
ನವದೆಹಲಿ/ಬೆಂಗಳೂರು, (ಸೆ.09): ಕರ್ನಾಟಕ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ತಮ್ಮ ಇಲಾಖೆ ಕಾರ್ಯ ನೆಪದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನ ಭೇಟಿ ಮಾಡಿರುವುದು ರಾಜ್ಯ ಬಿಜೆಪಿಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
"
ಇದೇ ವಾರದಲ್ಲಿ ದೆಹಲಿಗೆ ತೆರಳಿ ಹೈಕಮಾಂಡ್ ಜತೆ ಸಂಪುಟ ವಿಸ್ತರಣೆ ಸಂಬಂಧ ಚರ್ಚೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಅದಕ್ಕೂ ಮೊದಲೇ ರಾಜ್ಯ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.
ಕೇಂದ್ರ ಸಚಿವ ಕೈಲಾಶ್ ಚೌಧರಿ ಭೇಟಿಯಾಗಿ ಮಹತ್ವದ ಬೇಡಿಕೆ ಇಟ್ಟ ಬಿ.ಸಿ.ಪಾಟೀಲ್
ವಿಧಾನ ಮಂಡಲ ಅಧಿವೇಶನಕ್ಕೂ ಮೊದಲು ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಯಡಿಯೂರಪ್ಪ ಪ್ರಯತ್ನ ನಡೆಸಿದ್ದಾರೆ ಎಂಬ ಮಾಹಿತಿಯಿದೆ. ಇದರ ಮಧ್ಯೆ ಜೆ.ಪಿ. ನಡ್ಡಾ ಮತ್ತು ಬಿ.ಸಿ. ಪಾಟೀಲ್ ಭೇಟಿ ಮಹತ್ವ ಪಡೆದುಕೊಂಡಿದೆ.
ಅಷ್ಟೇ ಅಲ್ಲದೇ ಮೂಲ ಬಿಜೆಪಿಗರು ಹೈಮಾಂಡ್ ಭೇಟಿ ಮಾಡಲು ದೆಹಲಿಗೆ ಹೋಗಿ ಸಾಧ್ಯವಾಗದೇ ಬರಿಗೈಯಲ್ಲಿ ವಾಪಸ್ ಆಗಿರುವ ಉದಾಹರಣೆಗಳು ಇವೆ. ಆದ್ರೆ, ಮೊನ್ನೆ-ಮೊನ್ನೆ ಅಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿಗೆ ವಸಲೆ ಬಂದ ಬಿ.ಸಿ.ಪಾಟೀಲ್ ಅವರು ನೇರವಾಗಿ ನಡ್ಡಾ ಅವರನ್ನ ಭೇಟಿಯಾಗಿರುವುದು ಸಹಜವಾಗಯೇ ಅಚ್ಚರಿಗೆ ಕಾರಣವಾಗಿದೆ.
ಬಿ.ಸಿ.ಪಾಟೀಲ್-ಕೈಲಾಶ್ ಚೌದರಿ ಭೆಟಿ
ಇನ್ನು ಜೆಪಿ ನಡ್ಡಾ ಭೇಟಿಗೂ ಮುನ್ನ ಬಿ.ಸಿ. ಪಾಟೀಲ್ ಅವರು ನವದೆಹಲಿಯ ಕೃಷಿ ಭವನದಲ್ಲಿ ಕೇಂದ್ರ ಸಚಿವರನ್ನು ಮೀಟ್ ಮಾಡಿ, ರಾಜ್ಯದ ಕೃಷಿ ಅಭಿವೃದ್ಧಿಗಳ ಕುರಿತು ಚರ್ಚಿಸಿ, ರೈತ ಕಲ್ಯಾಣ ನಿಧಿಯಡಿಯಲ್ಲಿ ರಾಜ್ಯಕ್ಕೆ ಇನ್ನೂ ಹೆಚ್ಚಿನ ಅನುದಾನ ನೀಡುವಂತೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಜಲಾನಯನ ಹಾಗೂ ಸೂಕ್ಷ್ಮ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂಬ ನಿಟ್ಟಿನಲ್ಲಿ ಕರ್ನಾಟಕ ಕೃಷಿ ಸಚಿವರಾದ ಬಿ.ಸಿ.ಪಾಟೀಲರಿಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವ ಕೈಲಾಶ್ ಚೌದರಿ ಅವರನ್ನು ಭೇಟಿ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.