ರಾಹುಲ್ ಗಾಂಧಿ ಹಾಗೂ ಅವರ ತಾಯಿ ಬೇಲ್ ಮೇಲೆ ಹೊರಗೆ ಇದ್ದಾರೆ. ಕಮಿಷನ್ ತೆಗೆದುಕೊಳ್ಳುವುದರಲ್ಲಿ ಕಾಂಗ್ರೆಸ್‌ನವರು ಪಿತಾಮಹರು. ಅವರಿಗೆ ಬಿಜೆಪಿ ಹಾಗೂ ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದರು.
ಹಾವೇರಿ (ಅ.03): ರಾಹುಲ್ ಗಾಂಧಿ ಹಾಗೂ ಅವರ ತಾಯಿ ಬೇಲ್ ಮೇಲೆ ಹೊರಗೆ ಇದ್ದಾರೆ. ಕಮಿಷನ್ ತೆಗೆದುಕೊಳ್ಳುವುದರಲ್ಲಿ ಕಾಂಗ್ರೆಸ್‌ನವರು ಪಿತಾಮಹರು. ಅವರಿಗೆ ಬಿಜೆಪಿ ಹಾಗೂ ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಗೇನಾದರೂ ಕಮಿಷನ್ ಬಗ್ಗೆ ಅವರಲ್ಲಿ ದಾಖಲೆ ಇದ್ದರೆ ಒದಗಿಸಬೇಕು. ರಾಹುಲ್ ಗಾಂಧಿ ರಾಜ್ಯಕ್ಕೆ ಬಂದಿದ್ದಾರೆ. ಅವರು ನಮ್ಮ ಸರ್ಕಾರ 40 ಪರ್ಸೆಂಟ್ ಸರ್ಕಾರ ಎಂದು ಹೇಳಿದ್ದಾರೆ. ಅವರ ಪಕ್ಷದವರೇ ಭ್ರಷ್ಟಾಚಾರದಲ್ಲಿ ಪಿತಾಮಹರಾಗಿದ್ದಾರೆ.
ಅವರು ಭಾರತ್ ಜೋಡೋ ಯಾತ್ರೆ, ಪಾದಯಾತ್ರೆ ಮಾಡಿಕೊಳ್ಳಲಿ. ಜನತೆ ಅದನ್ನು ಲೆಕ್ಕಕ್ಕೆ ತೆಗೆದುಕೊಳ್ಳುವ ಪರಿಸ್ಥಿತಿಯಿಲ್ಲ. ಅವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ರಾಜ್ಯಾದ್ಯಂತ ನಮ್ಮ ಕಾರ್ಯಕರ್ತರು ಪ್ರತಿಭಟನೆಗೆ ಇಳಿಯಬೇಕಾಗುತ್ತದೆ ಎಂಬ ಎಚ್ಚರಿಕೆ ಕೊಡುತ್ತೇನೆ ಎಂದು ವಾಗ್ದಾಳಿ ನಡೆಸಿದರು. ನಾವು ಹಲವು ಜನಪರ ಅಭಿವೃದ್ಧಿ ಕೆಲಸ ಮಾಡಿದ್ದೇವೆ. ಅದನ್ನು ಮುಂದಿಟ್ಟುಕೊಂಡು ಜನರ ಮುಂದೆ ಹೋಗುತ್ತೇವೆ. ಕಾಂಗ್ರೆಸ್‌ನವರು ಯಾವ ನೈತಿಕತೆ ಇಟ್ಟುಕೊಂಡು ಜನರ ಬಳಿ ಹೋಗುತ್ತಾರೆ? ಅವರು ಕೆಲಸ ಮಾಡಿದ್ದರೆ ಯಾಕೆ ಕಳೆದ ಬಾರಿ 79 ಸೀಟು ಬರುತ್ತಿತ್ತು ಎಂದು ಪ್ರಶ್ನಿಸಿದರು.
undefined
ಯಾರು ಭಾರತ್ ಜೋಡೋ ಮಾಡಿದ್ದಾರೆ, ತೋಡೋ ಮಾಡಿದ್ದಾರೆಂದು ಎಲ್ಲರಿಗೂ ಗೊತ್ತಿದೆ: ಸಿಎಂ ಬೊಮ್ಮಾಯಿ
ಸಿದ್ದರಾಯಮಯ್ಯ ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘವು ದೇಶದ ಸಂಸ್ಕೃತಿ ಬಗ್ಗೆ ಅಪಾರ ಗೌರವ ಹೊಂದಿದೆ. ಅಸೂಯೆಯಿಂದ ಸಿದ್ದರಾಮಯ್ಯ ಆ ರೀತಿ ಮಾತನಾಡುತ್ತಿದ್ದಾರೆ. ರಾಜ್ಯ ಹಾಗೂ ದೇಶದ ರಕ್ಷಣೆ ಕುರಿತು ನಮಗೆ ಆರ್‌ಎಸ್‌ಎಸ್‌ನವರು ಸಲಹೆ ನೀಡುತ್ತಿದ್ದಾರೆ ಎಂದರು.
ಕಾಂಗ್ರೆಸ್‌ನವರು ಪೇಸಿಎಂ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ. ಸಿದ್ದರಾಮಯ್ಯ ಕೂಡಾ ಮುಖ್ಯಮಂತ್ರಿ ಆಗಿದ್ದಾಗ ಏನೇನು ಮಾಡಿದ್ದೆ ಎಂಬುದನ್ನು ನೋಡಿಕೊಳ್ಳಬೇಕು. ಸಿದ್ದರಾಮಯ್ಯ ತಮ್ಮ ಬೆನ್ನನ್ನು ತಾವು ನೋಡಿಕೊಳ್ಳಲಿ. ಇಂಥ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಭಾರತ್ ಜೋಡೋ ಸಂದರ್ಭದಲ್ಲಿ ಡಿಕೆಶಿ ಕಣ್ಣೀರು ಹಾಕಿರುವುದು ನಾಟಕ. ಅವರು ಏನೇ ಮಾಡಿದರೂ ಜನ ನಮ್ಮ ಪರ ಇದ್ದಾರೆ. ಮುಂದಿನ ದಿನಗಳಲ್ಲಿ ಜನ ನಮಗೇ ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಸಚಿವ ಬೈರತಿ ಹೇಳಿದರು.
ನವೆಂಬರ್‌ನಲ್ಲೇ ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ: ಸಿಎಂ ಬೊಮ್ಮಾಯಿ
ರಾಹುಲ್ ಗಾಂಧಿ ಡಿಕೆಶಿ- ಸಿದ್ದರಾಮಯ್ಯರನ್ನು ಜೋಡಿಸಲು ಬಂದಿದ್ದಾರೆ: ರಾಹುಲ್ ಗಾಂಧಿ ಭಾರತ್ ಜೋಡೋ ಕಾರ್ಯಕ್ರಮಕ್ಕೆ ಬಂದಿಲ್ಲ, ಡಿಕೆಶಿ-ಸಿದ್ದರಾಮಯ್ಯರನ್ನು ಜೋಡಿಸಲು ಬಂದಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ವ್ಯಂಗ್ಯವಾಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ಜೋಡಿಸುವ ಅವಶ್ಯಕತೆ ಇಲ್ಲ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ಮಟ್ಟದಲ್ಲಿ ಭಾರತ ದೇಶವನ್ನು ಕೊಂಡೊಯ್ದು ಹೆಸರು ಮಾಡಿ ಜೋಡಿಸುತ್ತಿದ್ದಾರೆ ಎಂದರು.
ನಮ್ಮ ಬಿಜೆಪಿ ಮೇಲೆ 40% ಆರೋಪ ಸರಿಯಲ್ಲ. ರಾಹುಲ್ ಗಾಂಧಿ, ಅವರ ತಾಯಿ, ಸಹಚರರು ಬೇಲ್‌ನಲ್ಲಿದ್ದಾರೆ ಅದು ನೆನಪಿರಲಿ ಎಂದ ಅವರು, ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧವೂ ಹರಿಹಾಯ್ದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಇದ್ದರು.