ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ನಡೆಸಿರುವುದು ರಾಜಕೀಯ ಪ್ರೇರಿತ ಎಂಬ ಆರೋಪಕ್ಕೆ ಸಚಿವ ಡಾ.ಕೆ. ಸುಧಾಕರ್ ಖಾರವಾಗಿಯೇ ತಿರುಗೇಟು ನೀಡಿದ್ದಾರೆ.
ಮೈಸೂರು.(ಅ.05): ಸಿಬಿಐ ದಾಳಿ ರಾಜಕೀಯ ಪ್ರೇರಿತವಾಗಿದ್ದರೆ ಸಿದ್ದರಾಮಯ್ಯ ಅವರನ್ನೇ ಟಾರ್ಗೆಟ್ ಮಾಡಬೇಕಿತ್ತು. ಡಿಕೆಶಿ ಅವರು ಸಿದ್ದರಾಮಯ್ಯಗಿಂತ ದೊಡ್ಡ ನಾಯಕರಲ್ಲ. ಸಿದ್ದರಾಮಯ್ಯ ಸಮುದಾಯದ ನಾಯಕ. ಮಾಜಿ ಮುಖ್ಯಮಂತ್ರಿ ಆಗಿದ್ದವರು. ಆದರೆ ಡಿಕೆಶಿ ಮೇಲೆಯೇ ಏಕೆ ದಾಳಿಯಾಗುತ್ತಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಡಿಕೆಶಿ ಮೇಲಿನ ಸಿಬಿಐ ದಾಳಿ ಬಗ್ಗೆ ಸಮಜಾಯಿಷಿ ನೀಡಿದರು.
ಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿ ಆಗುತ್ತಿದ್ದಂತೆ ಕಿಡಿಕಾರಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ರಾಜಕೀಯ ದುಷ್ಟತನದ ಪರಮಾವಧಿ. ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನ ತೋರಿಸುತ್ತದೆ ಎಂದು ಟ್ವೀಟ್ ಮಾಡಿದ್ದರು.
undefined
CBI ಎದುರಿಸುವುದು ಡಿಕೆಶಿಗೆ ಗೊತ್ತು, ಅವರ ಜೊತೆ ಇದ್ದವನು: ಬಿಜೆಪಿ ನಾಯಕ ಅಚ್ಚರಿ ಹೇಳಿಕೆ
ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸುಧಾಕರ್, ಡಿ.ಕೆ.ಶಿವಕುಮಾರ್ ಮೇಲಿನ ದಾಳಿ ರಾಜಕೀಯ ಪ್ರೇರಿತ ಅಲ್ಲ. ಚುನಾವಣೆಗೂ ಸಿಬಿಐ ದಾಳಿಗೂ ಸಂಬಂಧವೇ ಇಲ್ಲ. ಎರಡು ಕ್ಷೇತ್ರಗಳ ಉಪಚುನಾವಣೆ ನಡೆಯುತ್ತಿದೆ. ಒಂದು ವೇಳೆ ಆ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಸೋಲಾಯಿತು ಅಂತಲೇ ಅಂದುಕೊಳ್ಳೋಣ. ಸರ್ಕಾರಕ್ಕೆ ಆಗುವ ನಷ್ಟ ಏನು? ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಬಹುಮತ ಇದೆ. ಆದ್ದರಿಂದ ಸುಮ್ಮನೆ ರಾಜಕೀಯ ಪ್ರೇರಿತ ಅಂತ ಆರೋಪ ಮಾಡುವುದರಲ್ಲಿ ಅರ್ಥ ಇಲ್ಲ ತಿರುಗೇಟು ನೀಡಿದರು.
ಕೆಪಿಸಿಸಿ ಅಧ್ಯಕ್ಷರಾದ ಮನೆ ಮೇಲೆ ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ.
ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ.
ಐಟಿ, ಇಡಿ, ಸಿಬಿಐ ಇವೆಲ್ಲವೂ ಸ್ವಾಯತ್ತ ಸಂಸ್ಥೆಗಳು. ಡಿಕೆಶಿ ಪ್ರಾಮಾಣಿಕರು ಎಂಬುದನ್ನು ಸಾಬೀತುಪಡಿಸಲು ಇದೊಂದು ಒಳ್ಳೆಯ ಅವಕಾಶ. ತನಿಖೆ ಮೂಲಕ ಸತ್ಯಾಂಶ ಹೊರ ಬೀಳಲಿ ಎಂದರು.
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಅಮಿತ್ ಶಾ ಮೇಲೆ ದಾಳಿ ಮಾಡಿತ್ತು. ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಅವರನ್ನೂ ಜೈಲಿಗೆ ಹಾಕಲಾಗಿತ್ತು. ಹಾಗಾದರೆ ಅದೆಲ್ಲವನ್ನೂ ಕಾಂಗ್ರೆಸ್ ರಾಜಕೀಯ ಪ್ರೇರಿತವಾಗಿಯೇ ಮಾಡಿತು ಅಂದುಕೊಳ್ಳಬಹುದಾ? ಎಂದು ಪ್ರಶ್ನಿಸಿದರು.