ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಾಗದ ಬಿಜೆಪಿ: ಸಚಿವ ಖಂಡ್ರೆ ವ್ಯಂಗ್ಯ

By Kannadaprabha News  |  First Published Jul 23, 2023, 1:25 PM IST

ಜಾತ್ಯತೀತರು ಎಂದು ಬೀಗುವ ಕುಮಾರಸ್ವಾಮಿ ಬಿಜೆಪಿ ಜತೆ ಸೇರಿದ್ದು, ಬಿಜೆಪಿ ವಿರೋಧ ಪಕ್ಷದ ನಾಯಕನನ್ನೇ ಆಯ್ಕೆ ಮಾಡಲಾಗದಂತಹ ದುಸ್ಥಿತಿಗೆ ತಲುಪಿದೆ ಎಂದು ಅರಣ್ಯ, ಪರಿಸರ ಹಾಗು ಜೈವಿಕ ಇಲಾಖೆ ಸಚಿವ ಈಶ್ವರ ಖಂಡ್ರೆ ತಿಳಿಸಿದರು. 


ನೆಲಮಂಗಲ (ಜು.23): ಜಾತ್ಯತೀತರು ಎಂದು ಬೀಗುವ ಕುಮಾರಸ್ವಾಮಿ ಬಿಜೆಪಿ ಜತೆ ಸೇರಿದ್ದು, ಬಿಜೆಪಿ ವಿರೋಧ ಪಕ್ಷದ ನಾಯಕನನ್ನೇ ಆಯ್ಕೆ ಮಾಡಲಾಗದಂತಹ ದುಸ್ಥಿತಿಗೆ ತಲುಪಿದೆ ಎಂದು ಅರಣ್ಯ, ಪರಿಸರ ಹಾಗು ಜೈವಿಕ ಇಲಾಖೆ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಕಲ ಜನಾಂಗದವರ ಉದ್ಧಾರಕ್ಕೆ ಶ್ರಮಿಸಿದ, ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸಿದ ವೀರಶೈವ ಧರ್ಮಕ್ಕೆ ತನ್ನದೇ ಆದ ಇತಿಹಾಸ ಪರಂಪರೆ ಇದೆ. ವಚನ ಸಾಹಿತ್ಯ ಶ್ರೀಮಂತ ಸಾಹಿತ್ಯವೆನಿಸಿದೆ.

ಸಮಾಜೋ ಧಾರ್ಮಿಕ ಕ್ರಾಂತಿಯನ್ನು ಬಸವಣ್ಣ ಮಾಡಿದರು. ಶರಣರು ಲೋಕ ಕಲ್ಯಾಣಕ್ಕಾಗಿ ದುಡಿದಿದ್ದಾರೆ. ಸಂಸತ್ತಿಗೆ ಮಾದರಿಯಾದ ಅನುಭವ ಮಂಟಪ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ. ನಮ್ಮ ಇತಿಹಾಸ ಪರಂಪರೆಯ ಬಗ್ಗೆ ಇಂದಿನ ಮಕ್ಕಳಿಗೆ ತಿಳಿಸಿಕೊಡಬೇಕಿದೆ ಎಂದರು. ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಪದವಿ, ಅಂಕ ಗಳಿಸುವುದೇ ಶಿಕ್ಷಣ ಅಲ್ಲ, ಸಂಸ್ಕಾರ, ವಿನಯ, ಉತ್ತಮ ಚಾರಿತ್ರ್ಯ ಹೊಂದುವುದು ಶಿಕ್ಷಣವಾಗಿದೆ. ದಿನದ 24ಗಂಟೆ ಬೇಡ 24 ನಿಮಿಷ ಲಿಂಗಪೂಜೆಗೆ ಮೀಸಲಿಡಿ, ಎದೆಯ ಮೇಲೆ ಲಿಂಗ ಧರಿಸಿ. ಜೀವ ಜೀವನ ನೀಡಿದ ತಂದೆ ತಾಯಿಯನ್ನು ಗೌರವಿಸುವುದು ಹಾಗು ಅವರಿಗೆ ಮೊದಲ ಆದ್ಯತೆ ನೀಡುವುದನ್ನು ಎಲ್ಲರೂ ಪಾಲಿಸಬೇಕು ಮತ್ತು ಮಕ್ಕಳಿಗೂ ತಿಳಿಸಿಕೊಡಬೇಕು ಎಂದರು.

Latest Videos

undefined

ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲಗಳು ಇಲ್ಲ: ಮಾಜಿ ಸಂಸದ ಉಗ್ರಪ್ಪ

ಮಹಾಸಭಾದ ಕೇಂದ್ರ ಘಟಕದ ಉಪಾಧ್ಯಕ್ಷ ಬಿ.ಎಸ್‌.ಸಚ್ಚದಾನಂದಮೂರ್ತಿ, ಕೇಂದ್ರ ಘಟಕದ ನಿರ್ದೇಶಕ ಎನ್‌.ಎಸ್‌.ನಟರಾಜು, ಜಿಲ್ಲಾ ಘಟಕದ ಉಪಾಧ್ಯಕ್ಷ ಎನ್‌.ಆರ್‌.ಜಗದೀಶ್‌, ರುದ್ರೇಶ್ವರ ಸಹಕಾರ ಸಂಘದ ಅಧ್ಯಕ್ಷ ಎನ್‌.ಬಿ.ದಯಾಶಂಕರ್‌, ವೈದ್ಯರ ಸಂಘದ ಅಧ್ಯಕ್ಷ ಡಾ.ಎಂ.ಜಯಪ್ರಸಾದ್‌, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ರಾಜಮ್ಮ ಪ್ರಕಾಶ್‌, ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಸುಗ್ಗರಾಜು, ತಾಲೂಕು ಅಧ್ಯಕ್ಷ ಕೆ.ಸಿ.ಅಣ್ಣಪ್ಪ, ಉಪಾಧ್ಯಕ್ಷ ಜಿ.ಲೋಕೇಶ್‌, ಎನ್‌.ರಾಜಶೇಖರ್‌, ನಗರಸಭೆ ಮಾಜಿ ಅಧ್ಯಕ್ಷ ಆರ್‌.ಉಮಾಶಂಕರ್‌, ಯುವ ಘಟಕ ರಾಜ್ಯಕಾರ್ಯದರ್ಶಿ ಕೊಟ್ರೇಶ್‌, ಪ್ರಧಾನ ಕಾರ್ಯದರ್ಶಿ ಎಸ್‌.ಎನ್‌.ರೇಣುಕಾಸ್ವಾಮಿ ಇತರರಿದ್ದರು.

ಪುತ್ತೂರಿನಲ್ಲಿ ‌ಮತ್ತೆ ಹಿಂದುತ್ವ ವರ್ಸಸ್ ಬಿಜೆಪಿ ಮಧ್ಯೆ ಬಿಗ್ ಫೈಟ್!

ಅರಣ್ಯಭೂಮಿ ಹಕ್ಕುಪತ್ರ ಸಮಸ್ಯೆ ಪರಿಹಾರಕ್ಕೆ ಶೀಘ್ರ ಸಭೆ: ಕಂದಾಯ ಸಚಿವರೊಂದಿಗೆ ಸಮಾಲೋಚನೆ ನಡೆಸಿ ಅರಣ್ಯ ಮತ್ತು ಕಂದಾಯ ಭೂಮಿಯ ಜಂಟಿ ಸಮೀಕ್ಷೆ ನಡೆಸುವ ಮೂಲಕ ಕಾನೂನು ವ್ಯಾಪ್ತಿಯಲ್ಲಿ ಹಕ್ಕುಪತ್ರದ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು. ಡಿ.ಬಿ.ಕುಪ್ಪೆ ವ್ಯಾಪ್ತಿಯಲ್ಲಿ 12 ಕುಟುಂಬಗಳು ಅರಣ್ಯವಾಸಿಗಳು ಎಂಬ ಬಗ್ಗೆ ಇರುವ ಗೊಂದಲದ ಕುರಿತಂತೆ ಪರಿಶೀಲನೆ ಮಾಡಿ ಸೂಕ್ತ ಪರಿಹಾರ ಒದಗಿಸಲು ಶೀಘ್ರವೇ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಸಭೆ ನಡೆಸಿ, ಇಂತಹ ಸಮಸ್ಯೆ ಇರುವ ರಾಜ್ಯದ ಎಲ್ಲ ಹಾಡಿ, ಮುಳುಗಡೆ ಪ್ರದೇಶದ ಸಂತ್ರಸ್ತರ ಜಮೀನುಗಳ ಕುರಿತಂತೆ ಪರ್ಯಾಯ ಆಲೋಚಿಸುವುದಾಗಿಯೂ ತಿಳಿಸಿದರು. 3 ಎಕರೆಗಿಂತ ಕಡಿಮೆ ಪ್ರದೇಶದಲ್ಲಿ 1980ಕ್ಕೂ ಮೊದಲು ಉಳಿಮೆ ಮಾಡುತ್ತಿರುವ ಮತ್ತು ಮನೆಕಟ್ಟಿಕೊಂಡು ಮೂರು ತಲೆಮಾರಿನಿಂದ ವಾಸಿಸುತ್ತಿರುವರಿಗೆ ಮಾತ್ರ ಪರಿಹಾರ ಒದಗಿಸುವ ಸಂಬಂಧ ನಿಗದಿತ ಅವಧಿಯಲ್ಲಿ ಅರ್ಜಿ ಸಲ್ಲಿಸಿದ್ದರೆ ಪರಿಶೀಲಿಸಿ ಎಂದು ಅಧಿಕಾರಿಗಳಿಗೆ ಇದೇ ವೇಳೆ ಸೂಚಿಸಿದರು.

click me!