ಮಾಜಿ ಗುರು ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟ ಸಚಿವ ಸುಧಾಕರ್..!

By Suvarna News  |  First Published Jan 17, 2021, 3:26 PM IST

ಮಾಜಿ ಮುಖ್ಯಮಂತ್ರಿಗಳಾದ ಎಚ್‌ಡಿ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯನವರ ವಿರುದ್ಧ ಸಚಿವ ಸುಧಾಕರ್ ತಿರುಗೇಟು ನೀಡಿದ್ದಾರೆ.


ಚಿಕ್ಕಬಳ್ಳಾಪುರ, (ಜ.17): ಏಪ್ರಿಲ್ ಬಳಿಕ ಯಡಿಯೂರಪ್ಪರನ್ನು ಅಧಿಕಾರದಿಂದ ತೆಗೆಯುತ್ತಾರೆ ಎನ್ನುವ ಸಿದ್ದರಾಮಯ್ಯನವರ ಹೇಳಿಕೆಗೆ ಆರೋಗ್ಯ ಸಚಿವ ಸುಧಾಕರ್ ತಿರುಗೇಟು ಕೊಟ್ಟಿದ್ದಾರೆ.

ಸಿಎಂ ಬದಲಾವಣೆಯ ಸಿದ್ದರಾಮಯ್ಯ ಹೇಳಿಕೆಗೆ ಚಿಕ್ಕಬಳ್ಳಾಪುರದಲ್ಲಿ ಇಂದು (ಭಾನುವಾರ) ಪ್ರತಿಕ್ರಿಯಿಸಿರುವ ಸುಧಾಕರ್, ಸಿಎಂ ಬದಲಾವಣೆಯ ಪ್ರಶ್ನೇಯೇ ಇಲ್ಲ. ತಮ್ಮ ಮಾರ್ಕೆಟ್ ಹೆಚ್ಚಿಸಿಕೊಳ್ಳಲು ಸಿದ್ದರಾಮಯ್ಯ ಈ ರೀತಿ ಹೇಳುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

Tap to resize

Latest Videos

ಏಪ್ರಿಲ್ ಬಳಿಕ ಯಡಿಯೂರಪ್ಪರನ್ನು ತೆಗೆಯುತ್ತಾರೆ : ಉನ್ನತ ಮೂಲದಿಂದ ಮಾಹಿತಿ

 ಮಾಜಿ ಸಿಎಂ ಆಗಿದ್ದವರು ಇಂತಹ ಹೇಳಿಕೆ ಕೊಡೋದು ಅವರಿಗೆ ಶೋಭೆ ತರೋದಲ್ಲ. ರಾಷ್ಟ್ರೀಯ ಅಧ್ಯಕ್ಷ ನಡ್ಡಾ, ಅಮಿತ್ ಶಾ ಅವರು
ರಾಜ್ಯದಲ್ಲಿ ಒಳ್ಳೆಯ ಆಡಳಿತ ನಡೆಸುತ್ತಿದ್ದಾರೆಂದು ಶ್ಲಾಘಿಸಿದ್ದಾರೆ  ಮುಂದಿನ ಅವಧಿಗೆ ಬಿಎಸ್ ವೈ ಅವರೇ  ಸಿಎಂ ಎಂದು ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಬಿಎಸ್ ವೈ ಸರ್ಕಾರದಲ್ಲಿ ‌ಕೆಲಸ ಆಗಲು ಕಮೀಷನ್ ಕೊಡಬೇಕು ಎನ್ನುವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಬಗ್ಗೆ ಮಾತನಾಡಿದ ಸುಧಾಕರ್,ಯಾವುದೇ ಅಂತಹ ಕೆಲಸ ಆಗಿದ್ರೆ ದಾಖಲೆ ಕೊಡಲಿ. ಸುಮ್ಮನೇ ಹಿಟ್ ಅಂಡ್ ರನ್ ಆಗಬಾರದು ಎಂದು ಎಚ್‌ಡಿಕೆಗೆ ಟಾಂಗ್ ಕೊಟ್ಟರು.

click me!