ಮಸ್ಕಿ ಸೋಲಿನಿಂದ ಧೃತಿಗೆಡುವ ಅಗತ್ಯವಿಲ್ಲ: ಕಾರ್ಯಕರ್ತರಿಗೆ ಧೈರ್ಯ ತುಂಬಿದ ಬಿ.ಸಿ.ಪಾಟೀಲ್‌

Suvarna News   | Asianet News
Published : May 02, 2021, 04:40 PM ISTUpdated : May 02, 2021, 05:46 PM IST
ಮಸ್ಕಿ ಸೋಲಿನಿಂದ ಧೃತಿಗೆಡುವ ಅಗತ್ಯವಿಲ್ಲ: ಕಾರ್ಯಕರ್ತರಿಗೆ ಧೈರ್ಯ ತುಂಬಿದ ಬಿ.ಸಿ.ಪಾಟೀಲ್‌

ಸಾರಾಂಶ

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ವಿಜಯ ಸಾಧಿಸಿದ ಶರಣು ಸಲಗರಗೆ ಅಭಿನಂದನೆಗಳು| ನಮ್ಮ ಪಕ್ಷದ ಅಭ್ಯರ್ಥಿಯ ಮೇಲೆ ವಿಶ್ವಾಸವನ್ನಿರಿಸಿ ಮತ ನೀಡಿದ ಕ್ಷೇತ್ರದ ಮತದಾರರಿಗೆ ಹೃತ್ಪೂರ್ವಕ ಧನ್ಯವಾದಗಳು: ಬಿ.ಸಿ.ಪಾಟೀಲ್‌| 

ರಾಯಚೂರು(ಮೇ.02): ಮಸ್ಕಿ ವಿಧಾನಸಭಾ ಕ್ಷೇತ್ರದ ಜನಾದೇಶವನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸುತ್ತಾ, ನಮ್ಮ ಪಕ್ಷದ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಅವರಿಗೆ ಬೆಂಬಲಿಸಿದ ಮತದಾರರಿಗೆ ಧನ್ಯವಾದಗಳು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಅವರು ಹೇಳಿದ್ದಾರೆ.

 

ಇಂದು(ಭಾನುವಾರ) ಉಪಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಸಾಮಾಜಿಕ ಜಾಲತಾಣ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿರುವ ಬಿ.ಸಿ.ಪಾಟೀಲ್‌ ಅವರು, ಸೋಲೇ ಗೆಲುವಿನ ಸೋಪಾನ, ನಮ್ಮ ಪಕ್ಷದ ಶಕ್ತಿಯಾಗಿರುವ ಕಾರ್ಯಕರ್ತರು ಧೃತಿಗೆಡುವ ಅಗತ್ಯವಿಲ್ಲ, ನಾವು ನಿಮ್ಮೊಂದಿಗೆ ಇದ್ದೇವೆ. ನಿಮ್ಮ ಶ್ರಮಕ್ಕೆ ನನ್ನ ಕೃತಜ್ಞತೆಗಳು. ಆತ್ಮವಿಶ್ವಾಸವಿರಲಿ, ಮುನ್ನಡೆಯೋಣ ಎಂದು ಕಾರ್ಯಕರ್ತರಿಗೆ ಧೈರ್ಯ ತುಂಬಿದ್ದಾರೆ.

ಮಸ್ಕಿಯಲ್ಲಿ ಬಿಜೆಪಿಗೆ ಮುಖಭಂಗ: ಕಾಂಗ್ರೆಸ್ ಗೆಲುವಿಗೆ ಪ್ರಮುಖ ಕಾರಣವೇನು..? 

 

ಇನ್ನು ಬೀದರ್‌ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ವಿಜಯ ಸಾಧಿಸಿದ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಅವರಿಗೆ ಹಾರ್ದಿಕ ಅಭಿನಂದನೆಗಳು. ನಮ್ಮ ಪಕ್ಷದ ಅಭ್ಯರ್ಥಿಯ ಮೇಲೆ ವಿಶ್ವಾಸವನ್ನಿರಿಸಿ ಮತ ನೀಡಿದ ಕ್ಷೇತ್ರದ ಮತದಾರರಿಗೆ ಹೃತ್ಪೂರ್ವಕ ಧನ್ಯವಾದಗಳನ್ನ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ
ಹೈಕಮಾಂಡ್‌ ನಿರ್ಧಾರವೇ ಅಂತಿಮ: ಸಿಎಂ ಬದಲು ವಿಚಾರಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ