ಪಕ್ಷ ಬಿಟ್ಟವರು ಉದ್ದಾರ ಆಗಲ್ಲ : ಸಿ.ಟಿ.ರವಿ

Published : Nov 12, 2019, 09:10 AM IST
ಪಕ್ಷ ಬಿಟ್ಟವರು ಉದ್ದಾರ ಆಗಲ್ಲ : ಸಿ.ಟಿ.ರವಿ

ಸಾರಾಂಶ

ಪಕ್ಷ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವವ ರು ಉದ್ಧಾರವಾಗುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಬಿಜೆಪಿ ತೊರೆದ ರಾಜು ಕಾಗೆ ಅವರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.   

ಬೆಂಗಳೂರು [ನ.12]: ಸಿದ್ಧಾಂತಕ್ಕಾಗಿ ಪಕ್ಷದಲ್ಲಿರುವವರಿಗೆ 2 ನೇ ಆಯ್ಕೆ ಇರುವುದಿಲ್ಲ, ಆದರೆ, ವೈಯಕ್ತಿಕ ನೆಲೆಯಲ್ಲಿ ಆಲೋಚನೆ ಮಾಡುವವರು ಪಕ್ಷ ತೊರೆಯುವ ಆಲೋಚನೆ ಮಾಡಲಿದ್ದಾರೆ. ಪಕ್ಷ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವವ ರು ಉದ್ಧಾರವಾಗುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಬಿಜೆಪಿ ತೊರೆದ ರಾಜು ಕಾಗೆ ಅವರಿಗೆ ತಿರುಗೇಟು ನೀಡಿದ್ದಾರೆ. 

ಬಿಜೆಪಿ ಕಚೇರಿಯಲ್ಲಿ ಸೋಮವಾರ ಪಕ್ಷದ ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ನಮ್ಮ ಪಕ್ಷವು ಸಿದ್ಧಾಂತ ಹೊಂದಿರುವ ರಾಜಕೀಯ ಪಕ್ಷವಾಗಿದೆ. ಪಕ್ಷದಿಂದ ಹೊರಗೆ ಹೋದವರು ಕೆಡಲಿದ್ದಾರೆಯೇ ಹೊರತು ಪಕ್ಷವಲ್ಲ ಎಂದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಹಿಂದೆ ಇಂತಹ ಹಲವು ಘಟನೆಗಳು ಜರುಗಿವೆ. ಈ ಅನುಭವದ ನಂತರವೂ ಪಕ್ಷದಿಂದ ಹೊರ ಹೋದರೆ ರಾತ್ರಿ ಕಂಡ ಬಾವಿಗೆ ಹಗಲು ಬಿದ್ದಂತೆ. ಬಿಜೆಪಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಉಪಚುನಾವಣೆ ಯಲ್ಲಿ ಕಣಕ್ಕಿಳಿಯಲು ಮುಂದಾಗಿರುವ ಶರತ್ ಬಚ್ಚೇಗೌಡ ಮತ್ತವರ ಕುಟುಂಬಕ್ಕೆ ಪಕ್ಷವು ಸಾಕಷ್ಟು ಅನುಕೂಲ ಮಾಡಿ ಕೊಟ್ಟಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ