ಸಿದ್ರಾಮುಲ್ಲಾಖಾನ್‌ ಅಂತ ಹೆಸರು ಬದಲಿಸಿ: ಸಚಿವ ಅಶ್ವತ್ಥ್‌ ನಾರಾಯಣ

By Govindaraj SFirst Published Dec 4, 2022, 1:30 AM IST
Highlights

ಸಿದ್ದರಾಮಯ್ಯ ಅವರು ಸಿದ್ರಾಮುಲ್ಲಾಖಾನ್‌ ಎಂಬುದು ಇಡೀ ಜಗತ್ತಿಗೆ ಗೊತ್ತು. ಸಿದ್ದರಾಮಯ್ಯ ಅವರ ಹೆಸರನ್ನು ಸಿದ್ರಾಮುಲ್ಲಾ ಖಾನ್‌ ಎಂದು ಬದಲಾಯಿಸಿಕೊಳ್ಳುವುದು ಒಳಿತು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ್‌ ಸಲಹೆ ನೀಡಿದರು.

ಮೈಸೂರು (ಡಿ.04): ಸಿದ್ದರಾಮಯ್ಯ ಅವರು ಸಿದ್ರಾಮುಲ್ಲಾಖಾನ್‌ ಎಂಬುದು ಇಡೀ ಜಗತ್ತಿಗೆ ಗೊತ್ತು. ಸಿದ್ದರಾಮಯ್ಯ ಅವರ ಹೆಸರನ್ನು ಸಿದ್ರಾಮುಲ್ಲಾ ಖಾನ್‌ ಎಂದು ಬದಲಾಯಿಸಿಕೊಳ್ಳುವುದು ಒಳಿತು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ್‌ ಸಲಹೆ ನೀಡಿದರು. ಸಿದ್ದರಾಮಯ್ಯರನ್ನು ಸಿದ್ರಾಮುಲ್ಲಾ ಖಾನ್‌ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನೀಡಿರುವ ಹೇಳಿಕೆಯನ್ನು ಮೈಸೂರಿನಲ್ಲಿ ಶನಿವಾರ ಸಮರ್ಥಿಸಿಕೊಂಡ ಸಚಿವರು, ಇದೇ ವಿಚಾರ ಮುಂದಿಟ್ಟುಕೊಂಡು ಚಿಕ್ಕಮಗಳೂರಿನಲ್ಲಿ ಸಿ.ಟಿ. ರವಿ ನಿವಾಸಕ್ಕೆ ಮುತ್ತಿಗೆ ಹಾಕಿರುವ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.

ಪ್ರತಿಕ್ರಿಯೆಗೆ ನಕಾರ: ರೌಡಿಶೀಟರ್‌ಗಳನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್‌ ನಾಯಕರು ಮಾಡುತ್ತಿರುವ ಆರೋಪಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ್‌ ಅವರು, ಬರೀ ಅದೇ ವಿಚಾರ ಏಕೆ ಕೇಳುತ್ತೀರಿ? ಬೇರೆ ವಿಚಾರಗಳು ಇದ್ದರೆ ಕೇಳಿ ಎಂದರು. ಕಾಂಗ್ರೆಸ್‌ನವರು ನಾವೇ ಅಧಿಕಾರಕ್ಕೆ ಬರುತ್ತೇವೆಂದು ಕನಸು ಕಾಣುತ್ತಿದ್ದಾರೆ. ಅವರು ಪರಸ್ಪರ ಕಿತ್ತಾಡುತ್ತಿದ್ದಾರೆ. ಅವರು ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರೋದಿಲ್ಲ. ನಾವೇ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕೆಂಪೇ​ಗೌ​ಡರಿಗೆ 'ಪ್ರತಿಮೆ' ಗೌರವ ಸಮರ್ಪಣೆ: ಸಚಿವ ಅಶ್ವತ್ಥ್‌ ನಾರಾಯಣ

ಸಿ.ಟಿ.ರವಿ ಮನೆ ಬಳಿ ಘರ್ಷಣೆ: ಶಾಸಕ ಸಿ.ಟಿ.ರವಿ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್‌ ಎಂದು ಜರಿದಿರುವುದನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಶನಿವಾರ ಸಿ.ಟಿ.ರವಿಯವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಇದಕ್ಕೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದಾಗ, ಮಾತಿನ ಚಕಮಕಿ, ಕಲ್ಲು ತೂರಾಟ ನಡೆಯಿತು. ಇದರಿಂದಾಗಿ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಮಧ್ಯ ಪ್ರವೇಶಿಸಿ, ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಶನಿವಾರ ಬೆಳಗ್ಗೆ 11 ಗಂಟೆಯ ವೇಳೆಗೆ ಕಾಂಗ್ರೆಸ್‌ ಕಾರ್ಯಕರ್ತರು ತಾಲೂಕು ಕಚೇರಿ ಆವರಣದಿಂದ ಬಸವನಹಳ್ಳಿ ಮುಖ್ಯರಸ್ತೆಯ ಮೂಲಕ ಶಾಸಕರ ಮನೆಗೆ ಮೆರವಣಿಗೆಯಲ್ಲಿ ತೆರಳುತ್ತಿದ್ದರು. 

ಓಂಕಾರೇಶ್ವರ ದೇವಾಲಯದ ಆವರಣಕ್ಕೆ ಬರುತ್ತಿದ್ದಂತೆ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ವೆಂಕಟೇಶ್‌ ನೇತೃತ್ವದಲ್ಲಿ ಬಿಜೆಪಿಯ ಕಾರ್ಯಕರ್ತರು ಬಸವನಹಳ್ಳಿ ರಸ್ತೆಗೆ ಎಂಟ್ರಿಯಾದರು. ಈ ಸಂದರ್ಭದಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಮುಖಾಮುಖಿಯಾಗಿ, ಪರಸ್ಪರ ವಿರೋಧಿ ಘೋಷಣೆ ಕೂಗಿದರು. ಪೊಲೀಸರು ಮಧ್ಯ ಪ್ರವೇಶಿಸಿ, ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸಿದರು. ಈ ವೇಳೆ, ದಾರಿ ಮಧ್ಯದಲ್ಲಿಯೇ ಕಾಂಗ್ರೆಸ್‌ ಕಾರ್ಯಕರ್ತರು ಬಹಿರಂಗ ಸಭೆ ನಡೆಸಿದರು. ಈ ವೇಳೆ, ಬಿಜೆಪಿ ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ತಳ್ಳಿ ಕಾಂಗ್ರೆಸ್‌ನವರತ್ತ ನುಗ್ಗಲು ಯತ್ನಿಸಿದರು. ಇದರಿಂದಾಗಿ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು, ಅಲ್ಲಿಂದ ಕರೆದುಕೊಂಡು ಹೋದರು.

ಚಿಲುಮೆ ಸಂಸ್ಥೆಯನ್ನು ನಾನು ಬಳಸಿಲ್ಲ: ಸಚಿವ ಅಶ್ವತ್ಥ್‌ ನಾರಾಯಣ

ಈ ಮಧ್ಯೆ, ಕಾಂಗ್ರೆಸ್‌ ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ನೇತೃತ್ವದಲ್ಲಿ ಐದು ಮಂದಿ ಕಾಂಗ್ರೆಸ್‌ ನಾಯಕರು ಬೇರೊಂದು ಮಾರ್ಗದಲ್ಲಿ ಸಿ.ಟಿ.ರವಿ ನಿವಾಸದ ಬಳಿ ಹೋಗುತ್ತಿದ್ದಂತೆ, ಶಾಸಕರ ಮನೆ ಆವರಣದಲ್ಲಿದ್ದ ಚಿಕ್ಕಮಗಳೂರು ನಗರಸಭೆ ಮಾಜಿ ಅಧ್ಯಕ್ಷ ಪುಷ್ಪರಾಜ್‌ ಹಾಗೂ ಇತರರು ಕಾಂಗ್ರೆಸ್‌ ನಾಯಕರ ಮೇಲೆ ಕಲ್ಲು ತೂರಾಟ ನಡೆಸಿದರು. ಬಳಿಕ, ಅಲ್ಲಿಂದ ತೆರಳಿದ ಕಾಂಗ್ರೆಸ್‌ ನಾಯಕರು, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಅಂಶುಮಂತ್‌ ನೇತೃತ್ವದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಕಚೇರಿಗೆ ತೆರಳಿ ಬಿಜೆಪಿ ವಿರುದ್ಧ ದೂರು ನೀಡಿದ್ದಾರೆ.

click me!