
ಬೆಂಗಳೂರು, (ಸೆ.24): ಕೊರೋನಾ ಸೋಂಕಿನ ಪ್ರಮಾಣ ದಿನೇ- ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಲಾಕ್‌ಡೌನ್ ಬಗ್ಗೆ ರ್ಚೆಗಳು ಆಗುತ್ತಿವೆ. ಇದರ ಮಧ್ಯೆ ಸಚಿವ ಸಿಟಿ ರವಿ ಅವರು ಲಾಕ್‌ಡೌನ್ ಸುಳಿವು ಕೊಟ್ಟಿದ್ದಾರೆ.
ಇಂದು (ಗುರುವಾರ) ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೋನಾ ನಮ್ಮ ಊಹೆಗೂ ನಿಲುಕದ ವೈರಸ್ ಆಗಿದ್ದು, ಈ ಬಗ್ಗೆ ಯೋಚನೆ ಮಾಡಬೇಕಾದ ಸ್ಥಿತಿ ಬಂದಿದೆ ಎಂದರು.
ಕರ್ನಾಟಕದ ಪ್ರಮುಖ ರಾಜಕೀಯ ನಾಯಕರನ್ನ ಬಲಿ ಪಡೆದ ಕೊರೋನಾ
ಹಲವು ಕೊರೋನಾ ಪ್ರಕರಣದಲ್ಲಿ 90 ವರ್ಷದವರೂ ಸೋಂಕಿನಿಂದ ಗುಣಮುಖರಾಗಿದ್ದಾರೆ. ಆದರೆ 30 ವರ್ಷಗಳ ವಯಸ್ಸಿನವರು ಸಾವನ್ನಪ್ಪುತ್ತಿದ್ದಾರೆ. ಈಗ ಕೊರೋನಾವನ್ನು ನಿರ್ಲಕ್ಷ್ಯ ಮಾಡುವ ಸ್ಥಿತಿ ಇಲ್ಲ. ಅಚಾನಕ್ ಸಾವುಗಳು ಸಂಭವಿಸುತ್ತಿದೆ. ಆದ್ದರಿಂದ ಆರೋಗ್ಯ ಇಲಾಖೆ ನೀಡಿರುವ ಎಲ್ಲಾ ಎಚ್ಚರಿಕೆಗಳನ್ನು ವೈಯುಕ್ತಿಕವಾಗಿಯೂ ಅನುಸರಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂಬ ಸಂದೇಶ ಲಭಿಸಿದೆ ಎಂದು ಹೇಳಿದರು.
ಬುಧವಾರ ಸಿಎಂಗಳ ಸಭೆ ಬಳಿಕ ಮತ್ತೆ 2 ದಿನ ಲಾಕ್‌ಡೌನ್ ಮಾಡಿದ್ರೆ ಹೇಗೆ..? ಆರ್ಥಿಕತೆ ಮೇಲೆ ಹೊಡೆತ ಬೀಳುತ್ತಾ? ಎನ್ನುವ ಚರ್ಚೆಗಳು ಸಹ ನಡೆದಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.