈಲಿಗೋಗಿದ್ದೆ: ಸಚಿವ ಶ್ರೀರಾಮುಲು

ವಿಮ್ಸ್‌ ಆವರಣದಲ್ಲಿ ತಾಯಿ ಮಕ್ಕಳ ಆಸ್ಪತ್ರೆಯನ್ನು ಸಹ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು. ಇವುಗಳೊಂದಿಗೆ ಜಿಲ್ಲಾ ಕ್ರೀಡಾಂಗಣದಲ್ಲಿನ ಸಿಂಥೆಟಿಕ್‌ ಟ್ರಾಕ್‌ ಉದ್ಘಾಟನೆ ಸೇರಿದಂತೆ ಬಡವರಿಗೆ ಪಟ್ಟಾನೀಡುವ ಕಾರ್ಯಕ್ರಮಕ್ಕೂ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿಗಳು ಈ ಭಾಗಕ್ಕೆ ಬಂದಲ್ಲಿ ಇನ್ನಷ್ಟುಅಭಿವೃದ್ಧಿ ಕೆಲಸ ಆಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಇನ್ನಷ್ಟುಕಾಮಗಾರಿಗಳನ್ನು ಸಹ ಪಟ್ಟಿ ಮಾಡಲಾಗುತ್ತಿದ್ದು, ಕೆಲವೊಂದು ಕಾಮಗಾರಿಗಳಿಗೆ ಅಂದು ಭೂಮಿ ಪೂಜೆ ಮಾಡಲಾಗುತ್ತದೆ ಎಂದು ವಿವರಿಸಿದರು. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸಮರ್ಥವಾಗಿ ಎದುರಿಸಲು ಬಳ್ಳಾರಿಯಲ್ಲಿ ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ. ಮೊದಲಿಗೆ ಕೊರೋನಾ ಬಂದಾಗ ನಮಗೆ ಅನುಭವ ಇರಲಿಲ್ಲ. 

ರೆಡ್ಡಿ ಸ್ನೇಹ, ಪಕ್ಷ ಸರಿದೂಗಿಸಿಕೊಂಡು ಹೋಗುತ್ತೇನೆ: ಸಚಿವ ಶ್ರೀರಾಮುಲು

ಅದರೆ, ಇದೀಗ ಕೋವಿಡ್‌ನ್ನು ಎಲ್ಲ ರೀತಿಯಲ್ಲೂ ಸಮರ್ಥವಾಗಿ ಎದುರಿಸಲು ಅಗತ್ಯ ಸಿದ್ಧತೆ ಈಗಾಗಲೇ ಮಾಡಿಕೊಳ್ಳಲಾಗಿದೆ. ಕೊರೋನಾ ಭೀತಿಯಿಂದ ಯಾರೂ ಕೂಡ ಗಾಬರಿ ಆಗೋದು ಬೇಡ ಎಂದರು. ಜನನಿಬಿಡ ಪ್ರದೇಶಗಳಾದ ರೈಲ್ವೆ ನಿಲ್ದಾಣ, ಬಸ್‌ ನಿಲ್ದಾಣ, ಸರ್ಕಾರಿ ಕಚೇರಿ ಸೇರಿದಂತೆ ಎಲ್ಲಡೆ ಮಾಸ್‌್ಕ ಧರಿಸುವುದನ್ನು ಕಡ್ಡಾಯ ಮಾಡಿದ್ದೇವೆ. ಎಲ್ಲರೂ ಎಸ್‌ಒಪಿ ನಿಯಮ ಪಾಲಿಸಬೇಕು. ಬೆಡ್‌, ಆಸ್ಪತ್ರೆ, ಆಕ್ಸೀಜನ್‌ ಎಲ್ಲ ರೆಡಿ ಇದೆ. ನಾನು ಆರೋಗ್ಯ ಸಚಿವನಾಗಿದ್ದಾಗ ಎಲ್ಲ ಜಿಲ್ಲೆಯಲ್ಲಿ ಆಕ್ಸಿಜನ್‌ ವ್ಯವಸ್ಥೆ ಮಾಡಿದ್ದೇವೆ ಎಂದು ತಿಳಿಸಿದರು.

click me!