ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಶೆಟ್ಟರ್ ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ. ಶೆಟ್ಟರ್ ಹೇಳಿಕೆ ಖಂಡನೀಯ: ಸಚಿವ ಡಾ.ಕೆ.ಸುಧಾಕರ್
ಕೋಲಾರ(ಏ.20): ಕಾಂಗ್ರೆಸ್ ಪಕ್ಷದವರು 70 ವರ್ಷದಿಂದ ಬಡತನ ನಿರ್ಮೂಲನೆ ಮಾಡುವುದಾಗಿ ಹೇಳುತ್ತಿದ್ದಾರೆ. ಆದರೆ, ಅವರು ಬಡವರನ್ನೇ ನಿರ್ಮೂಲನೆ ಮಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿದರು.
ಬಿಜೆಪಿ ಅಭ್ಯರ್ಥಿ ವರ್ತೂರು ಪ್ರಕಾಶ್ ಅವರ ರೋಡ್ ಶೋನಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, 2018ರಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಯಾವುದೇ ಸ್ಥಾನ ಬಂದಿರಲಿಲ್ಲ, ಈ ಬಾರಿ 15 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳು ಉತ್ಸಾಹದಿಂದ ಚುನಾವಣಾ ಪ್ರಚಾರದಲ್ಲಿ ಇದ್ದಾರೆ. ಈ ವಾತಾವರಣ ಗಮನಿಸಿದರೆ 6ರಿಂದ 8 ಸ್ಥಾನ ಗೆಲ್ಲುವ ನಿರೀಕ್ಷೆ ಇದೆ ಎಂದರು.
ಶೆಟ್ಟರ್ ದಾರಿ ತಪ್ಪಿಸಿದ್ದಾರೆ:
undefined
ಮೇ.10ಕ್ಕೆ ಡಬಲ್ ಎಂಜಿನ್ ಸರ್ಕಾರಕ್ಕೆ ಪಾಠ ಕಲಿಸಿ: ಡಿ.ಕೆ.ಶಿವಕುಮಾರ್
ಜಗದೀಶ ಶೆಟ್ಟರ್ ವಿಚಾರವಾಗಿ ಪ್ರತಿಕ್ರಿಯಿಸಿ ಮುಖ್ಯಮಂತ್ರಿ ಆಗಿದ್ದವರು ಸಾಮಾನ್ಯ ಶಾಸಕನಾಗಿದ್ದರೆ ಸರಿ ಹೋಗಲ್ಲ. ಅವರಿಗೆ ದೊಡ್ಡ ಸ್ಥಾನಮಾನ ನೀಡುವ ಇರಾದೆ ಇತ್ತು. ಆದರೆ, ಯಾರು ತಪ್ಪು ಮಾರ್ಗದರ್ಶನ ನೀಡಿದ್ದಾರೆ ಗೊತ್ತಿಲ್ಲ. ಅವರನ್ನು ಮುಖ್ಯಮಂತ್ರಿ ಮಾಡಿದ್ದು ಯಾರು. ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ಮುಖ್ಯಮಂತ್ರಿ ಮಾಡುವುದಾಗಿ ಹೇಳಲಿ ಎಂದು ಹೇಳಿದರು.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಶೆಟ್ಟರ್ ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ. ಶೆಟ್ಟರ್ ಹೇಳಿಕೆ ಖಂಡನೀಯ. ಇವರ ರೀತಿ ಸಂತೋಷ್ ಚಿಲ್ಲರೆ ರಾಜಕಾರಣ ಮಾಡಲ್ಲ. ರಾಜ್ಯದಲ್ಲೂ ಸ್ಪಷ್ಟಬಹುಮತದೊಂದಿಗೆ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ. ಕಳೆದ 75 ವರ್ಷಗಳಲ್ಲಿ ಕಾಂಗ್ರೆಸ್, ಜೆಡಿಎಸ್‌ಗೆ ಮತ ನೀಡಿದ್ದಾರೆ. ಆದರೆ, ಈ ಬಾರಿ ಬಿಜೆಪಿ 73 ಹೊಸ ಮುಖಗಳಿಗೆ ಟಿಕೆಟ್ ನೀಡಿದೆ. 12 ವೈದ್ಯರಿದ್ದು, ಐಎಎಸ್, ಐಪಿಎಸ್ ಅಧಿಕಾರಿಗಳೂ ಇದ್ದಾರೆ ಎಂದು ತಿಳಿಸಿದರು.
ಬಿಜೆಪಿ ವಿರುದ್ಧ ಸಂವಿಧಾನ ತಿದ್ದುಪಡಿ ಆರೋಪ ಮಾಡಿದರು. ಮೀಸಲಾತಿ ರದ್ದು ಮಾಡುವ ಆರೋಪ ಮಾಡಿದರು. ಆದರೆ, ನಾವು ಎಸ್‌ಸಿ, ಎಸ್ಟಿಮೀಸಲಾತಿ ಹೆಚ್ಚಿಸಿದ್ದೇವು. ಕಾಂಗ್ರೆಸ್‌ನಿಂದ ಕುರುಬ ಸಮುದಾಯಕ್ಕೂ ಅನ್ಯಾಯವಾಗಿದೆ. ಒಕ್ಕಲಿಗರ ಹೆಸರಲ್ಲಿ ಮತ ಪಡೆದರು. ಆದರೆ, ಒಕ್ಕಲಿಗರ ಮೀಸಲಾತಿ ಹೆಚ್ಚಿಸಿದ್ದು ಬಿಜೆಪಿ. ಹಿಂದುಳಿದವರು, ದಲಿತರು ಸ್ವಾಭಿಮಾನದಿಂದ ಮತ ನೀಡಬೇಕು ಎಂದು ಹೇಳಿದರು.
ಪ್ರಣಾಳಿಕೆಯಲ್ಲಿನ ಭರವಸೆ ಪೂರ್ಣಗೊಳ್ಳದ ಸಂಬಂಧಿಸಿದ ಪ್ರಶ್ನೆಗೆ, ನಮಗೆ ಪೂರ್ಣ ಬಹುಮತ ಸಿಗಲಿಲ್ಲ. ವಿಶೇಷ ಸಂದರ್ಭದಲ್ಲಿ ಸರ್ಕಾರ ರಚನೆಯಾಯಿತು. ಬಳಿಕ 2 ವರ್ಷ ಕೋವಿಡ್ ಸುಳಿಗೆ ಸಿಲುಕಿದೆವು, ಅತಿವೃಷ್ಟಿಬಂತು. ಆದಾಗ್ಯೂ ಅನೇಕ ಕಾರ್ಯಕ್ರಮಗಳನ್ನು ನೀಡಿದ್ದೇವೆ’ ಎಂದು ಹೇಳಿದರು.
ವರುಣಾದಲ್ಲಿ ಸೋಮಣ್ಣ ಗೆಲ್ಲುವ ಹುರಿಯಾಳು. ಮೇ 13ಕ್ಕೆ ಕಾದು ನೋಡಿ. ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ತಮ್ಮ ಕ್ಷೇತ್ರವನ್ನು ಚೆನ್ನಾಗಿ ಇಟ್ಟುಕೊಂಡಿದ್ದಾರೆ. ಪ್ರಬಲ ಸ್ಪರ್ಧೆ ಕೊಡಲಿ ಎಂಬುದಾಗಿ ಅಶೋಕ ಅವರನ್ನು ಕಣಕ್ಕಿಳಿಸಿದ್ದಾರೆ.
ಬಿಜೆಪಿಗೆ ಓಲೈಕೆ ಎಂಬುದೇ ಗೊತ್ತಿಲ್ಲ. ಪಕ್ಷದ ತತ್ವ ಸಿದ್ಧಾಂತವೇ ಬೇರೆ. ನಮ್ಮದು ಕಾಂಗ್ರೆಸ್ ರೀತಿ ಕುಟುಂಬದ ಪಕ್ಷ ಅಲ್ಲ. ಆಂತರಿಕ ಪ್ರಜಾಪ್ರಭುತ್ವ ಇರುವ ಪಕ್ಷ ಎಂದು ತಿಳಿಸಿದರು.
ರಾಹುಲ್ ಗಾಂಧಿ ಮುಂದೆ ಮುಖ್ಯಮಂತ್ರಿ ನಿಲುವು ಪ್ರಕಟಿಸಿದ ಮಲ್ಲಿಕಾರ್ಜುನ ಖರ್ಗೆ!
ಕೊತ್ತೂರು ಮಂಜುನಾಥ್ ಬಲಿಪಶು
ಕೊತ್ತೂರು ಮಂಜುನಾಥ್ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಸುಧಾಕರ್, ಕಾಂಗ್ರೆಸ್‌ಗೆ ಕೋಲಾರದಲ್ಲಿ ಅಭ್ಯರ್ಥಿಯೇ ಇರಲಿಲ್ಲ. ಕೊತ್ತೂರು ಮಂಜುನಾಥ್‌ರನ್ನು ತಂದು ಬಲಿಪಶು ಮಾಡಿದ್ದಾರೆ, ಹರಕೆಯ ಕುರಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ನಾನು ಆತನನ್ನು ಬುದ್ಧಿವಂತ ಎಂಬುದಾಗಿ ಭಾವಿಸಿದ್ದೆ. ನಾಮಪತ್ರ ಸಲ್ಲಿಕೆಯ ಕೊನೆ ಗಳಿಗೆಯಲ್ಲಿ ಟಿಕೆಟ್ ನೀಡಿದ್ದಾರೆ. ಹೀಗಾಗಿ, ಸದ್ಯ ಕಾಂಗ್ರೆಸ್ ಮೂರನೇ ಸ್ಥಾನದಲ್ಲಿದೆ ಎಂದು ವ್ಯಂಗ್ಯವಾಡಿದರು.
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.