
ಮೈಸೂರು (ಫೆ.23): ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ. ಮಾನ ಮರ್ಯಾದೆ ಇಲ್ಲದವರು ಮಾತ್ರ ಲೋಕಾಯುಕ್ತ ರಿಪೋರ್ಟ್ ಟೀಕಿಸಬೇಕು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ವಾಗ್ದಾಳಿ ನಡೆಸಿದರು. ಲೋಕಾಯುಕ್ತ ‘ಬಿ’ ರಿಪೋರ್ಟ್ ಬಗ್ಗೆ ಬಿಜೆಪಿ ನಾಯಕರು ಮಾಡುತ್ತಿರುವ ಆಕ್ಷೇಪ ಕುರಿತು ಪ್ರತಿಕ್ರಿಯಿಸಿ, ನಾವು ಏನೂ ತಪ್ಪು ಮಾಡಿಲ್ಲ, ಬನ್ನಿ ಚಾಮುಂಡೇಶ್ವರಿ ಬಳಿ ಆಣೆ ಮಾಡಿ ಅಂತಾ ಕರೆದಿದ್ದೆ. ಯಾರೂ ಆಣೆ ಮಾಡಲು ಬರಲಿಲ್ಲ. ಈಗ ಲೋಕಾಯುಕ್ತ ರಿಪೋರ್ಟ್ ಬಂದಿದೆ. ರಾಜ್ಯದ ಜನರಿಗೆ ಈಗ ಸತ್ಯ ಗೊತ್ತಾಗಿದೆ ಎಂದರು.
50:50 ಪರಿಹಾರ ನೀಡುವ ಕಾನೂನು ಮುಡಾದಲ್ಲಿ ಇದೆ. ಅದರ ಅನ್ವಯ ಪರಿಹಾರ ನೀಡಲಾಗಿದೆ. ಆ ಕಾನೂನು ಇಲ್ಲದೇ ಪರಿಹಾರ ಕೊಡುವುದು ಹೇಗೆ?. ಬಿಜೆಪಿಯವರ ಕಾಲದಲ್ಲೇ ಪರಿಹಾರ ಹೆಚ್ಚು ನೀಡಿರುವುದು. ಪಾರ್ವತಮ್ಮ ಅವರಿಗೂ ಬೊಮ್ಮಾಯಿ ಸಿಎಂ ಆಗಿದ್ದಾಗ ಪರಿಹಾರ ನೀಡಲಾಗಿದೆ ಎಂದು ಅವರು ತಿಳಿಸಿದರು.
ಮುಡಾದ ಪ್ರಮುಖ ಫೈಲ್‌ಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂಬ ಶಾಸಕ ಶ್ರೀವತ್ಸ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿ, ಮುಡಾ ಫೈಲ್‌ಗಳನ್ನು ನಾನು ತೆಗೆದುಕೊಂಡು ಹೋಗಲು ಅವು ಕಡ್ಲೆಪುರಿಯಲ್ಲ. ಫೈಲ್ ಮಿಸ್ಸಿಂಗ್ ಅಂತಾ ಯಾವ ವರದಿಯಲ್ಲಿ ಇದೆ?. ಫೈಲ್ ಎತ್ತಿಕೊಂಡು ಹೋಗುವುದು ಅಷ್ಟೊಂದು ಸುಲಭನಾ?. 141 ಫೈಲ್ ತೆಗೆದುಕೊಂಡು ಹೋಗಿದ್ದಾರೆ ಎಂದು ಬಿಜೆಪಿಯವರು ಆರೋಪ ಮಾಡಿದ್ದಾರೆ. ಇವರಿಗೆ ಆ ನಂಬರ್ ನೀಡಿದವರು ಯಾರು?. ಬಹುಶಃ ಈ ಆರೋಪ ಮಾಡಿದವರೇ ಫೈಲ್ ತೆಗೆದುಕೊಂಡು ಹೋಗಿರಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಅನುಮೋದನೆ ಸಿಗುವ ವಿಶ್ವಾಸ: ಸಂಸದ ಡಾ.ಮಂಜುನಾಥ್
ಸಿದ್ದರಾಮಯ್ಯ ಯಾವತ್ತೂ ಅಕ್ರಮ ಮಾಡಿಲ್ಲ, ತಪ್ಪು ಮಾಡಿಲ್ಲ. ಬಿಜೆಪಿಯವರು ಸುಳ್ಳು ಹೇಳಿಕೊಂಡು ಮೈಸೂರು, ಮಂಗಳೂರು ಯಾತ್ರೆ ಮಾಡಿದರು. ಪಾರ್ವತಮ್ಮನವರಿಗೆ ಭೂಮಿ ಹೋಗಿತ್ತು, ಪರಿಹಾರ ಬಂದಿದೆ ಅಷ್ಟೇ. ಲೋಕಾಯುಕ್ತದವರು ವಾಸ್ತವ ಸ್ಥಿತಿಯನ್ನು ತನಿಖೆ ಮಾಡಿ ವರದಿ ನೀಡಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.