
ಬೀದರ್(ಫೆ.21): ಈ ಭಾಗದ 7 ಜಿಲ್ಲೆಯ ಜನರು ಕಾಂಗ್ರೆಸ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ಕೊಡುಗೆಯನ್ನು ಎಂದೂ ಮರೆಯಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು ಅವರು ಮಂಗಳವಾರ ನಗರದ ನೆಹರು ಕ್ರೀಡಾಂಗಣದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಭಿನಂದನಾ ಸಮಾರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ ಬಡವರ, ಶೋಷಿತರ ಪರ ಹಾಗೂ ಈ ಭಾಗದ ಅಭಿವೃದ್ಧಿಗಾಗಿ 371ಕಲಂ ಜಾರಿಗಾಗಿ ಹೋರಾಟ ಮಾಡಿದ ಹೆಗ್ಗಳಿಕೆ ಅವರದ್ದಾಗಿದೆ ಎಂದರು.
ಸ್ವಸಾಮರ್ಥ್ಯದಿಂದ ಖರ್ಗೆ ಅವರು 9 ಸಲ ಶಾಸಕರಾಗಿ, 2 ಸಲ ಸಂಸದರಾಗಿ ವಿವಿಧ ಖಾತೆಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಈ ಭಾಗದ ಅಭಿವೃದ್ಧಿಗಾಗಿ 371 (ಜೆ) ಜಾರಿಗೆ ತರಲು ಮಾಜಿ ಸಿಎಂ ದಿ. ಧರಂಸಿಂಗ್ ಹಾಗೂ ಮಲ್ಲಿಕಾರ್ಜುನ್ ಖರ್ಗೆ ಅವರ ಪಾತ್ರ ಪ್ರಮುಖವಾಗಿದೆ.
ನ್ಯೂಸ್ ಚಾನಲ್‌ಗಳು ಕಾಂಗ್ರೆಸ್‌ಗೆ ಬೆಂಬಲಿಸಿದರೆ, ಪ್ರಜಾಪ್ರಭುತ್ವ ಉಳಿಯುತ್ತದೆ; ಮಲ್ಲಿಕಾರ್ಜುನ ಖರ್ಗೆ
ದೇಶ ಕವಲು ದಾರಿಯಲ್ಲಿದೆ:
ದೇಶದಲ್ಲಿ ಜಾತಿ ಜಾತಿಗಳ ಮಧ್ಯ ಜಗಳ, ಹಿಂಸೆ, ದ್ವೇಷದ ಭಾವನೆ ಮೂಡಿ ದೇಶ ಈಗ ಕವಲು ದಾರಿಯಲ್ಲಿದೆ ಇದನ್ನು ಹೋಗಲಾಡಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನ್ಯಾಯ ಯಾತ್ರೆ ಮಾಡುತ್ತಿದ್ದಾರೆ. ಬಿಜೆಪಿಯವರು ಸಂವಿಧಾನ ಮೊಟಕುಗೊಳಿಸುವ ಕೆಲಸ ಮಾಡುತ್ತಿದ್ದು, ಚುನಾವಣಾ ಆಯೋಗ, ಸಿಬಿಐ ದುರುಪಯೋಗ, ಜನರಲ್ಲಿ ಭಾವನಾತ್ಮಕ ವಿಷಯಗಳನ್ನು ಕೆರಳಿಸುತ್ತಾ, ಪ್ರಜಾಪ್ರಭುತ್ವಕ್ಕೆ ದ್ರೋಹ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದರು.
ನಮ್ಮ ಸರ್ಕಾರದ ಕೊಟ್ಟಂತಹ ಅನೇಕ ಯೋಜನೆಗಳನ್ನು ದೊಡ್ಡ ದೊಡ್ಡ ಕಂಪನಿಗಳನ್ನು ದೇಶದ ಆಸ್ತಿಯನ್ನು ಮಾರಾಟ ಮಾಡುತ್ತಿದ್ದಾರೆ. ಹೀಗಾಗಿ ಮುಂಬರುವ ಚುನಾವಣೆ ನಮಗೆಲ್ಲ ಸವಾಲಾಗಿವೆ. ಇಲ್ಲಿರುವ ಸಂಸದರು ಏನೂ ಮಾಡಿಲ್ಲ. ಸಿಪೆಟ್ ಕಾಲೇಜು ಮಾಡುತ್ತೇನೆಂದು ತರಬೇತಿ ಕೇಂದ್ರ ಮಾಡಿದ್ದಾರೆ. ಎಫ್ಎಂ ಮಾಡಿಲ್ಲ, ಸೋಲಾರ್ ಪಾರ್ಕ ಮಾಡಿಲ್ಲ, ಇದ್ದ ಬಿಎಸ್ಎಸ್‌ಕೆ ಕಾರ್ಖಾನೆ ಬಂದ್ ಮಾಡಿಸಿದ್ದಾರೆ. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಕ್ಷೇತ್ರದ ಅಭಿವೃದ್ಧಿಗಾಗಿ ಏನು ಮಾಡಿದ್ದೀರಿ ಎಂದು ಕೇಂದ್ರ ಸಚಿವರಿಗೆ ಕೇಳಿರಿ ಎಂದು ಜನರಿಗೆ ತಿಳಿಸಿ ಭ್ರಷ್ಟ ಕೋಮುವಾದಿ ಬಿಜೆಪಿ ತೊಲಗಿಸಲು ಎಲ್ಲರೂ ಸಜ್ಜಾಗಬೇಕು ಎಂದು ಸಚಿವ ಖಂಡ್ರೆ ಕರೆ ಕೊಟ್ಟರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.