ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಸಚಿವ ಚೆಲುವರಾಯಸ್ವಾಮಿ ಹೇಳಿದ್ದಿಷ್ಟು

By Girish Goudar  |  First Published Nov 3, 2023, 9:30 PM IST

ಸಿಎಂ ಬದಲಾವಣೆ, ಐದು ವರ್ಷ ಅವರೇ ಸಿಎಂ ಅವೆಲ್ಲವೂ ವೈಯಕ್ತಿಕ ಹೇಳಿಕೆ, ಜಿ. ಪರಮೇಶ್ವರ್ ಸಿಎಂ ವಿಷಯಕ್ಕೂ ನಾನು ಯಾವ ಸಮುದಾಯದ ವಿರೋಧಿಯೂ ಅಲ್ಲ: ಸಚಿವ ಚೆಲುವರಾಯಸ್ವಾಮಿ


ವರದಿ: ರವಿ.ಎಸ್. ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು

ಕೊಡಗು(ನ.03):  ಒಂದೆಡೆ ಸಿಎಂ ಸಿದ್ದರಾಮಯ್ಯ ಅವರು ಮುಂದಿನ ಐದು ವರ್ಷವೂ ನಾನೇ ಸಿಎಂ ಎಂದಿದ್ದರೆ ಮತ್ತೊಂದೆಡೆ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ಕೂಡ ಸಿದ್ದರಾಮಯ್ಯನವರೇ ಮುಂದೆಯೂ ಸಿಎಂ ಎಂದಿರುವುದು ಪಕ್ಷದ ಹೈಕಮಾಂಡ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯದ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರೆಲ್ಲರೂ ಕುಳಿತು ಸರಿ ತಪ್ಪು ಏನು ಅಂತ ನಿರ್ಧರಿಸುತ್ತಾರೆ. ನಮ್ಮ ಕೆಲಸ ಏನಿದ್ದರೂ ರೈತರಪರ ಕೆಲಸ ಮಾಡುವುದು ಎಂದು ಹೇಳುವ ಮೂಲಕ ಸಚಿವ ಚೆಲುವರಾಯಸ್ವಾಮಿ ಅವರು ಎಲ್ಲರ ಹೇಳಿಕೆಗಳಿಂದ ದೂರ ಉಳಿದಿದ್ದಾರೆ. 

Tap to resize

Latest Videos

undefined

ಇಂದು(ಶುಕ್ರವಾರ) ಕೊಡಗು ಜಿಲ್ಲೆ ಪೊನ್ನಂಪೇಟೆಯಲ್ಲಿ ನಡೆದ ಕೃಷಿ ಯಂತ್ರಗಳ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷಗಳು ಎಂದ ಮೇಲೆ ಸಣ್ಣಪುಟ್ಟದ್ದು ಎಲ್ಲಾ ಪಕ್ಷಗಳಲ್ಲೂ ಇದ್ದೇ ಇರುತ್ತದೆ. ಅದನ್ನು ಸರಿಪಡಿಸುವ ಶಕ್ತಿ ನಮ್ಮ ಪಕ್ಷಕ್ಕೆ ಇದೆ. ಕೆಲವರು ವೈಯಕ್ತಿಕವಾಗಿ ಏನಾದರೂ ಮಾತನಾಡಬಹುದು. ಅದನ್ನು ಅಲ್ಲಿಯೇ ಸರಿ ಮಾಡ್ತಾರೆ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. 

ಎಲ್ಲ ಕೆಳಹಂತದ ಪೊಲೀಸ್ ಸಿಬ್ಬಂದಿಗೆ ವಸತಿ ಕಲ್ಪಿಸುವ ಗುರಿ : ಗೃಹ ಸಚಿವ ಪರಮೇಶ್ವರ್

ಇನ್ನು ಮುಸ್ಲಿಂ ಅವರಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂಬ ಜಮೀರ್ ಅಹಮ್ಮದ್ ಖಾನ್ ಹೇಳಿಕೆ ವೈರಲ್ ಆಗಿರುವ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು ಎಲ್ಲಾ ಸಮುದಾಯದ ಜನರ ಮತಗಳಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಹೀಗಾಗಿಯೇ ರಾಜ್ಯದ ಏಳು ಕೋಟಿ ಜನರಿಗೆ ನಾವು ಧನ್ಯವಾದ ಸಲ್ಲಿಸಿದ್ದೇವೆ. ಆದರೆ ಅವರವರ ಸಮುದಾಯದ ವಿಚಾರಕ್ಕೆ ಬಂದಾಗ ನಾವು ಹೆಚ್ಚು ಕೆಲಸ ಮಾಡಿದ್ದೇವೆ ಎಂದು ಹೇಳಿಕೊಂಡಿರಬೇಕು. ಅದರಲ್ಲಿ ತಪ್ಪೇನಿಲ್ಲ ಎಂದು ಹೇಳುವ ಮೂಲಕ ಜಮೀರ್ ಅಹಮ್ಮದ್ ಖಾನ್ ಪರ ಸಚಿವ ಚಲುವರಾಯಸ್ವಾಮಿ ಬ್ಯಾಟ್ ಬೀಸಿದರು. 

ಮುಂದೆ ಜಿ. ಪರಮೇಶ್ವರ್ ಅವರಿಗೆ ಸಿಎಂ ಆಗುವ ಅವಕಾಶವಿದೆ ಎಂದು ಸಚಿವ ಕೆ.ಎನ್. ರಾಜಣ್ಣ ಅವರು ಹೇಳಿರುವುದು ಅವರ ವೈಯಕ್ತಿಕ ಹೇಳಿಕೆ. ಅದಕ್ಕೆ ನಾನು ಉತ್ತರ ಕೊಡುವುದಕ್ಕೆ ಆಗುತ್ತಾ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ದಲಿತ ಸಿಎಂ ಕೂಗು ಇಂದಿನಿಂದಲೂ ಇದೆಯಲ್ಲಾ ಎನ್ನುವ ಪ್ರಶ್ನೆಗೆ ಮುಖ್ಯಮಂತ್ರಿ ಅಥವಾ ಮಂತ್ರಿ ಮಂಡಳ ರಚಿಸುವುದಕ್ಕೆ ಪಕ್ಷದ ಹೈಕಮಾಂಡ್ ಇದೆ. ನಾನು ಯಾವ ಸಮುದಾಯದ ವಿರೋಧಿಯೂ ಅಲ್ಲ. ನಮ್ಮ ಪಕ್ಷ ಯಾವ ನಿರ್ಧಾರ ಮಾಡುತ್ತೋ ಅದಕ್ಕೆ ನಾನು ಬದ್ಧನಾಗಿದ್ದೇನೆ. ಸದ್ಯಕ್ಕೆ ರಾಜ್ಯದಲ್ಲಿ ಬರಗಾಲವಿದೆ, ಕಾವೇರಿ ಸಮಸ್ಯೆ ಇದೆ. ಇವುಗಳನ್ನು ಬಗೆಹರಿಸುವ ಬಗ್ಗೆ ಚಿಂತಿಸಬೇಕಾಗಿದೆ. ಅದರ ಬಗ್ಗೆ ಗಮನ ಹರಿಸುವುದು ಸೂಕ್ತ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. 

ನವೆಂಬರ್ ತಿಂಗಳ ಅಂತ್ಯದಲ್ಲಿ ನಿಗಮ ಮಂಡಳಿಗಳಿಗೆ ನೇಮಕ ಮಾಡಲಾಗುವುದು. ಇದರಲ್ಲಿ ಶಾಸಕರಿಗೆ ಮತ್ತು ಕಾರ್ಯಕರ್ತರಿಗೆ ಆದ್ಯತೆ ನೀಡಲಾಗುವುದು ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಹೇಳಿದ್ದಾರೆ. ಆದರೆ ಶಾಸಕರು ಹಾಗೂ ಕಾರ್ಯಕರ್ತರು ಇಬ್ಬರಿಗೂ ಒಂದೇ ಬಾರಿಯೇ ನೇಮಕ ಮಾಡಲಾಗುವುದೇ ಅಥವಾ ಬೇರೆ ಬೇರೆ ಸಮಯದಲ್ಲಿ ಮಾಡುವುದೇ ಎಂಬ ಬಗ್ಗೆ ಚಿಂತನೆ ಇದೆ. ಈಗಾಗಲೇ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಎಐಸಿಸಿ ಮುಖಂಡ ವೇಣುಗೋಪಾಲ್ ಬಂದು ಸೂಚನೆ ನೀಡಿದ್ದಾರೆ. ಹೀಗಾಗಿ ನಿಗಮ ಮಂಡಳಿಗಳ ನೇಮಕಕ್ಕೆ ಸಂಬಂಧಿಸಿದಂತೆ ಸಿಎಂ ಮತ್ತು ರಾಜ್ಯಧ್ಯಕ್ಷರು ನಿರ್ಧರಿಸಲಿದ್ದಾರೆ ಎಂದಿದ್ದಾರೆ.

click me!