ಸದಾ ಬಿಎಸ್ ಯಡಿಯೂರಪ್ಪ ವಿರುದ್ಧ ಬೆಂಕಿ ಕಾರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಸಚಿವ ಬಿಸಿ ಪಾಟೀಲ್ ಟಾಂಗ್ ಕೊಟ್ಟಿದ್ದಾರೆ.
ದಾವಣಗೆರೆ, (ಜ.31): ಬಿಜೆಪಿ ಶಾಸಕ ಯತ್ನಾಳ್ ಮಾತಿಗೆ ಬೆಲೆ ಕೊಡುವ ಅಗತ್ಯವಿಲ್ಲ. ಅವರ ಮಾತು ತೋಳ ಬಂತು ತೊಳ ಮತ್ತು ನಾಳೆ ಬಾ ಅಂತಾರಲ್ಲ ಹಾಗೆ ಆಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಲೇವಡಿ ಮಾಡಿದ್ದಾರೆ.
ಇಂದು (ಭಾನುವಾರ) ದಾವಣಗೆರೆಯಲ್ಲಿ ಮತನಾಡಿದ ಬಿ.ಸಿ.ಪಾಟೀಲ್, ಬಸನಗೌಡ ಪಾಟೀಲ್ ಯತ್ನಾಳ್ ಸುಮ್ಮನೆ ಬುರುಡೆ ಬಿಡ್ತಾರೆ. ಯಡಿಯೂರಪ್ಪ ಎರಡೂವರೆ ವರ್ಷ ಸಿಎಂ ಆಗಿರುತ್ತಾರೆ. ಬಿಎಸ್ವೈ ಸಿಎಂ ಆಗಿರ್ತಾರೆಂದು ಅಮಿತ್ ಶಾ ಹೇಳಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಸುಮ್ಮನೆ ಹೇಳುತ್ತಿರುತ್ತಾರೆ ಎಂದು ಹೇಳಿದರು.
'ಯುಗಾದಿಯ ಹೊಸ ವರ್ಷಕ್ಕೆ ಹೊಸ ಸಿಎಂ ಬಂದೇ ಬರ್ತಾರೆ, ನೋಡ್ತಾ ಇರಿ'
ರಾಜ್ಯ ಬಿಜೆಪಿಯಲ್ಲಿ ಅಂತಹ ಯಾವುದೇ ಬೆಳವಣಿಗೆ ಆಗಿಲ್ಲ. ತೋಳ ಬಂತು ತೋಳ ಅಂತಾರಲ್ಲ ಹಾಗಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವ್ಯಂಗ್ಯವಾಡಿದರು.
ಕೇಂದ್ರ ಸರ್ಕಾರ ಒಳ್ಳೆಯ ಬಜೆಟ್ ನೀಡುವ ನಿರೀಕ್ಷೆಯಿದೆ. ಡಬಲ್ ಇಂಜಿನ್ ಸರ್ಕಾರವೆಂದು ಅಮಿತ್ ಶಾ ಹೇಳಿದ್ದಾರೆ. ಕೃಷಿ ಕ್ಷೇತ್ರಕ್ಕೆ ಒತ್ತು ನೀಡುವ ಸಾಧ್ಯತೆಯಿದೆ ಎಂದು ಬಿ.ಸಿ.ಪಾಟೀಲ್ ಹೇಳಿದರು. ಕೃಷಿ ಕ್ಷೇತ್ರದ ಬೇಡಿಕೆ ಬಗ್ಗೆ ಈಗಾಗಲೇ ವರದಿ ಸಲ್ಲಿಸಿದ್ದೇವೆ. ಈ ಬಾರಿ ರಾಜ್ಯದಲ್ಲಿ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಲ್ಲ ಎಂದು ಹೇಳಿದರು.