ನೆಹರು ಕುಟುಂಬ ಹೊಗಳದಿದ್ದರೆ ಡಿಕೆಶಿ ಸ್ಥಾನ ಕಳೆದುಕೊಳ್ಳಬೇಕಾಗುತ್ತದೆ

Kannadaprabha News   | Asianet News
Published : Aug 14, 2021, 09:36 AM IST
ನೆಹರು ಕುಟುಂಬ ಹೊಗಳದಿದ್ದರೆ ಡಿಕೆಶಿ ಸ್ಥಾನ ಕಳೆದುಕೊಳ್ಳಬೇಕಾಗುತ್ತದೆ

ಸಾರಾಂಶ

ನೆಹರು ಕುಟುಂಬದವರನ್ನು ಹೊಗಳದೇ ಇದ್ದರೆ ಡಿ.ಕೆ.ಶಿವಕುಮಾರ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕ್ತಾರೆ ಅವರನ್ನು ಹೊಗಳಿಕೊಂಡು ಹೋಗುತ್ತಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್

 ಹಿರೇಕೆರೂರು (ಆ.14): ನೆಹರು ಕುಟುಂಬದವರನ್ನು ಹೊಗಳದೇ ಇದ್ದರೆ ಡಿ.ಕೆ.ಶಿವಕುಮಾರ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕ್ತಾರೆ. ಹೀಗಾಗಿ ಅವರನ್ನು ಹೊಗಳಿಕೊಂಡು ಹೋಗುತ್ತಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ತಿರುಗೇಟು ನೀಡಿದರು.

ತಾಲೂಕಿನ ಬಸರಿಹಳ್ಳಿ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ ತಂದು ಕೊಡಲು ಭಾರತದ ಎಲ್ಲರೂ ಶ್ರಮಿಸಿದ್ದಾರೆ. ಸ್ವಾತಂತ್ರ ಹೋರಾಟ ಪಕ್ಷಗಳ ಆಧಾರದಲ್ಲಿ ನಡೆದಿಲ್ಲ. ಸ್ವಾತಂತ್ರ ನಂತರ ನೆಹರು ಅವರು ಮುಂಚೂಣಿಗೆ ಬಂದು ಪ್ರಧಾನಿಯಾಗಿದ್ದಾರೆ. ಒಬ್ಬರಿಂದಲೇ ಸ್ವಾತಂತ್ರ್ಯ ಬಂದಿಲ್ಲ. ಸ್ವಾತಂತ್ರ್ಯದ ಸಮಯದಲ್ಲಿ ಯಾವುದೇ ಪಕ್ಷ, ಪಂಗಡಗಳು, ರಾಜಕೀಯ ಇರಲಿಲ್ಲ. ಬ್ರಿಟಿಷರ ಆಡಳಿತಕ್ಕೆ ಒಳಪಟ್ಟಸಂದರ್ಭದಲ್ಲಿ ಪ್ರತಿಯೊಬ್ಬ ಪ್ರಜೆ ದೇಶಕ್ಕೆ ಸ್ವಾತಂತ್ರ್ಯ ಬರಬೇಕೆಂದು ಹೋರಾಟ ಮಾಡಿದ್ದಾರೆ ಎಂದರು.

ಕೊರೋನಾ ಹರಡೋದಕ್ಕೆ ನೀವೇ ಕಾರಣರಾಗ್ತಿಲ್ವಾ ಪಾಟೀಲ್ರೇ?

ಮುಖ್ಯಮಂತ್ರಿ ಬೊಮ್ಮಾಯಿ ಅವರ ಆಡಳಿತದಲ್ಲೂ ವಿಜಯೇಂದ್ರ ಹಸ್ತಕ್ಷೇಪ ಮಾಡುತ್ತಿದ್ದಾರೆ ಎನ್ನುವ ಶಾಸಕ ಯತ್ನಾಳರ ಆರೋಪಕ್ಕೆ ಪ್ರತಿಕ್ರಿಯಿಸಿದ ಬಿ.ಸಿ. ಪಾಟೀಲ, ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ 15 ದಿನಗಳಾಗಿವೆ. ಯತ್ನಾಳರು ಆಕ್ಷೇಪ ಮಾಡುತ್ತಾರೆ ಎಂದು ಅವರ ಆಡಳಿತವನ್ನು ಬದಲಾವಣೆ ಮಾಡಿಕೊಳ್ಳುವುದಕ್ಕೆ ಆಗುವುದಿಲ್ಲ. ಉತ್ತಮ ಆಡಳಿತವನ್ನು ಬೊಮ್ಮಾಯಿ ಅವರು ಕೊಡುತ್ತಿದ್ದಾರೆ. ಮುಂದಿನ ದಿನಗಳಲ್ಲಿಯೂ ಉತ್ತಮ ಆಡಳಿತದ ನಿರೀಕ್ಷೆಯಿದೆ. ವಿಜಯೇಂದ್ರ ಮತ್ತು ಮಾಜಿ ಸಿ.ಎಂ. ಯಡಿಯೂರಪ್ಪ ಅವರ ಬಗೆಗೆ ಯತ್ನಾಳರ ಹೇಳಿಕೆ ಅವರ ವೈಯಕ್ತಿಕ. ಬಿಎಸ್‌ವೈ ಹಾಗೂ ವಿಜಯೇಂದ್ರ ಬಗೆಗೆ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದರು.

ಶಾಸಕ ಸ್ಥಾನಕ್ಕೆ ಆನಂದ ಸಿಂಗ್‌ ರಾಜೀನಾಮೆ ಕೊಡುವುದಿಲ್ಲ. ನಾನು ಅವರೊಂದಿಗೆ ಮಾತನಾಡಿದ್ದೇನೆ. ಸ್ವಲ್ಪ ಅಸಮಾಧಾನವಿತ್ತು. ಎಲ್ಲವೂ ಸರಿಯಾಗುತ್ತದೆ ಎಂದರು.

ಮೇಕೆದಾಟು ಯೋಜನೆ ಮಾಡುತ್ತೇವೆ :  ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಮಾತನಾಡಿ, ಬೆಂಗಳೂರ ನಗರಕ್ಕೆ ಕುಡಿಯುವ ನೀರಿಗಾಗಿ ರೂಪಿಸಿರುವ ಮೇಕೆದಾಟು ಯೋಜನೆಯನ್ನು ಜಾರಿಗೊಳಿಸುತ್ತೇವೆ. ಇದಕ್ಕೆ ಸಿಎಂ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಿ ಸಹಕಾರ ಕೊಟ್ಟಿದ್ದೇವೆ. ತಮಿಳುನಾಡು ಎಷ್ಟೇ ವಿರೋಧ ಮಾಡಿದರೂ ಯೋಜನೆ ಅನುಷ್ಠಾನಗೊಳ್ಳುತ್ತದೆ. ಸಿ.ಟಿ. ರವಿ ಅವರು ಕನ್ನಡನಾಡು, ನುಡಿ, ಜಲದ ವಿಚಾರದಲ್ಲಿ ರಾಜಕಾರಣ ಮಾಡುವುದಿಲ್ಲ. ಅವರು ರಾಜ್ಯದ ಪರವಾಗಿಯೇ ಇದ್ದಾರೆ ಎಂದು ಹೇಳಿದರು.

ಕೋವಿಡ್‌ ಹಿನ್ನೆಲೆಯಲ್ಲಿ ಸರಳ ಕಾರ್ಯಕ್ರಮ:  ಹಿರೇಕೆರೂರ ತಾಲೂಕಿನಲ್ಲಿ ಸಹಕಾರ ಇಲಾಖೆಯ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಮೊದಲು ನಿಗದಿಪಡಿಸಲಾಗಿತ್ತು. ಕೋವಿಡ್‌ ಹಿನ್ನೆಲೆಯಲ್ಲಿ ಹೆಚ್ಚಿನ ಜನರನ್ನು ಸೇರಿಸದೇ ಸರಳವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ. ಅಲ್ಲದೆ ಸಚಿವರಾದ ಎಸ್‌.ಟಿ. ಸೋಮಶೇಖರ ಹಾಗೂ ಬೈರತಿ ಬಸವರಾಜ ಅವರು ನಮ್ಮ ಕೋರಿಕೆ ಮೇರೆಗೆ ಕ್ಷೇತ್ರಕ್ಕೆ ಆಗಮಿಸಿದ್ದು, ದುರ್ಗಾದೇವಿ ದರ್ಶನ ಪಡೆದಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ಯಾರಂಟಿ ಹೆಸರಿನಲ್ಲಿ ಕಾಲಹರಣ ಮಾಡುವ ಕೆಲಸ ಆಗುತ್ತಿದೆ: ಛಲವಾದಿ ನಾರಾಯಣಸ್ವಾಮಿ
ಕೇಂದ್ರ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ: ಸಂಸದ ಯದುವೀರ್