ಕರ್ನಾಟಕದಲ್ಲೂ ಯುವಕರಿಗೆ ಮನ್ನಣೆ ಹೈಕಮಾಂಡ್‌ಗೆ ಬಿಟ್ಟದ್ದು: ಸಚಿವ ಭೈರತಿ

By Kannadaprabha News  |  First Published Dec 10, 2022, 10:30 PM IST

ದೇಶದ ಅಭಿವೃದ್ಧಿಯನ್ನು ಉತ್ತುಂಗಕ್ಕೆ ಕೊಂಡೊಯ್ದಿರುವ ಪ್ರಧಾನಿ ದೇಶದ ಸುಭದ್ರತೆಯ ದೃಷ್ಟಿಯಿಂದಲೂ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ: ಸಚಿವ ಭೈರತಿ ಬಸವರಾಜ 


ಬಾಗಲಕೋಟೆ(ಡಿ.10):  ಗುಜರಾತ ಮಾದರಿಯಂತೆ ಕರ್ನಾಟಕದಲ್ಲೂ ಹಿರಿಯರಿಗೆ ಪಕ್ಷದ ಜವಾಬ್ದಾರಿ ಕೊಟ್ಟು ಯುವಕರಿಕೆ ಮನ್ನಣೆ ನೀಡಲಾಗುತ್ತದೆ ಎಂಬ ಸುದ್ದಿ ಇದೆ. ಆದರೆ, ಅದು ಯಾವ ರೀತಿ ಜಾರಿಯಾಗಲಿದೆ ಎಂಬುದು ಪಕ್ಷದ ಹೈಕಮಾಂಡ್‌ ವಿವೇಚನೆಗೆ ಬಿಟ್ಟದ್ದು ಎಂದು ನಗರಾಭಿವೃದ್ಧಿ ಖಾತೆ ಸಚಿವ ಭೈರತಿ ಬಸವರಾಜ ಹೇಳಿದರು.

ಜಿಲ್ಲೆಯ ಇಳಕಲ್‌ ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಗುಜರಾತ್‌ ಮಾದರಿ ರೀತಿಯಲ್ಲಿಯೇ ಬರುವ ಚುನಾವಣೆಯಲ್ಲಿ ರಾಜ್ಯದಲ್ಲಿಯೂ ಬಿಜೆಪಿ ಹಿರಿಯರಿಗೆ ಟಿಕೆಟ್‌ ಸಿಗದೇ ಇರುವ ಭಯ ಕಾಡುತ್ತಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಶೀಘ್ರದಲ್ಲಿಯೇ ಉತ್ತರ ದೊರೆಯಲಿದೆ. ಈ ನಿಟ್ಟಿನಲ್ಲಿ ನಾವು ಸ್ವಲ್ಪ ದಿನಗಳವರೆಗೆ ಕಾದು ನೋಡಬೇಕು. ಇದರಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮವಾಗಿರಲಿದೆ ಎಂದು ತಿಳಿಸಿದರು.

Tap to resize

Latest Videos

undefined

ಗುಜರಾತ್‌ನಲ್ಲಿ ಕಾಂಗ್ರೆಸ್‌ ಸೋಲಿಗೆ ಆಮ್‌ ಆದ್ಮಿ ಪಕ್ಷವೇ ಕಾರಣ: ಸತೀಶ ಜಾರಕಿಹೊಳಿ

ಪ್ರಧಾನಿ ಮೋದಿ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಏನು ಬೇಕಾದರೂ ಹೇಳಬಹುದು. ಆದರೆ, ಅಮೆರಿಕ ಅಧ್ಯಕ್ಷರೇ ಪ್ರಧಾನಿ ಮೋದಿಗೆ ನಮಸ್ಕರಿಸುವ ಮಟ್ಟಕ್ಕೆ ಬಂದಿರುವುದನ್ನು ಸಹ ಅವರು ಗಮನಿಸಬೇಕಿದೆ. ದೇಶದ ಅಭಿವೃದ್ಧಿಯನ್ನು ಉತ್ತುಂಗಕ್ಕೆ ಕೊಂಡೊಯ್ದಿರುವ ಪ್ರಧಾನಿ ದೇಶದ ಸುಭದ್ರತೆಯ ದೃಷ್ಟಿಯಿಂದಲೂ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವರು ಹೇಳಿದರು.
 

click me!