ಬೈಎಲೆಕ್ಷನ್‌: 'ವಿಜಯೇಂದ್ರ ನೇತೃತ್ವದಲ್ಲಿ ಶಿರಾ ಕ್ಷೇತ್ರ ಗೆಲುವು'

By Kannadaprabha NewsFirst Published Oct 22, 2020, 11:52 AM IST
Highlights

ಮಾಜಿ ಸಚಿವ ಟಿ.ಬಿ.ಜಯಚಂದ್ರ 6 ಬಾರಿ ಗೆದ್ದು ಸಚಿವರಾದರೂ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಶಿರಾ ಕ್ಷೇತ್ರ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆ ಇದ್ದರೂ ಯಾವುದೇ ಅಭಿವೃದ್ಧಿ ಆಗಿಲ್ಲ ಎಂದು ಆರೋಪಿಸಿದ ಸಚಿವ ಶ್ರೀರಾಮುಲು 

ತುಮಕೂರು(ಅ.22):  ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ಶಿರಾ ಉಪಚುನಾವಣೆಯಲ್ಲಿ ಗೆದ್ದೇ ಗೆಲ್ಲುವ ವಿಶ್ವಾಸವನ್ನು ಸಚಿವ ಶ್ರೀರಾಮುಲು ವ್ಯಕ್ತಪಡಿಸಿದ್ದಾರೆ.

ಬುಧವಾರ ಜಿಲ್ಲೆಯ ಶಿರಾ ತಾಲೂಕಿನ ವಿವಿಧೆಡೆ ಉಪಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ರಾಜೇಶಗೌಡ ಪರ ಪ್ರಚಾರ ಸಭೆ ನಡೆಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆ ಕೆ.ಆರ್‌.ಪೇಟೆ ವಿಧಾನಸಭೆಗೆ ನಡೆದ ಉಪಚುನಾವಣೆ ವಿಜಯೇಂದ್ರ ಅವರ ನೇತೃತ್ವದಲ್ಲೇ ನಡೆದಿತ್ತು. ಅಲ್ಲಿ ಗೆದ್ದ ಹಾಗೆ ಶಿರಾದಲ್ಲಿಯೂ ಗೆಲ್ಲುವುದಾಗಿ ತಿಳಿಸಿದ್ದಾರೆ.

"

ಪ್ರಧಾನಿ ಮೋದಿ ಹಾಗೂ ಯಡಿಯೂರಪ್ಪ ಅವರು ಮಾಡಿರುವ ಕೆಲಸದ ಆಧಾರದ ಮೇಲೆ ಚುನಾವಣೆ ಮಾಡುತ್ತಿರುವುದಾಗಿ ತಿಳಿಸಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಈ ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರೂ ಈ ಬಾರಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದರು.

ನಾನು ಕಣ್ಣೀರು ಹಾಕಿದ್ದಕ್ಕೆ ಸಿದ್ದರಾಮಯ್ಯ ಡಿಸಿಎಂ ಆಗಿದ್ದು: ದೇವೇಗೌಡ

ಮಾಜಿ ಸಚಿವ ಟಿ.ಬಿ.ಜಯಚಂದ್ರ 6 ಬಾರಿ ಗೆದ್ದು ಸಚಿವರಾದರೂ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಶಿರಾ ಕ್ಷೇತ್ರ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆ ಇದ್ದರೂ ಯಾವುದೇ ಅಭಿವೃದ್ಧಿ ಆಗಿಲ್ಲ ಎಂದು ಆರೋಪಿಸಿದರು.
ಪ್ರಧಾನಿ ಮೋದಿ ತುಮಕೂರಿಗೆ ಹೆಚ್ಚಿನ ಆದ್ಯತೆ ನೀಡಿರುವುದರಿಂದ ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದು ತಿಳಿಸಿದ ಅವರು ನೆರೆ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪನವರು ಸತತ ಸಂಪರ್ಕದಲ್ಲಿದ್ದಾರೆ. ನೆರೆ ಹಾವಳಿ ವಿಚಾರದಲ್ಲಿ 81 ಕೋಟಿ ರು. ಬಿಡುಗಡೆ ಮಾಡಿ, ರಾಷ್ಟ್ರೀಯ ವಿಪತ್ತು ಎಂದು ಘೋಷಣೆಗೆ ಮನವಿ ಮಾಡಿರುವುದಾಗಿ ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಡಿ.ಕೆ. ಶಿವಕುಮಾರ್‌ಗೆ ಇದು ಮೊದಲ ಚುನಾವಣೆ. ಹೀಗಾಗಿ ಈ ಚುನಾವಣೆಯನ್ನು ಅವರು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಆದರೆ ಬಿಜೆಪಿಯನ್ನು ಈ ಚುನಾವಣೆ ಉಸ್ತುವಾರಿಯನ್ನು ವಿಜಯೇಂದ್ರ ಅವರು ತೆಗೆದುಕೊಂಡಿರುವುದರಿಂದ ಗೆಲುವು ನಮ್ಮದೇ ಎಂದು ತಿಳಿಸಿದರು.

17 ಮಂದಿ ಶಾಸಕರ ರಾಜೀನಾಮೆಯಿಂದ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ನಮ್ಮ ಸರ್ಕಾರ ಇಲ್ಲದ ಸಮಯದಲ್ಲಿ ಈ ಭಾಗದಲ್ಲಿ ಅಭಿವೃದ್ಧಿ ಆಗಿಲ್ಲ. ಈ ಬಾರಿ ನಮ್ಮ ಸರ್ಕಾರ ಇರುವುದರಿಂದ ಎಲ್ಲಾ ಜನಾಂಗದವರು ಬಿಜೆಪಿಯನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
 

click me!