
ದಾವಣಗೆರೆ, [ನ.03]: ಇನ್ನೆರಡು ತಿಂಗಳಲ್ಲಿ ವಾಲ್ಮೀಕಿ ಸಮಾಜಕ್ಕೆ ಶೇಕಡಾ 7.5 ಮೀಸಲಾತಿ ನೀಡಿ. ಮೀಸಲಾತಿ ಸಿಗಲ್ಲ ಅಂದ್ರೆ ನನಗೆ ಏನೂ ಬೇಡ ಎಂದು ಸಚಿವ ಶ್ರೀರಾಮಲು ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಮಠದಲ್ಲಿ ಇಂದು [ಭಾನುವಾರ] ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯದಲ್ಲಿ ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ನೀಡಬೇಕು. ಇನ್ನೆರಡು ತಿಂಗಳಲ್ಲಿ ಮೀಸಲಾತಿ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಸಿಎಂ ಮುಂದೆ ಹೊಸ ಬೇಡಿಕೆ: ಈಡೇರದಿದ್ದರೇ ರಾಜಕೀಯ ನಿವೃತ್ತಿ ಎಂದ ಶ್ರೀರಾಮುಲು
ವಾಲ್ಮೀಕಿ ಸಮಾಜದ ಸ್ವಾಮೀಜಿಗಳು ಬೆಂಗಳೂರಿನವರೆಗೂ ಪಾದಯಾತ್ರೆ ಮಾಡಿದ್ದಾರೆ. ಹಿಂದಿನ ಸರ್ಕಾರ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ಮಾಡಿದೆ. ಬಿಜೆಪಿ ಸರ್ಕಾರ ಬಂದ ಬಳಿಕ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಗೆ ಒಪ್ಪಿಗೆ ನೀಡಿದೆ. ಜೊತೆಗೆ ಎರಡು ತಿಂಗಳಲ್ಲಿ ವರದಿ ಬರಲಿದೆ. ವರದಿ ಬಂದ ತಕ್ಷಣಕ್ಕೆ ರಾಜ್ಯ ಸರ್ಕಾರ ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ಕಲ್ಪಿಸಬೇಕು ಎಂದರು.
ಮೊನ್ನೆ ಅಕ್ಟೋಬರ್ 13ರಂದು ಚಿತ್ರದುರ್ಗದಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರೀರಾಮುಲು, ಎಸ್ಟಿ ಸಮುದಾಯಕ್ಕೆ ಶೇ 7.5 ರಷ್ಟು ಮೀಸಲಾತಿ ಕೊಡಿಸುವ ಜವಾಬ್ದಾರಿಯನ್ನು ನನಗೆ ಬಿಟ್ಟುಬಿಡಿ, ಕೊಟ್ಟ ಮಾತು ಉಳಿಸಿಕೊಳ್ಳದಿದ್ದಾರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿರುವುದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.